Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವೈವಿದ್ಯತೆಯ ನಡುವೆ ಮನುಷ್ಯರು...

ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ31 Dec 2025 12:40 PM IST
share
ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು: ಸಿಎಂ ಸಿದ್ದರಾಮಯ್ಯ

ಕೇರಳ (ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಕೇರಳ ತಿರುವನಂತಪುರದ 93ನೇ ಶಿವಗಿರಿ ತೀರ್ಥಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಾರಾಯಣ ಗುರುಗಳು ಕೇವಲ‌ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು ನೈತಿಕತೆಯ ಚಳವಳಿಯಾಗಿದ್ದರು. ಹೀಗಾಗಿ ಶಿವಗಿರಿ ತೀರ್ಥಯಾತ್ರೆ ಕೂಡ ಚಳವಳಿಯ ಸ್ವರೂಪ ಪಡೆದು ಜಾತಿ ದೌರ್ಜನ್ಯವನ್ನು ಅಳಿಸಿ ಸಮಾಜವನ್ನು ಸಾಮಾಜಿಕ ನ್ಯಾಯದ ಕಡೆ ಮುನ್ನಡೆಸಬೇಕು ಎಂದರು.

ಇದೇ ನಾರಾಯಣ ಗುರುಗಳು ಕಂಡ ಭಾರತ. ಇದೇ ಶಿವಗಿರಿ ಪ್ರತಿಪಾದಿಸುವ ಭಾರತ. ಇಂಥಾ ಭಾರತವನ್ನು ನಾವು ಒಟ್ಟಾಗಿ ಗಟ್ಟಿಗೊಳಿಸಬೇಕಿದೆ. ಶಿವಗಿರಿ ಮಠವು ಕೇವಲ ಒಂದು ಯಾತ್ರಾ ಕೇಂದ್ರವಾಗಿರದೇ, ಭಾರತದ ಆತ್ಮಸಾಕ್ಷಿಯ ನೈತಿಕ ವಿಶ್ವವಿದ್ಯಾಲಯವಾಗಿದೆ. ಈ ಪವಿತ್ರ ಕ್ಷೇತ್ರದಲ್ಲಿ ನಿಮ್ಮ ಮುಂದೆ ನಿಂತಿರುವುದು ನನ್ನ ಸೌಭಾಗ್ಯ. ಇದು ಬೌದ್ಧಿಕ ಮತ್ತು ವಿಶ್ವದ ಮಾನವಕುಲದ ಚಳವಳಿಯಾಗಿದೆ. ಇದು ಭೌಗೋಳಿಕವಲ್ಲ, ನೈತಿಕತೆಯ ಪ್ರವಾಸ ಎಂದು ಮೆಚ್ಚುಗೆ ಸೂಚಿಸಿದರು.‌

ಶಿವಗಿರಿ ತೀರ್ಥಯಾತ್ರೆಯು ಭಾರತದ ಮೂಲ 'ಕೋಮು-ವಿರೋಧಿ' ಯೋಜನೆಯಾಗಿದೆ. ಸಮಾಜವು ಕೃತಕವಾಗಿ ಸೃಷ್ಟಿಸಲ್ಪಟ್ಟ ದ್ವೇಷದಿಂದ ಧ್ರುವೀಕರಣಗೊಳ್ಳುತ್ತಿರುವಾಗ, ಶಿವಗಿರಿಯು ಪ್ರಾಬಲ್ಯಕ್ಕಿಂತ 'ಸಂವಾದ'ವನ್ನು, ಶ್ರೇಣೀಕೃತ ವ್ಯವಸ್ಥೆಗಿಂತ 'ಸಮಾನತೆ'ಯನ್ನು ಮತ್ತು ಸಾಂಕೇತಿಕತೆಗಿಂತ 'ನೈತಿಕತೆ'ಯನ್ನು ಎತ್ತಿ ಹಿಡಿಯುತ್ತದೆ ಎಂದರು.

