Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಬ್ಬು ಬೆಳೆಗಾರರಿಗೆ ಟನ್‌ಗೆ 3,300 ರೂ....

ಕಬ್ಬು ಬೆಳೆಗಾರರಿಗೆ ಟನ್‌ಗೆ 3,300 ರೂ. ಕೊಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ7 Nov 2025 7:31 PM IST
share
ಕಬ್ಬು ಬೆಳೆಗಾರರಿಗೆ ಟನ್‌ಗೆ 3,300 ರೂ. ಕೊಡಲು ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ
“ಕೇಂದ್ರದಿಂದ ಕಾರ್ಖಾನೆ ಮಾಲೀಕರಿಗೆ-ರೈತರಿಗೆ ಇಬ್ಬರಿಗೂ ಅನ್ಯಾಯ; ಕೇಂದ್ರಕ್ಕೆ ನಿಯೋಗ”

ಬೆಂಗಳೂರು : ಕಳೆದ ಒಂಭತ್ತು ದಿನಗಳಿಂದ ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ನಡೆಯುತ್ತಿದ್ದ ಕಬ್ಬು ಬೆಳೆ ಹೋರಾಟಗಾರರ ಬೇಡಿಕೆಗಳಿಗೆ ರಾಜ್ಯ ಸರಕಾರ ಸ್ಪಂದಿಸಿದ್ದು, ಪ್ರತಿಟನ್ ಕಬ್ಬಿಗೆ 3,300 ರೂಪಾಯಿ ಪರಿಷ್ಕೃತ ದರ ನಿಗದಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸತತ ಏಳು ಗಂಟೆಗಳ ಕಾಲ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಬೇಡಿಕೆ ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ದರ ನಿಗದಿ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ರಾಜ್ಯ ಸರಕಾರ ಮತ್ತು ಕಾರ್ಖಾನೆ ಮಾಲಕರು ಜತೆಗೂಡಿ ತಲಾ 50 ರೂ., ಸೇರಿಸಿ ರೈತರಿಗೆ ಟನ್ ಕಬ್ಬಿಗೆ 3,300 ರೂಪಾಯಿ ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಪ್ರಕಟಿಸಿದರು.

ಸಚಿವ ಸಂಪುಟ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲಕರು ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಇಂದಿನ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚಕ್ಕೆ ಹೊರತುಪಡಿಸಿ, ಶೇ.11.25 ಇಳುವರಿ ಕಬ್ಬಿಗೆ 3,250 ರೂ., ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರಕಾರ 50 ರೂ., ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ 100 ರೂ.ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲ ಸಕ್ಕರೆ ಕಾರ್ಖಾನೆ ಮಾಲಕರು ಒಪ್ಪಿಗೆ ಸೂಚಿಸಿದ್ದಾರೆ. ಇಳುವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆ.ಟನ್ ಕಬ್ಬು ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಉತ್ಪಾದನೆ ಅಂದಾಜಿದೆ. ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲ ಇಳುವರಿಗೂ 100 ರೂ., ಹೆಚ್ಚಳ ದರ ಅನ್ವಯವಾಗಲಿದೆ ಎಂದು ಅವರು ಹೇಳಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಬೇಕೆಂದು ಎಲ್ಲ ಸಕ್ಕರೆ ಕಾರ್ಖಾನೆ ಮಾಲಕರಿಗೆ ಮನವಿ ಮಾಡಿದ್ದು, ರೈತರು ಸಹ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೆಲವು ದಿನಗಳಿಂದ ರೈತರು ಕೇಂದ್ರ ಸರಕಾರ ನಿಗದಿಪಡಿಸಿರುವ ಎಫ್‍ಆರ್‍ಪಿ(ನ್ಯಾಯಯುತ ಮತ್ತು ಲಾಭದಾಯಕ ದರ) ಸರಿಯಿಲ್ಲ, ಇನ್ನೂ ಹೆಚ್ಚು ನೀಡಬೇಕೆಂದು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ ಮತ್ತು ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಪ್ರತಿಭಟನಾ ನಿರತ ರೈತ ಮುಖಂಡರೊಂದಿಗೆ ಬೆಳಗಾವಿ ಜಿಲ್ಲಾಧಿಕಾರಿ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಗಳು ವಿಫಲವಾದ ಬಳಿಕ ಸಂಪುಟದ ಸಹದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳು ರೈತ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಆಯಾ ವ್ಯಾಪ್ತಿಯ ಎಲ್ಲ ಸಕ್ಕರೆ ಕಾರ್ಖಾನೆ ಮಾಲಕರೊಂದಿಗೆ ಮಾತುಕತೆ ನಡೆಸಿ, ಶೇ.10.5 ಇಳುವರಿ ಇರುವ ಕಬ್ಬಿಗೆ 3,100 ರೂ. ಮತ್ತು ಶೇ.11.25 ಇಳುವರಿ ಇರುವ ಕಬ್ಬಿಗೆ 3,200 ರೂ., ದರ ನಿಗದಿಪಡಿಸಲು ಸಕ್ಕರೆ ಕಾರ್ಖಾನೆಗಳಿಗೆ ತಿಳಿಸಿದಾಗ ಮಾಲಕರು ಒಪ್ಪಿಗೆ ನೀಡಿದ್ದರು. ಆದರೆ ಈ ದರಕ್ಕೆ ಪ್ರತಿಭಟನಾ ನಿರತ ರೈತರು ಒಪ್ಪಿಗೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ವಿಸ್ತಾರವಾಗಿ ಚರ್ಚೆ ನಡೆಸಿ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವ ಕುರಿತು ಪ್ರಧಾನಮಂತ್ರಿ ಅವರಿಗೆ ಪತ್ರ ಬರೆದಿದ್ದೇವೆ ಎಂದು ಅವರು ಉಲ್ಲೇಖಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಪ್ರಮುಖರಿದ್ದರು.

