Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮ್ಯುಟೇಶನ್, ಭೂ ಪರಿವರ್ತನೆ...

ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಅನಗತ್ಯ ವಿಳಂಬವಾಗದಿರಲಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ29 Jan 2025 7:30 PM IST
share
ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಅನಗತ್ಯ ವಿಳಂಬವಾಗದಿರಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವರು ಹಾಗೂ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65ರಷ್ಟು ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಆಟೋ ಮ್ಯುಟೇಶನ್ ಮೂಲಕ ಇದು ಸಾಧ್ಯವಾಗಿದೆ ಎಂದರು.

ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಿ ಎಂದು ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ನಮ್ಮ ಸರಕಾರ ಬಂದಾಗ 10 ಸಾವಿರಕ್ಕೂ ಮಿಕ್ಕ ಅವಧಿ ಮೀರಿದ ಪ್ರಕರಣಗಳಿದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ ಎಂದು ಸಿಎಂಗೆ ದಾಖಲೆ ಸಮೇತ ವಿವರಿಸಿದರು.

ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಲ್ಲಿ ಕೇವಲ ಒಂದು ವರ್ಷದಲ್ಲಿ ಶೇ.36ರಷ್ಟು ಪ್ರಕರಣಗಳ ವಿಲೇವಾರಿ ಮಾಡಲಾಗಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

ನಂತರ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬರೀ ಹೆಚ್ಚೆಚ್ಚು ಪ್ರಮಾಣದ ವಿಲೇವಾರಿ ಸಾಲದು, ಗುಣಮಟ್ಟದ ವಿಲೇವಾರಿಯಾದರೆ ಮಾತ್ರ ಮೇಲ್ಮನವಿಗಳಿಗೆ ಕಡಿವಾಣ ಬೀಳುತ್ತದೆ. ಈ ದಿಕ್ಕಲ್ಲಿ ಹೆಚ್ಚಿನ ಗಮನ ಹರಿಸಿ ಎಂದು ಸಚಿವ ಕೃಷ್ಣಬೈರೇಗೌಡರಿಗೆ ಸೂಚನೆ ನೀಡಿದರು.

ನಗರ ಪ್ರದೇಶಗಳಲ್ಲಿ ಮಾಸ್ಟರ್ ಪ್ಲಾನ್ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು. ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 3 ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು. ಆದಷ್ಟು ಬೇಗನೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಬೇಕು. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆ ಸಚಿವ ಕೃಷ್ಣಬೈರೇಗೌಡ ಮಾತನಾಡಿ, 10 ವರ್ಷ, 5 ವರ್ಷಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಭಾಗದಷ್ಟು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ. ತಹಶೀಲ್ದಾರ್, ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ ಪ್ರಕರಣಗಳು ಸಮರೋಪಾದಿಯಲ್ಲಿ ವಿಲೇವಾರಿ ಆಗುತ್ತಿವೆ. ಆದರೆ, ಉಪ ವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ವಿಲೇವಾರಿ ವೇಗ ಕಡಿಮೆ ಇದೆ ಎಂದು ತಾಂತ್ರಿಕ ಕಾರಣಗಳ ಸಮೇತ ಸಿಎಂಗೆ ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅದನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಉಪವಿಭಾಗಾಧಿಕಾರಿ ನ್ಯಾಯಾಲಯಗಳ ಕಾರ್ಯವೈಖರಿ ಸುಧಾರಿಸಬೇಕು. ಈ ಬಗ್ಗೆ ಉಪ ವಿಭಾಗಾಧಿಕಾರಿಗಳಿಗೆ ಕೊನೆಯ ಎಚ್ಚರಿಕೆ ಕೊಡಿ ಎಂದು ಸೂಚಿಸಿದರು.

ನಂತರ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ 9,947 ಪ್ರಕರಣಗಳು ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದವು. ಈಗ ಇದರ ಪ್ರಮಾಣ ಕೇವಲ 6 ಸಾವಿರಕ್ಕೆ ಇಳಿದಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿಗೆ 18 ವಿಶೇಷ ಉಪ ವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಮೀನು ಖಾತೆಗೆ ಆಧಾರ್ ಸೀಡಿಂಗ್ ಮಾಡಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು.

ನಿಗದಿತ ಅವಧಿಯೊಳಗೆ ಬಿ ಖಾತಾ ಪ್ರಕ್ರಿಯೆ ಪೂರ್ಣಗೊಳಿಸಿ..!

ರಾಜ್ಯದಲ್ಲಿ ಇದುವರೆಗೆ 2.22 ಕೋಟಿ ಖಾತೆಗಳಿಗೆ ಆಧಾರ ಸೀಡಿಂಗ್ ಮಾಡಲಾಗಿದ್ದು, ಇದರಿಂದ ನಕಲಿ ದಾಖಲೆ ಸೃಷ್ಟಿಸುವುದನ್ನು ತಡೆಯಲು ಸಾಧ್ಯವಾಗಿದೆ. ಭೂ ಪರಿವರ್ತನೆಯಾಗದೆ ವಾಣಿಜ್ಯ ಉದ್ದೇಶಗಳಿಗೆ ಜಮೀನು ಬಳಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ಇದರಿಂದ ಸಾಧ್ಯವಾಗಿದೆ. ಅನಧಿಕೃತ ಬಡಾವಣೆಗಳಿಗೆ ಖಾತಾ ನೀಡುವುದನ್ನು ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಿದ್ದೇವೆ. ಒಂದು ಅವಧಿಗೆ ಬಿ ಖಾತಾ ನೀಡುವ ಪ್ರಕ್ರಿಯೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಇನ್ನು ಮುಂದೆ ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೌತಿ ಖಾತೆ ಅಭಿಯಾನ ಕಾರ್ಯ ತ್ವರಿತಗೊಳಿಸಿ..!

ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆ ಇನ್ನೂ ನಿಧನ ಹೊಂದಿದವರ ಹೆಸರಿನಲ್ಲಿಯೇ ಇದೆ. ಪೌತಿ ಖಾತೆ ಅಭಿಯಾನದ ಮೂಲಕ ಮಾಲಕರ ಹೆಸರಿಗೆ ಜಮೀನು ಮಾಡುವ ನೋಂದಣಿ ಮಾಡುವ ಕಾರ್ಯವನ್ನು ತ್ವರಿತಗೊಳಿಸಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X