Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ; ಪ್ರತೀ...

ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ; ಪ್ರತೀ ಜಿಲ್ಲೆಯಲ್ಲಿ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 Oct 2025 2:40 PM IST
share
ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ; ಪ್ರತೀ ಜಿಲ್ಲೆಯಲ್ಲಿ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ
► "ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ, ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ" ► ಮೈಸೂರಿನಲ್ಲಿ ಆಯೋಜಿಸಿದ್ದ ʼಉದ್ಯೋಗ ಮೇಳʼ ಉದ್ಘಾಟನೆ

ಮೈಸೂರು : ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸುತ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು ಎಂದರು.

ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58892 ಮಂದಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22819 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ವಿವರಿಸಿದರು.

ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 120563 ಅಭ್ಯರ್ಥಿಗಳು ಭಾಗವಹಿಸಿ, 24391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48232 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ಪಟ್ಟಿ ನೀಡಿದರು.

ಹಿಂದಿನ ಸರಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರಕಾರದಲ್ಲಿ ಖಾಲಿ ಇದ್ದ 28000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X