Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ...

ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರುವುದು ಸರಿಯಲ್ಲ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 May 2025 8:48 PM IST
share
ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರುವುದು ಸರಿಯಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಆಮೇಲೆ ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆಕ್ಷೇಪಿಸಿದ್ದಾರೆ.

ಬುಧವಾರ ಇಲ್ಲಿನ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ ‘ಒಳಕೋವೆ’ ಕೃತಿ ಬಿಡುಗಡೆಗೊಳಿಸಿ, ಐದು ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು, ಅದು ತೋರಿಕೆ ಇರಬಾರದು. ಇವತ್ತಿನ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ ಎಂದು ಸಿದ್ದರಾಮಯ್ಯ ಹೇಳಿದರು.

ಇವತ್ತಿನ ವ್ಯವಸ್ಥೆ ಸುಧಾರಣೆಗೆ ವಿರುದ್ಧವಾದದ್ದು. ವ್ಯವಸ್ಥೆ ಜೊತೆ ರಾಜಿ ಮಾಡಿಕೊಂಡರೆ ಏನಾಗತ್ತೆ, ರಾಜಿ ಮಾಡಿಕೊಳ್ಳದಿದ್ದರೆ ಏನಾಗುತ್ತದೆ ಎನ್ನುವ ಅರಿವು ನನಗೆ ಇದೆ. ಈ ಅರಿವು ಎಲ್ಲರಿಗೂ ಇರಬೇಕು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ, ವರ್ಗ ವ್ಯವಸ್ಥೆಗೆ ಚಲನೆ ಇದೆ. ಅದಕ್ಕೇ ಬುದ್ದ, ಬಸವ, ಅಂಬೇಡ್ಕರ್ ಎಷ್ಟು ಹೋರಾಡಿದರೂ ಜಾತಿ ಹೋಗಿಲ್ಲ. ಜಾತಿ ಎನ್ನುವುದು ಸಾಮಾಜಿಕ ವಾಸ್ತವ. ಸಾಮಾಜಿಕ ನ್ಯಾಯದ ಪರವಾದ ನಿಜವಾದ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುವವರು ಹೆಚ್ಚೆಚ್ಚು ಬರಬೇಕು ಎಂದು ಅವರು ನುಡಿದರು.

ಎಂ.ಎಸ್.ಮಣಿ ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆ ಉಳ್ಳವರು. ಇವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಲೇಖಕಿಯರಾದ ಡಾ.ಶರೀಫಾ, ಡಾ.ನಳಿನಾಕ್ಷಿ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ನಾಗವೇಣಿ, ಹಿರಿಯ ಪತ್ರಕರ್ತ ಸಂಗಮ್ ದೇವ್ ಹಾಗೂ ಸಂಪಾದಕ ಶಿವಲಿಂಗಪ್ಪ ಸೇರಿ ಐದು ಮಂದಿ ಸಾಧಕರಿಗೆ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಐವತ್ತು ವರ್ಷಗಳ ಕಾಲ ಪತ್ರಿಕಾ ವೃತ್ತಿಯ ಕುರಿತಾದ ನಾನಾ ಕ್ಷೇತ್ರಗಳಲ್ಲಿ ಶ್ರಮಿಸಿದ ಕೊಪ್ಪಳ ವಿವಿ ಕುಲಪತಿ ಪ್ರೊ ಬಿ.ಕೆ.ರವಿ ಪತ್ರಿಕಾ ವೃತ್ತಿಯ 50 ಸಂಭ್ರಮದ ಹಿನ್ನಲೆ ಜೀವಮಾನದ ಸಾಧನೆಗಾಗಿ ಸಿಎಂ ಸನ್ಮಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X