Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಚೋದನೆ, ದ್ವೇಷ ಭಾಷಣಗಳ ವಿರುದ್ಧ...

ಪ್ರಚೋದನೆ, ದ್ವೇಷ ಭಾಷಣಗಳ ವಿರುದ್ಧ ಕಡ್ಡಾಯವಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಸಿಎಂ ಸಿದ್ದರಾಮಯ್ಯ

"1983ರಿಂದ ಶಾಸಕನಾಗಿದ್ದೀನಿ, ಇಂತಹ ಕಾಲ್ತುಳಿತ ಪ್ರಕರಣವನ್ನು ನಾನು ನೋಡಿರಲಿಲ್ಲ"

ವಾರ್ತಾಭಾರತಿವಾರ್ತಾಭಾರತಿ27 Jun 2025 8:56 PM IST
share
ಪ್ರಚೋದನೆ, ದ್ವೇಷ ಭಾಷಣಗಳ ವಿರುದ್ಧ ಕಡ್ಡಾಯವಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಚೋದನೆ, ದ್ವೇಷ ಭಾಷಣ ಮಾಡುವವರ ವಿರುದ್ಧ ಕಡ್ಡಾಯವಾಗಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ದೂರು ಬಂದ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ಶುಕ್ರವಾರ ನಗರದ ನೃಪತುಂಗ ರಸ್ತೆಯಲ್ಲಿನ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಾರವಾಗಿ ಎಚ್ಚರಿಸಿದರು.

ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರುವುದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಸಿದ್ದರಾಮಯ್ಯ ಸೂಚಿಸಿದರು.

ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಅಗತ್ಯ ಎಲ್ಲ ಕ್ರಮ ಕೈಗೊಳ್ಳಬೇಕು. ಡ್ರಗ್ ಮಾರುವವರ ಅಂಗಡಿ, ವ್ಯಾಪಾರದ ಪರವಾನಗಿ ರದ್ದುಗೊಳಿಸುವ ಅಗತ್ಯ ಬಿದ್ದರೆ ಮಾಡಿ. ಅಪರಾಧ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತವಾಗಿ, ಪರಿಣಾಮಕಾರಿಯಗಿ, ಸರಿಯಾದ ಸಮಯಕ್ಕೆ ಸಲ್ಲಿಸದಿರುವುದೂ ದೊಡ್ಡ ವೈಫಲ್ಯ. ಇಂಥದ್ದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಪೊಲೀಸ್ ಇಲಾಖೆಯ ಬೇಡಿಕೆಗಳಲ್ಲಿ ಬಹುತೇಕ ಈಡೇರಿಸಿ ಸಾಕಷ್ಟು ಹಣ, ಅನುದಾನ ಒದಗಿಸಿದ್ದೇನೆ. ನಿಮ್ಮಿಂದ ಸಮಾಜದ ನೆಮ್ಮದಿ, ಕಾನೂನು-ಸುವ್ಯವಸ್ಥೆಯನ್ನು ನಿರೀಕ್ಷಿಸುತ್ತೇನೆ. ಶಕ್ತರಿಗೂ, ಅಶಕ್ತರಿಗೂ ನ್ಯಾಯ ಒದಗಿಸುವುದು ಪೊಲೀಸರ ಜವಾಬ್ದಾರಿ. ಕಾನೂನು ಎಲ್ಲರಿಗೂ ಒಂದೇ. ಯಾವುದೇ ಪ್ರಕರಣದ ತನಿಖೆಯಲ್ಲಿಯೂ ನಾನು ತಲೆ ಹಾಕುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ರೈತರು, ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ವಿರುದ್ಧ ದೌರ್ಜನ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಬಾಲ್ಯವಿವಾಹ, ಪೋಕ್ಸೋ, ಅತ್ಯಾಚಾರ, ಭ್ರೂಣಹತ್ಯೆಗಳನ್ನು ನೂರಕ್ಕೆ ನೂರು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜೊತೆ ಸೇರಿ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಪೊಲೀಸ್ ಇಲಾಖೆಯಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ ಶೇ.15.64ರಷ್ಟು ಹುದ್ದೆಗಳನ್ನು, ಒಳ ಮೀಸಲಾತಿ ಬಳಿಕ ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇದಕ್ಕೆ ತಕ್ಕ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಹಿಂದಿನ 2 ವರ್ಷದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ, ಕೊಲೆ-ದರೋಡೆ-ಮನೆ ಗಳ್ಳತನ ಸೇರಿ ಇತರೆ ಅಪರಾಧಗಳು ಕಡಿಮೆ ಆಗಿರುವುದನ್ನು ಇಲಾಖೆ ಕೊಟ್ಟಿರುವ ಅಂಕಿ ಅಂಶಗಳಿಂದ ಗೊತ್ತಾಗಿದೆ. ಆದರೆ, ಸಂಭವಿಸಿದ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತ ಸಮಯಕ್ಕೆ ಸಲ್ಲಿಸುವ ಜೊತೆಗೆ ಎಫ್‍ಐಆರ್ ಅನ್ನು ತಕ್ಷಣ ದಾಖಲಿಸಬೇಕು, ತನಿಖೆಯ ಗುಣಮಟ್ಟ ಹೆಚ್ಚಿಸಿ ಅಪರಾಧಿಗಳನ್ನು ಕ್ಷಿಪ್ರವಾಗಿ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಚೇರಿಗಳಲ್ಲೇ ಕುಳಿತಿರಬಾರದು. ಸಮಾಜದ ನೆಮ್ಮದಿ ಕಾಪಾಡಲು ಪೊಲೀಸ್ ಕಾರ್ಯಕ್ಷಮತೆ ಬಹಳ ಮುಖ್ಯ. ಇದು ಪ್ರಜಾರಾಜ್ಯ. ಅವರ ಕಷ್ಟ-ಸುಖ ಕೇಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗೃಹ ಇಲಾಖೆ ಎಸಿಎಸ್ ಗೌರವ್ ಗುಪ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಉಪಸ್ಥಿತರಿದ್ದರು.

