Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Nov 2025 3:28 PM IST
share
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ : ಸಿಎಂ ಸಿದ್ದರಾಮಯ್ಯ
2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ, ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ , ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ ಎಂದರು. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.

ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣಗೌಡರು, ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು, ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದರು.

ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ .ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂ.ಬೇಡಿಕೆಯನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆಯಿತ್ತರು.

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಡಾಧಾರ, ಯು.ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಚಿವ ಭೈರತಿ ಸುರೇಶ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಮಂತರಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X