Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು;...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 Jan 2026 5:42 PM IST
share
88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ʼಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು.

2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ, ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದರು.

ಪೋಲೀಸ್ ಸಬ್ ಇನ್ಸ್‌ಪೆಕ್ಟರ್, ಎಎಸ್‌ಪಿ, ಡಿವೈಎಸ್‌ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.

ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತಾ ರಾಜ್ಯವಾಗಿಸಬೇಕೆಂದು ಸರಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು :

ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚನೆ :

ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆ ಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರು ಏಕೆ ಮಾಡಬಾರದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಐಪಿಎಲ್ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಡಿ ಮೈಕಲ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಅವರ ಶಿಫಾರಸ್ಸುಗಳನ್ನು ಪಾಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಅವರು ಅಲ್ಪಾವಧಿ ಶಿಫಾರಸ್ಸುಗಳನ್ನು ಕೂಡಲೆ ಜಾರಿಗೆ ತರಬೇಕು ಹಾಗೂ ದೀರ್ಘಾವಧಿಯಲ್ಲಿ ಉಳಿದವನ್ನು ಪಾಲಿಸಬೇಕಿದೆ. ಶಿಫಾರಸುಗಳನ್ನು ಜಾರಿ ಮಾಡಲೇಬೇಕು ಎಂದರು.

ಬಳ್ಳಾರಿ ಘಟನೆ: ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ :

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಬಳ್ಳಾರಿ ಸೂಕ್ಷ್ಮ ಪ್ರದೇಶವಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ. ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜೀವ್ ಗೌಡರನ್ನು ಬಂಧಿಸಲಾಗುವುದು :

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು, ಅವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ, ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

Tags

CM Siddaramaiahpolice
share
ವಾರ್ತಾಭಾರತಿ
ವಾರ್ತಾಭಾರತಿ
Next Story
X