Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 Oct 2025 6:40 PM IST
share
ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ವಿರೋಧಪಕ್ಷಗಳು ಭವಿಷ್ಯಕಾರರಲ್ಲ :

ದಸರಾ ವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ಸರ್ಕಾರಿ ನೌಕರರ ತುಟ್ಟಿಭತ್ಯ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X