Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿದ್ಯಾರ್ಥಿಗಳಿಗೆ ಸವಾಲನ್ನು ಎದುರಿಸುವ...

ವಿದ್ಯಾರ್ಥಿಗಳಿಗೆ ಸವಾಲನ್ನು ಎದುರಿಸುವ ಆತ್ಮವಿಶ್ವಾಸವನ್ನು ವಿವಿಗಳು ನೀಡಲಿ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 May 2026 7:25 PM IST
share
ವಿದ್ಯಾರ್ಥಿಗಳಿಗೆ ಸವಾಲನ್ನು ಎದುರಿಸುವ ಆತ್ಮವಿಶ್ವಾಸವನ್ನು ವಿವಿಗಳು ನೀಡಲಿ : ಸಿಎಂ ಸಿದ್ದರಾಮಯ್ಯ
‘ಕ್ಯಾಂಪಸ್ ಟು ಕೆರಿಯರ್ (ಸಿ2ಸಿ) ಶೃಂಗಸಭೆ’

ಬೆಂಗಳೂರು : ವಿಶ್ವ ವಿದ್ಯಾನಿಲಯಗಳು ಕೇವಲ ಪದವಿಗಳನ್ನು ನೀಡುವುದಕ್ಕೆ ಸೀಮಿತವಾಗಬಾರದು. ಅವು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕೌಶಲ್ಯಗಳು, ನಾವೀನ್ಯತೆ ಸಾಮರ್ಥ್ಯ ಮತ್ತು ನೈಜ ಪ್ರಪಂಚದ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಇಲ್ಲಿನ ಖಾಸಗಿ ಹೋಟೆಲ್‍ನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ‘ಕ್ಯಾಂಪಸ್ ಟು ಕೆರಿಯರ್ (ಸಿ2ಸಿ) ಶೃಂಗಸಭೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳು ಉದ್ಯೋಗಾವಕಾಶ, ಉದ್ಯಮಶೀಲತೆ, ನಾವೀನ್ಯತೆ ಮತ್ತು ನಾಯಕತ್ವವನ್ನು ಸೃಷ್ಟಿಸಬೇಕು. ಪದವಿಗಳನ್ನು ಪ್ರಾಯೋಗಿಕ ಕೌಶಲ್ಯಗಳಿಂದ ಹೊಂದಿಸಬೇಕು. ಜ್ಞಾನವು ಹೊಂದಾಣಿಕೆಗೆ ಪೂರಕವಾಗಿರಬೇಕು ಎಂದರು.

ಶಿಕ್ಷಣ ಸಂಸ್ಥೆಗಳು ಪದವಿಗಳನ್ನು ನೀಡುವುದಕ್ಕಿಂತ ಮಾನವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಬೇಕು. ಕುತೂಹಲ, ಸೃಜನಶೀಲತೆ, ಸಾಮರ್ಥ್ಯ ಮತ್ತು ವ್ಯಕ್ತಿತ್ವವನ್ನು ಪೋಷಿಸಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಘನತೆ ಮತ್ತು ಆರ್ಥಿಕ ಭದ್ರತೆಯ ಜೀವನಕ್ಕೆ ಮಾರ್ಗಗಳನ್ನು ಸೃಷ್ಟಿಸಬೇಕು. ಹಾಗೆಯೇ ಶಿಕ್ಷಣವು ಸಮಾಜ ಮತ್ತು ಆರ್ಥಿಕತೆಯ ಅಗತ್ಯಗಳಿಗೆ ಆಳವಾದ ಸಂಪರ್ಕ ಹೊಂದಿರಬೇಕು ಎಂದು ಅವರು ತಿಳಿಸಿದರು.

