Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ...

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿ ಬಿಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Nov 2025 10:30 PM IST
share
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿ ಬಿಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ಡಿಕೆಶಿ ಬರೆದಿರುವ "ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು" ಕೃತಿ ಬಿಡುಗಡೆ

ಬೆಂಗಳೂರು : ಬಿಜೆಪಿ-ಜೆಡಿಎಸ್ ಸಂಸದರು ಕರ್ನಾಟಕ ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬರೆದಿರುವ "ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು" ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುವೆ ಎಂದು ಅವರು ತಿಳಿಸಿದರು.

ಮಹದಾಯಿ, ಕೃಷ್ಣ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ದ ತೀರ್ಮಾನಗಳು ಇನ್ನೂ ಆಗಬೇಕಿದೆ ಎಂದು ಸಿದ್ದರಾಮಯ್ಯ ನುಡಿದರು.

ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಹೆಚ್ಚು ಅನುಕೂಲ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದು ಸಿದ್ದರಾಮಯ್ಯ ವಿವರಿಸಿದರು.

ಮತ್ತೊಂದು ಕಡೆ ಕೃಷ್ಣ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.

ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು 'ನೀರಿನ ಹೆಜ್ಜೆ' ಜನರಿಗೆ ತಿಳಿಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಬಗ್ಗೆ ಬಿಜೆಪಿ ಮುಖಂಡರೂ ಮಾತನಾಡುತ್ತಿದ್ದಾರೆ. ಆದರೆ, ಕರ್ನಾಟಕ ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್‌ ಪಕ್ಷವೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದು ಸಿದ್ದರಾಮಯ್ಯ ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X