Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಭದ್ರಾ ಮೇಲ್ದಂಡೆʼ ಅಗತ್ಯ ಅನುದಾನ...

ʼಭದ್ರಾ ಮೇಲ್ದಂಡೆʼ ಅಗತ್ಯ ಅನುದಾನ ಒದಗಿಸಿ ಪೂರ್ಣಗೊಳಿಸಲು ಕ್ರಮ : ಸಿಎಂ ಸಿದ್ದರಾಮಯ್ಯ

► ʼಮೇಕುದಾಟುʼ ಪೂರ್ವ ಸಿದ್ದತೆ ಅಂತಿಮ, ಕೇಂದ್ರದ ಅನುಮತಿ ದೊರೆತ ಕೂಡಲೇ ಅನುಷ್ಠಾನ ► ರಾಜ್ಯದ ಪ್ರಮುಖ ಅಣೆಕಟ್ಟು ಗೇಟುಗಳ ಪರಿಶೀಲನೆಗೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ7 March 2025 12:05 PM IST
share
ʼಭದ್ರಾ ಮೇಲ್ದಂಡೆʼ ಅಗತ್ಯ ಅನುದಾನ ಒದಗಿಸಿ ಪೂರ್ಣಗೊಳಿಸಲು ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಆಯವ್ಯಯ ಮಂಡಿಸುತ್ತಿದ್ದಾರೆ.

ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ: 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯ ಸರಪಳಿ: 241 ಕಿ.ಮೀ ವರೆಗೆ ಹರಿಸಲಾಗುವುದು. ಈ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಷೋಷಿಸಿದರು.

ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ (Consent Award) ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು. ಅಲ್ಲದೇ, 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದರು.

ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಸರ್ಕಾರದಿಂದ ತೀರುವಳಿಗಳನ್ನು ನಿರೀಕ್ಷಿಸಿ ಈಗಾಗಲೇ ಯೋಜನಾ ಕಾಮಗಾರಿಗಳನ್ನು ಕೆಲವು ಷರತ್ತುಗಳೊಂದಿಗೆ ಗುತ್ತಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಹೆಳಿದರು.

ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಕೃಷ್ಣಾ ಕಣಿವೆಯ ಅನುಷ್ಠಾನ ಹಂತದಲ್ಲಿರುವ ಆಧುನೀಕರಣ ಹಾಗೂ ಏತ ನೀರಾವರಿ ಯೋಜನೆಗಳನ್ನು PMKSY – AIBP ಯೋಜನೆಯಡಿ ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು. ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದಾಗಿ ನೀರಿನ ಸಂಗ್ರಹಣೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಕೊಪ್ಪಳ ಜಿಲ್ಲೆಯಲ್ಲಿ ನವಲಿ ಸಮತೋಲನಾ ಜಲಾಶಯ ನಿರ್ಮಾಣವೂ ಸೇರಿದಂತೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು. ರಾಜ್ಯದ ಪ್ರಮುಖ ಅಣೆಕಟ್ಟು ಗೇಟುಗಳ ಸದೃಢತೆಯನ್ನು ತಾಂತ್ರಿಕ ಪರಿಶೀಲನೆಗೊಳಪಡಿಸಿ ಅಗತ್ಯ ಕಂಡುಬಂದಲ್ಲಿ ಗೇಟುಗಳನ್ನು ದುರಸ್ತಿಗೊಳಿಸಲು ಮತ್ತು ಬದಲಿಸಲು ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು ಎಂದರು.

ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದು ಘೋಷಿಸಿದರು.

ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಾದ ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್‌, ಕಿಂಡಿ ಅಣೆಕಟ್ಟು, ಏತ ನೀರಾವರಿ, ನಿಷ್ಕ್ರಿಯ ಯೋಜನೆಗಳ ಪುನರುಜ್ಜೀವನ ಇತ್ಯಾದಿ ಯೋಜನೆಗಳಡಿ ಒಟ್ಟಾರೆ 2,000 ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X