Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜನರಿಗೆ ಅವಶ್ಯವಿರುವ ಸರಕಾರದ ಸೇವೆಗಳನ್ನು...

ಜನರಿಗೆ ಅವಶ್ಯವಿರುವ ಸರಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ವಾರ್ತಾಭಾರತಿವಾರ್ತಾಭಾರತಿ1 Jan 2026 6:03 PM IST
share
ಜನರಿಗೆ ಅವಶ್ಯವಿರುವ ಸರಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ
ಹೊಸ ವರ್ಷದ ಪ್ರಯುಕ್ತ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : ರಾಜ್ಯದ ಜನತೆಗೆ ಸರಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಹೊಸ ವರ್ಷದ ಪ್ರಯುಕ್ತ ಸರಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯ ಜನತೆ ಸುಖ ಸಮೃದ್ಧಿ ಶಾಂತಿಯಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಕಾಣಲೆಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

ಬೆಳೆ ಪರಿಹಾರದಿಂದ ರೈತರು ತುಸು ನೆಮ್ಮದಿ ಕಾಣುವಂತಾಗಿದೆ :

ಉತ್ತಮ ಮಳೆಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025 ರಲ್ಲಿ ಉತ್ತಮ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿ, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರಕಾರದ ಕರ್ತವ್ಯ. ಕೇಂದ್ರ ಸರಕಾರ ಎನ್ ಡಿಆರ್ ಎಫ್ ನಿಂದ ಹಾಗೂ ರಾಜ್ಯ ಸರಕಾರ ಎಸ್ ಡಿ ಆರ್ ಎಫ್ ನಿಂದ ಪರಿಹಾರವನ್ನು ನೀಡುತ್ತದೆ. ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ್‌ ಗೆ 8500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದರು.

ಸಮಸಮಾಜ ನಿರ್ಮಿಸುವುದು ಸರಕಾರ ಗುರಿ :

ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ಲಾಭವಿಲ್ಲ. ಸಾಮಾಜಿಕ ಆರ್ಥಿಕ ಸ್ವಾತಂತ್ರ್ಯದಿಂದಲೇ ರಾಜಕೀಯ ಪ್ರಭುತ್ವಕ್ಕೆ ನಿಜ ಅರ್ಥ ದೊರೆಯುತ್ತದೆ ಎಂದು ಪ್ರತಿಪಾದಿಸಿದ್ದರು. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ, ಆಧಿಕಾರ ವಿಕೇಂದ್ರೀಕರಣಗಳನ್ನು ಸಾಧಿಸುವುದು ನಮ್ಮ ಹೊಣೆಗಾರಿಕೆ. ಸಮಸಮಾಜ ನಿರ್ಮಿಸುವ ಗುರಿಯನ್ನು ಸರಕಾರ ಹೊಂದಿದ್ದು, ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಎಂದರು.

ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದರು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X