ಚನ್ನರಾಯಪಟ್ಟಣ ರೈತರ ಭೂಸ್ವಾಧೀನ : ಕಾನೂನು ತಜ್ಞರ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಷಯ ಕುರಿತು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಪೂರ್ವಭಾವಿ ಸಭೆ ನಡೆಸಿದರು.
ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಪರ-ವಿರೋಧದ ಎರಡು ಗುಂಪುಗಳಿದ್ದು, ಈ ಬಗ್ಗೆ ಒಮ್ಮತದ ನಿಲುವು ತೆಗೆದುಕೊಳ್ಳುವುದರ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಂತಿಮ ಅಧಿಸೂಚನೆ ಆಗಿರುವ ಹಿನ್ನೆಲೆ ಹಿಂತಿರುಗಿ ರೈತರಿಗೆ ಭೂಮಿ ನೀಡಬೇಕಾದ ಸನ್ನಿವೇಶದಲ್ಲಿ ಡಿನೋಟಿಫೈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಭೈರತಿ ಸುರೇಶ್, ಎನ್.ಎಸ್. ಭೋಸರಾಜು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇರಿದಂತೆ ಹಲವು ಕಾನೂನು ತಜ್ಞರು ಭಾಗಿಯಾಗಿದ್ದರು.
Next Story





