Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಬೇಡ,...

ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಬೇಡ, ಜಿಲ್ಲಾ‌ ಉಸ್ತುವಾರಿ ಸಚಿವರು ಪ್ರಗತಿ ಪರಿಶೀಲಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Dec 2025 7:07 PM IST
share
ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಬೇಡ, ಜಿಲ್ಲಾ‌ ಉಸ್ತುವಾರಿ ಸಚಿವರು ಪ್ರಗತಿ ಪರಿಶೀಲಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡುವ ಜತೆಗೆ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ ಯೋಜನೆಗಳ ಭೂ ಸ್ವಾಧೀನ ಪ್ರಕ್ರಿಯೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, 2023-24ನೆ ಸಾಲಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ 25 ಕೋಟಿ ರೂ.ಗಳಂತೆ ಒಟ್ಟು 3,510 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ 2,040 ರೂ. ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, 920 ಕೋಟಿ ರೂ. ವೆಚ್ಚ ಭರಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26ನೆ ಸಾಲಿನಲ್ಲಿ 8,666.50 ಕೋಟಿ ರೂ. ಅನುಮೋದನೆ ನೀಡಲಾಗಿದ್ದು, ಈಗಾಗಲೇ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅದೇ ರೀತಿ, 1,205 ಕೋಟಿ ರೂ. ಬಿಡುಗಡೆ ಮಾಡಲು ಬೆಳಗಾವಿ ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ. 2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ 1,890 ಕೋಟಿ ರೂ. ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, 250 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.

ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ. ಅದೇ ರೀತಿ, ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದ ಅವರು, ರೈಲ್ವೆ ಕಾಮಗಾರಿಗಳಿಗೆ ಬಾಕಿಯಿರುವ ಭೂ ಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗೆ ಕೈಗೊಳ್ಳಲು ಎಲ್ಲ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ರಾಜ್ಯದಲ್ಲಿ ಅನುಮೋದನೆಗೊಂಡಿರುವ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆವಿದೆ. ಇದರ ಪೈಕಿ ಶೇ.84ರಷ್ಟು ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ನೂ ಅಂದಾಜು 2,685 ಎಕರೆಗಳಷ್ಟು ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಿದೆ. ರಾಜ್ಯದಲ್ಲಿ ಪ್ರಗತಿಯಲ್ಲಿರುವ ವಿವಿಧ ರೇಲ್ವೆ ಯೋಜನೆಗಳಿಗೆ ರಾಜ್ಯ ಸರಕಾರದಿಂದ ನಿರ್ಮಾಣ ಕಾಮಗಾರಿಗಳಿಗೆ 2581.67 ಕೋಟಿ ರೂ., ಭೂಸ್ವಾಧೀನ ಪ್ರಕ್ರಿಯೆಗೆ 2950.22 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾ ನದ ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗ ವಿತರಿಸಬೇಕು. ಎಲ್ಲ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೆಕ್ಕೆಜೋಳ-ತೊಗರಿ ಖರೀದಿ: ‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಮಾಡಿದ್ದು, 76,430 ಮೆ.ಟನ್ ಖರೀದಿಸಲು ಬಾಕಿಯಿದೆ. ಶೀಘ್ರದಲ್ಲಿಯೇ ನಿಗದಿತ ಪ್ರಮಾಣದ ಮೆಕ್ಕೆಜೋಳ ಖರೀದಿಗೆ ಕ್ರಮ ಕೈಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಎಥೆನಾಲ್ ಖರೀದಿ ಕುರಿತಾಗಿ ಕೇಂದ್ರ ಸರಕಾರಕ್ಕೆ ಮಾಡಿದ್ದ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಕೇಂದ್ರ ಸರಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆಯನ್ನು ಮುಂದುವರೆಸಿದೆ’

ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X