Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‍ಸಿ-ಎಸ್‍ಟಿಗಳ ಕಲ್ಯಾಣಕ್ಕೆ ಈವರೆಗೆ...

ಎಸ್‍ಸಿ-ಎಸ್‍ಟಿಗಳ ಕಲ್ಯಾಣಕ್ಕೆ ಈವರೆಗೆ 2.97ಲಕ್ಷ ಕೋಟಿ ಹಣ ಖರ್ಚು: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Aug 2025 7:38 PM IST
share
ಎಸ್‍ಸಿ-ಎಸ್‍ಟಿಗಳ ಕಲ್ಯಾಣಕ್ಕೆ ಈವರೆಗೆ 2.97ಲಕ್ಷ ಕೋಟಿ ಹಣ ಖರ್ಚು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ.16: ಕರ್ನಾಟಕದ ಇತಿಹಾಸದಲ್ಲಿ ಎಸ್‍ಸಿ-ಎಸ್‍ಟಿ ವರ್ಗಗಳ ಕಲ್ಯಾಣ ಯೋಜನೆಗಳಿಗೆ ಒಟ್ಟು 2.97ಲಕ್ಷ ಕೋಟಿ ರೂ.ನಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1ರಷ್ಟು ಅನುದಾನ ನೀಡಬೇಕಿದೆ ಎಂದರು.

ಆದರೆ, 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು 2.97 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಚಿವರು ಹಾಗೂ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

2024ರಲ್ಲಿ ಎಸ್ಸಿಎಸ್ಪಿ-ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗೆ 38,793 ಕೋಟಿ ರೂ. ಬಿಡುಗಡೆಯಾಗಿದ್ದು, 38,717 ಕೋಟಿ ರೂ. ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಆದರೆ, ಕೇಂದ್ರ ಸರಕಾರದಿಂದ ಬರಬೇಕಿದ್ದ 880 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ತಕ್ಷಣಕ್ಕೆ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚಿಸಿದರು.

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿಗೊಂಡು 10 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯ ಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಹಿಂದಿನ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು ಎಂದು ಸಿದ್ದರಾಮಯ್ಯ ತಿಳಿಸಿದರು.

ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಹಿಂದಿನ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‍ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‍ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರಕಾರದ ಯೋಜನೆಗಳು ಶೇ.100ರಷ್ಟು ಎಸ್‍ಸಿ/ಎಸ್‍ಟಿ ಜನಸಂಖ್ಯೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ದೇವದಾಸಿ ಪುನರ್‌ ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್ ಮೊದಲ ವಾರದಿಂದ ಪುನರ್ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ದೇವದಾಸಿಯರೂ ಸೇರಿದಂತೆ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಹಿಂದಿನ ಸಾಲಿನಲ್ಲಿ ಎಸ್ಸಿಎಸ್ಪಿ-ಟಿಎಸ್ಪಿ ವಸತಿ ಯೋಜನೆಗಳಿಗೆ 1,086 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶೇ.100ರಷ್ಟು ಪ್ರಗತಿ ಸಾಧಿಸಲೇಬೇಕು: ‘ಪ್ರಸಕ್ತ ವರ್ಷದಲ್ಲಿ 42,017 ಕೋಟಿ ರೂ. ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಆದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯವಾಗಬೇಕು’

-ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X