ಒಂದು ಶಿಕ್ಷಣ ಸಂಸ್ಥೆಯ ನಿಜವಾದ ಸಾಧನೆಯು ದಾಖಲಿಸಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆಯಲ್ಲ, ಬದಲಾಗಿ ಅದು ಎಷ್ಟು ಜನರ ಜೀವನವನ್ನು ಬದಲಾಯಿಸುತ್ತದೆ ಎಂಬುದರ ಮೇಲಿರುತ್ತದೆ. ಜ್ಞಾನ, ಕೌಶಲ್ಯ ಅಭಿವೃದ್ಧಿ, ನಾವೀನ್ಯತೆ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾನ, ಪ್ರಗತಿಪರ ಮತ್ತು ಸದೃಢ ಸಮಾಜವನ್ನು ರೂಪಿಸುವಲ್ಲಿ ಶಿಕ್ಷಣವು ಮಹತ್ವದ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು.

ಕರ್ನಾಟಕದ ಅಭಿವೃದ್ಧಿಯಲ್ಲಿ ಶಿಕ್ಷಣವು ಕೇಂದ್ರಸ್ಥಾನವನ್ನು ಪಡೆದಿದ್ದು, ಸರಕಾರದ ಆದ್ಯತಾ ವಲಯವಾಗಿದೆ. ಪ್ರತಿ ಒಂದು ಲಕ್ಷ ಜನಸಂಖ್ಯೆಗೆ 66 ಕಾಲೇಜುಗಳನ್ನು ಹೊಂದುವ ಮೂಲಕ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಶಿಕ್ಷಣಕ್ಕೆ ಪ್ರವೇಶದ ಲಭ್ಯತೆಯೊಂದೇ ಸಾಕಾಗುವುದಿಲ್ಲ. ಕೃತಕ ಬುದ್ಧಿಮತ್ತೆ, ಜೈವಿಕ ತಂತ್ರಜ್ಞಾನ, ಅರೆವಾಹಕ ಉತ್ಪಾದನೆ, ಹವಾಮಾನ ತಂತ್ರಜ್ಞಾನಗಳು, ಸುಧಾರಿತ ಆರೋಗ್ಯ ರಕ್ಷಣೆ ಮತ್ತು ಡಿಜಿಟಲ್ ರೂಪಾಂತರದ ಜಗತ್ತನ್ನು ನಮ್ಮ ವಿದ್ಯಾರ್ಥಿಗಳು ಮುನ್ನಡೆಸಲು ಸಿದ್ಧರಿದ್ದಾರೆಯೇ ಎನ್ನುವುದು ನಮ್ಮ ಮುಂದಿರುವ ನಿರ್ಣಾಯಕ ಪ್ರಶ್ನೆಯಾಗಿದೆ ಎಂದು ಅವರು ಹೇಳಿದರು.

ಸರಕಾರ, ಶಿಕ್ಷಣ ಕ್ಷೇತ್ರ ಮತ್ತು ಉದ್ಯಮವು ಪರಸ್ಪರ ಬಲವಾದ ಸಹಯೋಗದ ಮೇಲೆ ನಿಂತಿರುತ್ತವೆ. ವಿಪ್ರೋ, ಅಜೀಂ ಪ್ರೇಮ್ಜಿ ಫೌಂಡೇಶನ್ ಮತ್ತು ಇನ್ಫೋಸಿಸ್ ಮುಂತಾದ ಸಂಸ್ಥೆಗಳೊಂದಿಗೆ ವಿನೂತನ ಕಾರ್ಯಕ್ರಮಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಪ್ರತಿಭಾವಂತ ಪರಿಸರ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಇನ್ನು ನಮ್ಮ ಕೈಗಾರಿಕಾ ನೀತಿಯು ಉತ್ಪಾದನೆ, ತಂತ್ರಜ್ಞಾನ ಮತ್ತು ಉದಯೋನ್ಮುಖ ವಲಯಗಳಲ್ಲಿ 20 ಲಕ್ಷ ಉದ್ಯೋಗವನ್ನು ಸೃಜಿಸುವ ಗುರಿ ಹೊಂದಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಡಾ.ನೆಲ್ಲುಕುಂಟೆ ವೆಂಕಟೇಶಯ್ಯ ಸೇರಿದಂತೆ ಮತ್ತಿತರರು ಇದ್ದರು.

Tags

CM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X