Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಿಸರವನ್ನು ಪಠ್ಯಕ್ರಮವಾಗಿಸುವ...

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರಕಾರ ಮಾಡಲಿದೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 Jun 2025 2:50 PM IST
share
ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರಕಾರ ಮಾಡಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2025 ನ್ನು ಉದ್ಘಾಟಿಸಿ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಪರಿಸರವನ್ನು ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂದರು.

ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ:

ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ :

ಬೆಂಗಳೂರು ಒಂದರಲ್ಲೇ ದಿನವೊಂದಕ್ಕೆ 900 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. 1.50 ಜನಸಂಖ್ಯೆಯನ್ನು ಬೆಂಗಳೂರು ಹೊಂದಿದೆ. ಜನಸಂಖ್ಯೆ ಬೆಳೆದಷ್ಟು ಪರಿಸರದ ಮೇಲೆ ಹಾನಿ ಉಂಟಾಗುತ್ತಿದೆ. ದೇಶ ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿದೆ. ಜನಸಂಖ್ಯೆಯ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು :

ಭೂಮಿಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೇ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು.

ಪ್ಲಾಸ್ಟಿಕ್ ಗೆ ಪರ್ಯಾಯ :

ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು ಎಂದರು.

ಗಿಡ ಮರಗಳನ್ನು ನೆಟ್ಟು ಬೆಳೆಸೋಣ :

ಪುನರ್ಬಳಕೆ ಮತ್ತು ಮರುಬಳಕೆ ಪ್ರೋತ್ಸಾಹಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಲ್ಲಿಸೋಣ, ಸಾರ್ವಜನಿಕ ಸಾರಿಗೆ ಉಪಯೋಗಿಸೋಣ, ಹತ್ತಿರದ ಸ್ಥಳಗಳಿಗೆ ನಡೆದು ಹೋಗುವ ಅಥವಾ ಸೈಕಲ್ ಬಳಕೆ ಮಾಡೋಣ, ಹನಿ ಹನಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳೋಣ , ನೀರನ್ನು ಪೋಲು ಮಾಡದೇ ಜವಾಬ್ದಾರಿಯುತವಾಗಿ ಬಳಸೋಣ. ಸಾಧ್ಯವಾದ ಮಟ್ಟಿಗೆ ಪ್ರತಿಯೊಬ್ಬರೂ ಕರ್ತವ್ಯ ಎಂದು ಅರಿತು 'ನನ್ನ ಜೀವ ನನ್ನ ಮರ ಎಂದು ಗಿಡ ಮರಗಳನ್ನು ನೆಟ್ಟು ಬೆಳೆಸೋಣ' ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವರಾದ ಬೈರತಿ ಸುರೇಶ್, ಡಾ.ಕೆ.ಸುಧಾಕರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X