Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮೈಸೂರು ವಿಮಾನ ನಿಲ್ದಾಣ’ ವಿಸ್ತರಣೆ...

‘ಮೈಸೂರು ವಿಮಾನ ನಿಲ್ದಾಣ’ ವಿಸ್ತರಣೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ಸಚಿವರ ಭೇಟಿ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ10 Jan 2025 7:27 PM IST
share
‘ಮೈಸೂರು ವಿಮಾನ ನಿಲ್ದಾಣ’ ವಿಸ್ತರಣೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ಸಚಿವರ ಭೇಟಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಕೇಂದ್ರ ವಿಮಾನಯಾನ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಜ.15ರಂದು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು ಜಿಲ್ಲೆಯ ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರ ಜೊತೆ ಮುಖ್ಯಮಂತ್ರಿ ಸಭೆ ನಡೆಸಿ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರಕಾರ ಪೂರ್ಣಗೊಳಿಸಲಿದೆ. ಇನ್ನೂ 46 ಎಕರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಮೈಸೂರಿನ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಯ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಎಲ್ಲ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ’ ಎಂದು ಕೇಳಿದರು.

ಹೊಸ ಬಡಾವಣೆ ಮಾಡುವಾಗ ವಿದ್ಯುತ್ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಮೈಸೂರು ಮಹಾನಗರ ಪಾಲಿಕೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ) ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಶಿಥಿಲಗೊಂಡಿರುವ ಲಾನ್ಸ್‌ ಡೌನ್ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಎಲ್ಲ ಕಾನೂನು ತೊಡಕುಗಳನ್ನು ಬಗೆಹರಿಸಬೇಕು. ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು 25 ಕೋಟಿ ರೂ. ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಿ. ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಮುಖ್ಯಮಂತ್ರಿ ಹೇಳಿದರು.

ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ 670 ಕೋಟಿ ರೂ. ಡಿಪಿಆರ್ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ಮುಖ್ಯಮಂತ್ರಿ ಸೂಚಿಸಿದರು.

ಅಂಬೇಡ್ಕರ್ ಭವನ ಕಾಮಗಾರಿಯನ್ನು 23.83 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಬೇಕು. ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಅವರು ತಿಳಿಸಿದರು.

ಮೈಸೂರು ನಗರದಲ್ಲಿ 46 ಕಿ.ಮೀ. ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ. ಐಟಿ ಪಾರ್ಕ್ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ ಕೈಗೊಳ್ಳಬೇಕು. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕರೆ ಜಮೀನು ಸ್ವಾಧೀನ ಕುರಿತಾಗಿ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಫಿಲ್ಮ್ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯ(ಮ್ಯೂಸಿಯಂ) ಆಗಿ ಪರಿವರ್ತಿಸಲು 13 ಕೋಟಿ ರೂ. ಯೋಜನೆ ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಯತೀಂದ್ರ ಸಿದ್ದರಾಮಯ್ಯ, ಸಂಸದ ಯದುವೀರ್ ಒಡೆಯರ್ ಸೇರಿದಂತೆ ಇನ್ನಿತರ ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X