Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ...

ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ : ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ28 Oct 2025 3:38 PM IST
share
ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ : ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಪೊಲೀಸ್ ಸಿಬ್ಬಂದಿಗೆ ನೂತನ ಕ್ಯಾಪ್‌ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಗೆ ನೂತನ ಪೀಕ್ ಕ್ಯಾಪ್‌ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ದ ನಿಲುವು ತಳೆಯಬೇಕು ಎಂದರು.

ಮಂಗಳೂರು ಹತೋಟಿಗೆ ಬಂದಿದ್ದು ನಮ್ಮ ಅಧಿಕಾರಿಗಳಿಂದಲೇ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದು ಕರೆ ನೀಡಿದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದರು.

ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದರು.

ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಕರೆ ನೀಡಿದರು.

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಸಿಎಂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X