Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು...

ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು : ಸಿಎಂ ಸಿದ್ದರಾಮಯ್ಯ

"ಕೇಂದ್ರ ಸರಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ"

ವಾರ್ತಾಭಾರತಿವಾರ್ತಾಭಾರತಿ14 May 2025 4:05 PM IST
share
ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರಕಾರದಿಂದ ಮೇಲಿನ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ , ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.

ರಾಜ್ಯ ಸರಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು.

15ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ. ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.

ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು.

ರಾಜ್ಯ ಸರಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X