Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ...

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ8 Oct 2025 1:07 PM IST
share
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
71ನೇ ವನ್ಯಜೀವಿ ಸಪ್ತಾಹ, ಮುಖ್ಯಮಂತ್ರಿಗಳ ಪದಕ ಪ್ರಧಾನ ಸಮಾರಂಭ

ಬೆಂಗಳೂರು : ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು.

ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ.

ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ರಾಯಬಾರಿ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರಧಾನ ಸಮಾರಂಭ ಮತ್ತು 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಅಮೋಘ ಸೇವೆ ಸಲ್ಲಿಸಿದ ಅರಣ್ಯ ಸಿಬ್ಬಂದಿಗಳಿಗೆ ಪದಕ ನೀಡಿ, ಗೌರವಿಸಿದೆ. pic.twitter.com/aStqH1PKXe

— Siddaramaiah (@siddaramaiah) October 8, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X