"ಆಧುನಿಕ ರಾಷ್ಟ್ರ ನಿರ್ಮಾಣದಲ್ಲಿ ಶಿವಗಿರಿ ತೀರ್ಥಯಾತ್ರೆಯ ಪಾತ್ರ" ಎನ್ನುವುದು ಕೇವಲ ಸಾಂಕೇತಿಕವಲ್ಲ. ಇದು ಇಂದಿನ ತುರ್ತು ಅಗತ್ಯ ಮತ್ತು ನಮ್ಮ ಕಾಲದ ಬಿಕ್ಕಟ್ಟುಗಳಿಗೆ ನೇರ ಉತ್ತರ. ಇದರ ಹಿಂದಿರುವ ಶಕ್ತಿ ಶ್ರೀ ನಾರಾಯಣ ಗುರುಗಳು ಕೇವಲ ಒಬ್ಬ ಸಂತನಲ್ಲ, ಬದಲಾಗಿ ಭಾರತದ ಶ್ರೇಷ್ಠ ಸಾಮಾಜಿಕ ದಾರ್ಶನಿಕರಲ್ಲಿ ಒಬ್ಬರು. ನಾರಾಯಣ ಗುರುಗಳು ಅನ್ಯಾಯದ ಚೌಕಟ್ಟಿನೊಳಗೆ ಸುಧಾರಣೆಯನ್ನು ಬಯಸಲಿಲ್ಲ. ಅವರು ಅನ್ಯಾಯದ ಬೇರುಗಳನ್ನೇ ಕಿತ್ತೆಸೆದರು. ಕೇರಳವು ಜಾತಿ ತಾರತಮ್ಯ, ಮೌಢ್ಯಾಚರಣೆ ಮತ್ತು ಅಸಮಾನತೆಯಿಂದ ಉಸಿರುಗಟ್ಟುತ್ತಿದ್ದಾಗ, "ಮಾನವಕುಲಕ್ಕೆ ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು" ಎಂಬ ಸತ್ಯವನ್ನು ಘೋಷಿಸಿದರು. ಇದು ಕೇವಲ ಕಾವ್ಯಾತ್ಮಕ ಹೇಳಿಕೆಯಲ್ಲ. ಇದು ಜಾತಿ ತಾರತಮ್ಯ ಸೋಂಕಿನ ಮನುಸ್ಮೃತಿ ಆಧಾರಿತ ಶ್ರೇಣೀಕೃತ ವ್ಯವಸ್ಥೆ, ಧಾರ್ಮಿಕ ಏಕಸ್ವಾಮ್ಯತೆ ಮತ್ತು ಸಾಮಾಜಿಕ ಬಹಿಷ್ಕಾರಕ್ಕೆ ನೀಡಿದ ನೇರ ಸವಾಲಾಗಿತ್ತು‌ ಎಂದರು.

ನಾರಾಯಣ ಗುರುಗಳ ತತ್ವಜ್ಞಾನವು ಕನ್ನಡದ ರಾಷ್ಟ್ರಕವಿ ಕುವೆಂಪು ಅವರು ನಂತರ ಪ್ರತಿಪಾದಿಸಿದ 'ವಿಶ್ವಮಾನವ' ಪರಿಕಲ್ಪನೆಯನ್ನು ಒಳಗೊಂಡಿತ್ತು. ಇದು ಜಾತಿರಹಿತ, ಭಯರಹಿತ ಮತ್ತು ಮಾನವೀಯ ಸಮಾಜ ನಿರ್ಮಾಣದ ದೂರದೃಷ್ಟಿಯಾಗಿತ್ತು. ಹಿಂದುಳಿದ ಸಮುದಾಯಗಳು ತಮ್ಮದೇ ಆದ ದೇವಾಲಯಗಳನ್ನು ಸ್ಥಾಪಿಸಬೇಕೆಂದು ಕರೆ ನೀಡಿ, ದೇವಾಲಯಗಳಲ್ಲಿ ವಿಗ್ರಹದ ಬದಲು ಕನ್ನಡಿಯನ್ನು ಪ್ರತಿಷ್ಠಾಪಿಸಿದರು. ದೈವತ್ವವು ಪ್ರತಿ ಮನುಷ್ಯನೊಳಗೆ ನೆಲೆಸಿದ್ದು, ಆತ್ಮಸಾಕ್ಷಾತ್ಕಾರ, ಸಮಾನತೆ ಹಾಗೂ ಯಾರಿಗೂ ಕೇಡು ಬಯಸದಿರುವುದೇ ನಿಜವಾದ ಆರಾಧನೆ ಎಂದು ತಿಳಿಸುವುದು ಇದರ ಉದ್ದೇಶವಾಗಿತ್ತು. ಶಾಲೆಗಳು, ದೇವಾಲಯಗಳು ಮತ್ತು ಸಾಮಾಜಿಕ ಸಂಘಟನೆಗಳನ್ನು ಸ್ಥಾಪಿಸುವ ಮೂಲಕ, ನಾರಾಯಣ ಗುರುಗಳು ಶೋಷಿತರಿಗೆ ಸ್ವಾಭಿಮಾನ, ಜ್ಞಾನ ಮತ್ತು ನಾಯಕತ್ವದ ಗುಣವನ್ನು ಮರುಸ್ಥಾಪಿಸುವ ವೇದಿಕೆಯನ್ನು ಸೃಷ್ಟಿಸಿದರು. ಜಾತಿ ಎನ್ನುವುದು ಕೇವಲ ಆಚರಣೆಗಳಿಂದಲ್ಲ, ಜ್ಞಾನದ ವ್ಯವಸ್ಥಿತ ನಿರಾಕರಣೆಯಿಂದ ಜೀವಂತವಾಗಿರುವುದನ್ನು ಅವರು ಅರ್ಥಮಾಡಿಕೊಂಡಿದ್ದರು. ಅವರ ಪ್ರಕಾರ, ಅಜ್ಞಾನವು ಆಕಸ್ಮಿಕವಲ್ಲ, ಅದು ಸಮಾಜದ ಶ್ರೇಣೀಕೃತ ವ್ಯವಸ್ಥೆಯ ಉಳಿವಿಗಾಗಿ ಮಾಡಿದ ರಾಜಕೀಯ ಉದ್ದೇಶದ ಸೃಷ್ಠಿಯಾಗಿತ್ತು ಎಂದರು.