ಮಂಗಳೂರು ಮಾತ್ರ ಹದಗೆಟ್ಟಿದ್ದೇಕೆ?: ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿವೆ. ಇತರೆ ಜಿಲ್ಲೆಗಳಲ್ಲಿ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಯಾರೇ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದರು.

ಕಾಲ್ತುಳಿತ ಪ್ರಕರಣದಲ್ಲಿ ಅಧಿಕಾರಿಗಳಿಂದ ತಪ್ಪಾಗಿದ್ದು ನಿಜ ತಾನೇ?: ‘ನಾನು 1983ರಿಂದ ಶಾಸಕನಾಗಿ, ಸಿಎಂ ಕೂಡ ಆಗಿದ್ದೇನೆ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನೋಡಿರಲಿಲ್ಲ. ಗುಪ್ತಚರ ಇಲಾಖೆ ಸರಿಯಾದ ಮಾಹಿತಿ ನೀಡದೆ 11 ಮಂದಿ ಮೃತಪಟ್ಟರು. ಕಾಲ್ತುಳಿತ ಘಟನೆ ನಡೆದ ದಿನ ಮಧ್ಯಾಹ್ನ 3:50ಕ್ಕೇ ಸಾವುಗಳು ಸಂಭವಿಸಿದ್ದವು. ಆದರೂ, ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವೇ? 5:45ಕ್ಕೆ ನಾನಾಗೇ ಕೇಳಿದಾಗಲೂ ಒಂದೇ ಸಾವಾಗಿದೆ ಎನ್ನುವ ಮಾಹಿತಿ ನೀಡಿದರು. ಅಷ್ಟೊತ್ತಿಗಾಗಲೇ 11 ಸಾವು ಆಗಿಬಿಟ್ಟಿತ್ತು. ಹಿರಿಯ ಅಧಿಕಾರಿ ಸರಿಯಾದ ಮಾಹಿತಿಯನ್ನು ತಕ್ಷಣ ನಮಗೆ ನೀಡಿದ್ದರೆ ಕ್ರೀಡಾಂಗಣದ ಕಾರ್ಯಕ್ರಮ ರದ್ದುಗೊಳಿಸಬಹುದಿತ್ತು. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳ ಅಮಾನತು ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರವಿದೆ. ಆದರೆ ತಪ್ಪಾಗಿದ್ದು ನಿಜ ತಾನೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X