Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಹಿಷ್ಣುತೆ-ಸಹಬಾಳ್ವೆ ಬಸವಣ್ಣನವರ ಮತ್ತು...

ಸಹಿಷ್ಣುತೆ-ಸಹಬಾಳ್ವೆ ಬಸವಣ್ಣನವರ ಮತ್ತು ನನ್ನ ಬದುಕಿನ ಬದ್ಧತೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Oct 2025 4:06 PM IST
share
ಸಹಿಷ್ಣುತೆ-ಸಹಬಾಳ್ವೆ ಬಸವಣ್ಣನವರ ಮತ್ತು ನನ್ನ ಬದುಕಿನ ಬದ್ಧತೆ : ಸಿಎಂ ಸಿದ್ದರಾಮಯ್ಯ
► "ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪನೆ" ► "ನಮ್ಮ ಮೆಟ್ರೋಗೆ ʼಬಸವ ಮೆಟ್ರೋʼ ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು" ► 'ಬಸವ ಸಂಸ್ಕೃತಿ ಅಭಿಯಾನ-2025'ರ ಸಮಾರೋಪ ಸಮಾರಂಭ

ಬೆಂಗಳೂರು : ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಿಶ್ವಗುರು ಬಸವಣ್ಣ ಅವರನ್ನು ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು, ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದರು‌.

ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.

ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ನಾನು ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ ಆದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದರು‌.

ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿಗಳಾಗುತ್ತೇವೆ. ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ನಾವೆಲ್ಲರೂ ಶೂದ್ರರು. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು.

ಮುಂದಿನ ವರ್ಷ ವಚನ ವಿಶ್ವ ವಿದ್ಯಾಲಯ ಸ್ಥಾಪನೆ: ಸಿಎಂ

ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನಮ್ಮ ಮೆಟ್ರೊಗೆ ʼಬಸವ ಮೆಟ್ರೊ' ಎಂದು ನಾಮಕರಣ; ಕೇಂದ್ರಕ್ಕೆ ಶಿಫಾರಸು :

ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸನ್ಮಾನ :

ವಿಶ್ವಗುರು ಬಸವಣ್ಣ ʼಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿ ಒಂದು ವರ್ಷ ಪೂರೈಸಿದ ಪ್ರಯುಕ್ತ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷರಾದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಸನ್ಮಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X