ನಾರಾಯಣ ಗುರುಗಳು ಶಿಕ್ಷಣವನ್ನು ಉತ್ತೇಜಿಸುವ ಮೂಲಕ, ಅನಿಷ್ಟ ಪದ್ಧತಿಗಳನ್ನು ವಿರೋಧಿಸುವ ಮೂಲಕ ಮತ್ತು ಲಿಂಗ ಸಮಾನತೆಯನ್ನು ಪ್ರತಿಪಾದಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಶ್ರಮಿಸಿದರು. ಮಹಿಳೆಯರ ಘನತೆ ಮತ್ತು ಸಮಾನ ಅವಕಾಶವಿಲ್ಲದೆ ಸಾಮಾಜಿಕ ನ್ಯಾಯ ಅಸಾಧ್ಯ ಎಂದು ಸಾರಿದರು. ಶಾಲೆಗಳು, ಗ್ರಂಥಾಲಯಗಳು, ಸಾಮಾಜಿಕ ಸುಧಾರಣಾ ಅಭಿಯಾನಗಳು ಮತ್ತು ಕೃಷಿ-ಕೈಗಾರಿಕಾ ಕಾರ್ಯಾಗಾರಗಳನ್ನು ಸಾಂಸ್ಥಿಕಗೊಳಿಸಿದರು. ಇದು ಆಧುನಿಕ ಸಮಾಜಶಾಸ್ತ್ರವು ಯಾವುದನ್ನು 'ಸಾಮಾಜಿಕ ಬಂಡವಾಳ' ಎಂದು ಕರೆಯುತ್ತದೆಯೋ, ಅದನ್ನು ಗುರುಗಳು, ಪರಸ್ಪರ ನಂಬಿಕೆಯ ಹಾಗೂ ಸಂಘಟಿತ ಹೋರಾಟದ ಮೂಲಕ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವುದು ಅಗತ್ಯವೆಂದು ತಿಳಿಸಿದರು.

ನಾರಾಯಣ ಗುರುಗಳ ಪ್ರಭಾವ ಕೇರಳಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. 1925ರಲ್ಲಿ ಮಹಾತ್ಮಾ ಗಾಂಧಿಯವರೊಂದಿಗೆ ಅವರು ನಡೆಸಿದ ಐತಿಹಾಸಿಕ ಸಂವಾದವು ಸ್ವಾತಂತ್ರ್ಯ ಚಳವಳಿಯ ದಿಕ್ಕನ್ನೇ ಬದಲಿಸಿತು. "ಜಾತಿ ಎನ್ನುವುದು ಸಾಂಸ್ಕೃತಿಕ ವೈವಿಧ್ಯತೆಯಲ್ಲ, ಅದು ಸಾಂಸ್ಥಿಕ ಅನ್ಯಾಯ" ಎಂಬ ಮೂಲಭೂತ ಸತ್ಯವನ್ನು ಗಾಂಧೀಜಿಯವರು ಅರಿತುಕೊಳ್ಳುವಂತೆ ಮಾಡಿತು. ಮಾವಿನ ಮರದ ಎಲೆಗಳು ಬೇರೆ ಬೇರೆಯಾಗಿದ್ದರೂ ಅವುಗಳ ಸಾರ ಒಂದೇ ಎಂಬ ಉದಾಹರಣೆಯ ಮೂಲಕ, ಜಾತಿ ಮತ್ತು ಧರ್ಮಗಳು ಜಗತ್ತಿನ ಆಳವಾದ ಸಾಮಾಜಿಕ ಸಮಸ್ಯೆಗಳೇ ಹೊರತು ವೈವಿಧ್ಯತೆಯಲ್ಲ ಎಂದು ಗಾಂಧೀಜಿಯವರಿಗೆ ಮನವರಿಕೆ ಮಾಡಿಕೊಟ್ಟರು.

ನಾರಾಯಣ ಗುರುಗಳನ್ನು ಭೇಟಿಯಾದ ನಂತರವೇ ಗಾಂಧೀಜಿಯವರು ಅಸ್ಪೃಶ್ಯತೆ, ಸರಳತೆ ಮತ್ತು ಅಂತರ್ಜಾತಿ ವಿವಾಹಗಳ ಬಗ್ಗೆ ತಮ್ಮ ನಿಲುವನ್ನು ಗಟ್ಟಿಗೊಳಿಸಿದರು. ಅಂತರ್ಜಾತಿ ವಿವಾಹವಲ್ಲದ ಮದುವೆಗಳಿಗೆ ತಾವು ಹಾಜರಾಗುವುದಿಲ್ಲ ಎಂದು ಗಾಂಧೀಜಿಯವರು ನಿರ್ಧರಿಸಿದ್ದು ಕಾಕತಾಳೀಯವಲ್ಲ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X