Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ...

ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಲ್ಲ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 Dec 2025 8:36 PM IST
share
ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಲ್ಲ : ಸಿಎಂ ಸಿದ್ದರಾಮಯ್ಯ
ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು : ಉತ್ತಮ ತರಬೇತಿ, ಒಳ್ಳೆಯ ತರಬೇತುದಾರು ಹಾಗೂ ಅಗತ್ಯ ಸೌಲಭ್ಯಗಳಿದ್ದರೆ ಒಲಂಪಿಕ್ಸ್‌ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ನಗರದ ಯುವನಿಕ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು 2023ರ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ರೀಡಾಪಟುಗಳು ತಮ್ಮ ಗುರಿ ಸಾಧನೆಗೆ ಶ್ರಮಿಸಬೇಕು. ಏಳು ಕೋಟಿ ಕನ್ನಡಿಗರಿರುವ ಕರ್ನಾಟಕದಿಂದ ಪದಕ ಗೆಲ್ಲುವುದು ಅಸಾಧ್ಯವೇನಲ್ಲ. ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಪದಕ ವಿಜೇತರಿಗೆ 6ಕೋಟಿ ರೂ.ನಗದು ಬಹುಮಾನ, ಶ್ರೇಣಿ 1 ಅಥವಾ 2ರಲ್ಲಿ ಸರಕಾರ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4ಕೋಟಿ ರೂ., ಕಂಚಿನ ಪದಕ ವಿಜೇತರಿಗೆ 3ಕೋಟಿ ರೂ.ನಗದು ಬಹುಮಾನ ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಎರಡು ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಒಟ್ಟು 30 ಜನರಿಗೆ ನೀಡಲಾಗಿದ್ದು, 4 ಲಕ್ಷಗಳ ನಗದು ಬಹುಮಾನವನ್ನು ಪ್ರಶಸ್ತಿ ಒಳಗೊಂಡಿದೆ. ನಗದು ಬಹುಮಾನದ ಮೊತ್ತವನ್ನು ನನ್ನ ಅವಧಿಯಲ್ಲಿಯೇ ಹೆಚ್ಚಿಸಲಾಗಿದೆ. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಉತ್ತಮ ಕ್ರೀಡಾಪಟುಗಳನ್ನು ರಾಜ್ಯಕ್ಕೆ ನೀಡುವ ತರಬೇತುದಾರರಿಗೆ ಒಟ್ಟು 9 ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುತ್ತಿದ್ದು, 3 ಲಕ್ಷ ರೂ.ಗಳ ನಗದು ಬಹುಮಾನವನ್ನು ಒಳಗೊಂಡಿದೆ. ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕರನ್ನು ಗುರುತಿಸಿ ಒಟ್ಟು 15 ಕ್ರೀಡಾರತ್ನ ಪ್ರಶಸ್ತಿಗಳನ್ನು ನೀಡಲಾಗಿದ್ದು, 2 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿದೆ. ರಾಜ್ಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ ಖಾಸಗಿ ಕ್ಷೇತ್ರದ ಸಂಸ್ಥಗಳನ್ನು ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಯಾವುದಾದರೂ ಒಂದು ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅದರಲ್ಲಿಯೇ ಸಂಪೂರ್ಣ ಏಕಾಗ್ರತೆ, ಗುರಿಯಿಟ್ಟುಕೊಂಡು ಸಾಧನೆ ಮಾಡಬೇಕು. ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು. ಅರ್ಜುನನಿಗಿಂತ ಮೀರಿ ಬಿಲ್ಲುವಿದ್ಯೆಯಲ್ಲಿ ಪರಿಣಿತಿ ಸಾಧಿಸಿದ್ದರಿಂದ ಅವನ ಹೆಬ್ಬೆರಳನ್ನು ಗುರುದಕ್ಷಿಣೆಯಾಗಿ ದ್ರೋಣಾಚಾರ್ಯರು ಪಡೆಯುತ್ತಾರೆ. ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಏಕಲವ್ಯ ಪ್ರಶಸ್ತಿ ಪಡೆದವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು. ಇದೇ ವೇಳೆ ಪ್ರಶಸ್ತಿ ಪುರಸ್ಕೃತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X