Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ...

ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇಲ್ಲದಂತೆ ಕಡ್ಡಾಯ ಭರ್ತಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ29 April 2025 6:20 PM IST
share
ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇಲ್ಲದಂತೆ ಕಡ್ಡಾಯ ಭರ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಕಡ್ಡಾಯವಾಗಿ ಭರ್ತಿ ಮಾಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1 ಸಾವಿರ ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ, ಲ್ಯಾಪ್‍ಟಾಪ್ ಹಾಗೂ ಕಂದಾಯ ಇಲಾಖೆಯ ಎರಡು ವರ್ಷದ ʼಸಾಧನೆಯ ಹಾದಿʼ ಪುಸ್ತಕ ಬಿಡುಗಡೆ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶ ಗ್ರಾಮಗಳ ದೇಶವಾಗಿದ್ದು, ಕೃಷಿ ಪ್ರಮುಖವಾದ ಉದ್ಯೋಗವಾಗಿದೆ. ಹೆಚ್ಚು ಶೇ.60 ಕ್ಕೂ ಹೆಚ್ಚು ಜನ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಜಮೀನುಗಳ ಲೆಕ್ಕ ಇಡುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ. ಹಳ್ಳಿಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ದಾಖಲಾತಿಗಳು ಸರಿಯಾಗಿರಬೇಕು. ದಾಖಲೆಗಳನ್ನು ಬಹಳ ಕರಾರುವಾಕ್ಕಾಗಿ ಇಡುವುದು ಅವಶ್ಯಕ. ಆಧುನಿಕ ನಾಡಿನಲ್ಲಿ ತಂತ್ರಜ್ಞಾನ, ವಿಜ್ಞಾನ ಬೆಳೆದಿದೆ. ಈಗ ಪ್ರತಿಯೊಂದೂ ಡಿಜಿಟಲೀಕರಣವಾಗಿದೆ. ಆನ್‍ಲೈನ್‍ನಲ್ಲಿ ದಾಖಲಾತಿಗಳನ್ನು ಪಡೆಯುವ ವ್ಯವಸ್ಥೆ ಬಂದ ನಂತರ ನಾವು ಯಾವುದೇ ಕಾರಣಕ್ಕೂ ತಪ್ಪುಗಳಿಗೆ ಅವಕಾಶ ನೀಡಬಾರದು ಎಂದರು.

ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ ಬಹಳ ಮಹತ್ವದ್ದು, ರೈತರಿಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಹತ್ತಿರದ ಸಂಬಂಧವಿದ್ದು, ಪ್ರತಿಯೊಬ್ಬ ರೈತರ ಪರಿಚಯ ಅವರಿಗಿರುತ್ತದೆ. ಅವರ ಭೂಮಿಯ ಕುರಿತು ಮಾಹಿತಿ ಗೊತ್ತಿರುತ್ತದೆ. ಅವರ ಪರಿಚಯವಿಟ್ಟುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸುವುದು ನಿಮ್ಮ ಕೆಲಸ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಗ್ರಾಮ ಆಡಳಿತಾಧಿಕಾರಿಗಳು ಉತ್ತಮ ನಡತೆ, ಸಂಪರ್ಕವನ್ನು ಹೊಂದಿದ್ದರೆ ರೈತರು ನಿಮ್ಮ ಮಾತನ್ನು ಕೇಳುತ್ತಾರೆ. ಗ್ರಾಮ ಆಡಳಿತಾಧಿಕಾರಿಗಳು ಒಳ್ಳೆ ರೀತಿಯ ಕೆಲಸ ಮಾಡಿಕೊಟ್ಟರೆ ಅವರ ಮೇಲೂ ಗೌರವ ವಿರುತ್ತದೆ. ಜನರ ಕೆಲಸ ದೇವರ ಕೆಲಸ ಎಂದು ನೆನೆಪಿಟ್ಟುಕೊಳ್ಳಬೇಕು. ನಾವಿರುವುದೇ ಜನರ ಸೇವೆಗಾಗಿ ಎನ್ನುವುದನ್ನು ಮರೆಯಬಾರದು. ಆರು ಲಕ್ಷ ಜನ ಸರ್ಕಾರಿ ನೌಕರರು ಅವರಿಗಾಗಿಯೇ ಇರುವುದು. ರಾಜಕಾರಣಿಗಳು, ಜನರಿಂದ ಆಯ್ಕೆಯಾದರೆ, ಸರಕಾರದಿಂದ ಆಯ್ಕೆಯಾದ ಸರಕಾರಿ ನೌಕರರು ಜನಸೇವೆಯನ್ನು ಅವರ ಧ್ಯೇಯವಾಗಿಸಬೇಕು ಎಂದು ಸೂಚಿಸಿದರು.

ಅದೇ ರೀತಿ,ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿರುವುದರಿಂದ ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಲು ಸಾಧ್ಯವಾಗುತ್ತದೆ. ರೈತರ ಮನೆಮನೆಗೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ ಮಂಜೂ 9834 ಮಂಜೂರಾದ ಹುದ್ದೆಗಳಿಗೆ ಲ್ಯಾಪಟಾಪ್ ನೀಡಲು ಸರಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ.

ಯಾವುದೇ ಕಾರಣಕ್ಕೆ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು. ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರಿಗೆ ಅನುಕೂಲ ಕಲ್ಪಿಸುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ, ಶಾಸಕ ಶ್ರೀನಿವಾಸ್, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್, ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಸೇರಿದಂತೆ ಪ್ರಮುಖರಿದ್ದರು.

ಉದಾಸೀನತೆ ಬಿಟ್ಟು, ದುಡಿಯಿರಿ: ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ. ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ತಿಳಿಸಿ ಸಿದ್ದರಾಮಯ್ಯ ಶುಭಹಾರೈಸಿದರು.

ಶಾನುಭೋಗರ ಕತೆ ಹೇಳಿದ ಸಿಎಂ: ಈ ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ಮಾಡುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು.

ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಗೆ ನಿಂತಾಗ ನನ್ನ ತಂದೆ ಶಾನುಬೋಗರ ಬಳಿ ನನ್ನನ್ನು ಚುನಾವಣೆಗೆ ನಿಲ್ಲಿಸಬೇಕೋ ಬೇಡವೋ ಎಂದು ಕೇಳಿ ನಿಲ್ಲಬಾರದು ಎಂದು ಹಠ ಮಾಡಿದ್ದರು, ನಂತರ ನಾನು ಅವರ ಮಾತು ಕೇಳದೆ ಸ್ಪರ್ಧಿಸಿ ಗೆದ್ದಿದ್ದೆ ಎಂದು ಸಿಎಂ ಸಿದ್ದರಾಮಯ್ಯ ನೆನೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X