Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ...

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ : ಸಿಎಂ ಸಿದ್ದರಾಮಯ್ಯ

ಪ್ರಸಕ್ತ ವರ್ಷದಲ್ಲಿ ʼಗೃಹಲಕ್ಷ್ಮಿʼ ಯೋಜನೆಗೆ 28,608 ಕೋಟಿ ರೂ. ಅನುದಾನ

ವಾರ್ತಾಭಾರತಿವಾರ್ತಾಭಾರತಿ7 March 2025 4:15 PM IST
share
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ ಎಂದರು.

ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು. ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಎಂದರು.

Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು. ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಿದರು.

ವಿಶೇಷ ಪಾಲನಾ ಯೋಜನೆಯಡಿ ಎಚ್‌.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಧನಸಹಾಯವನ್ನು 1,000 ರೂ.ನಿಂದ 2,000 ರೂ.ಗೆ ಹೆಚ್ಚಿಸಲಾಗುವುದು. ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1,750 ರೂ.ಗಳಿಗೆ ಹೆಚ್ಚಿಸಲಾಗುವುದು. ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂ. ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 62,033 ಕೋಟಿ ರೂ. ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X