Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸ್ವಾತಂತ್ರ್ಯ ಹೋರಾಟದ ಮಹತ್ವ...

ಸ್ವಾತಂತ್ರ್ಯ ಹೋರಾಟದ ಮಹತ್ವ ಗೊತ್ತಿಲ್ಲದವರು ನೆಹರೂ ಅವರನ್ನು ಟೀಕಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Nov 2025 2:43 PM IST
share
ಸ್ವಾತಂತ್ರ್ಯ ಹೋರಾಟದ ಮಹತ್ವ ಗೊತ್ತಿಲ್ಲದವರು ನೆಹರೂ ಅವರನ್ನು ಟೀಕಿಸುತ್ತಾರೆ : ಸಿಎಂ ಸಿದ್ದರಾಮಯ್ಯ
ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ, ಪೋಷಕರ-ಶಿಕ್ಷಕರ ಮಹಾಸಭೆ

ಬೆಂಗಳೂರು : ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ "ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗೆ ಇತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, 65000 ಕೋಟಿ ರೂಪಾಯಿಗಳನ್ನು ಶಿಕ್ಷಣಕ್ಕೆ ನೀಡುತ್ತಿದೆ ಎಂದರು.

ನೆಹರೂ ತಮ್ಮ ಯೌವ್ವನದ 3200 ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದರು. ದೇಶದ ಪ್ರಧಾನಿಯಾಗಿ ಕೃಷಿ, ವಿಜ್ಞಾನ, ನೀರಾವರಿ, ತಂತ್ರಜ್ಞಾನ ಸೇರಿ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. IIT, ಏಮ್ಸ್ ಸೇರಿ ಅಣೆಕಟ್ಟು, ಕೈಗಾರಿಕೆಗಳನ್ನೆಲ್ಲಾ ಮಾಡಿದ್ದು ನೆಹರೂ.‌ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜೊತೆ ಕೈಜೋಡಿಸಿದ್ದವರು ನೆಹರೂ ಮತ್ತು ಗಾಂಧಿಯನ್ನು ಟೀಕಿಸುತ್ತಾರೆ. ಇದನ್ನು ಮಕ್ಕಳು ಮತ್ತು ಶಿಕ್ಷಕರು ಹಾಗೂ ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದರು.

ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಇರುವ ಮಕ್ಕಳ ಮೇಲೆ ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಕನಸನ್ನು ನೆಹರೂ ಕಟ್ಟಿಕೊಂಡಿದ್ದರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಈಗ ಈ ವೇದಿಕೆಯಲ್ಲಿ ಸನ್ಮಾನಿತರಾದ ವಿದ್ಯಾರ್ಥಿಗಳೆಲ್ಲರೂ ಬಡ ಕುಟುಂಬದಿಂದ ಬಂದು ಸರಕಾರಿ ಶಾಲೆಗಳಲ್ಲಿ ಓದಿದವರು. ಆದ್ದರಿಂದ ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರಕಾರ ಶ್ರಮಿಸುತ್ತಿದೆ. ನಾನೂ ಸರಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೀನಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X