ಒಂದೇ ಒಂದು ಸರಕಾರಿ ಕಾರ್ಖಾನೆ: ‘ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿದ್ದು, ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು, ಒಂದು ಕಾರ್ಖಾನೆ ಮಾತ್ರ ಸರಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದರು.

ಕೇಂದ್ರದ ಬಳಿ ಸರ್ವಪಕ್ಷ ನಿಯೋಗ: ‘ಸಕ್ಕರೆ ಎಂಎಸ್ಪಿ ಹೆಚ್ಚಳ, ಎಥೆನಾಲ್ ಹಂಚಿಕೆ ಹೆಚ್ಚಳ, ಸಕ್ಕರೆ ರಫ್ತು ಮಿತಿಯನ್ನು ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಸಂಬಂಧ ಕೇಂದ್ರ ಸರಕಾರವನ್ನು ಒತ್ತಾಯಿಸಲು ಕೇಂದ್ರಕ್ಕೆ ಸರ್ವಪಕ್ಷ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗ ಕರೆದುಕೊಂಡು ಹೋಗಲು ರಾಜ್ಯ ಸರಕಾರ ಸಿದ್ಧ ಎಂದು ಹೇಳಿದ್ದೇವೆ. ಇದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರತ್ಯೇಕ ಸಭೆ: ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಲಾಠಿ ಪ್ರಹಾರ ನಡೆಸಿಲ್ಲ: ‘ಕಬ್ಬಿಗೆ ಬೆಲೆ ನಿಗದಿಪಡಿಸಲು ಆಗ್ರಹಿಸಿ ಬೆಳಗಾವಿಯ ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆಂಬ ಆರೋಪ ಸುಳ್ಳು. ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ. ಆದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದನ್ನು ಸಹಿಸಲು ಸಾಧ್ಯವಿಲ್ಲ. ಹತ್ತರಗಿ ಟೋಲ್ ಬಳಿ ರೈತರು ಪ್ರತಿಭಟನೆ ವೇಳೆ ಕಿಡಿಗೇಡಿಗಳು ಹಲವು ವಾಹನಗಳನ್ನು ಜಖಂಗೊಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಹೋದ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದು, ಇದರಿಂದ ನಾಲ್ಕು ಕೆಎಸ್ಸಾರ್ಟಿಸಿ ಬಸ್‍ಗಳ ಗಾಜು ಪುಡಿಯಾಗಿವೆ. ಪೊಲೀಸರ ತಲೆಗೆ ಗಾಯವಾಗಿದ್ದು, ಡಿವೈಎಸ್ಟಿಯೊಬ್ಬರ ಕೈ ಮುರಿದಿದೆ’

ಡಾ.ಜಿ.ಪರಮೇಶ್ವರ್ ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X