Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಿಜೆಪಿಯಲ್ಲಿ ಕಳಂಕ ರಹಿತ ಒಬ್ಬೇ...

ರಾಜ್ಯ ಬಿಜೆಪಿಯಲ್ಲಿ ಕಳಂಕ ರಹಿತ ಒಬ್ಬೇ ಒಬ್ಬ ನಾಯಕನನ್ನು ತೋರಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ವಾರ್ತಾಭಾರತಿವಾರ್ತಾಭಾರತಿ25 Sept 2024 11:22 PM IST
share
ರಾಜ್ಯ ಬಿಜೆಪಿಯಲ್ಲಿ ಕಳಂಕ ರಹಿತ ಒಬ್ಬೇ ಒಬ್ಬ ನಾಯಕನನ್ನು ತೋರಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು, ತೋರಿಸಿದರೆ ನಿಮ್ಮನ್ನು ಕರ್ನಾಟಕ ರಾಜ್ಯಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಬುಧವಾರ ತುರ್ತು ಪ್ರಕಟಣೆ ನೀಡಿರುವ ಸಿದ್ದರಾಮಯ್ಯ, ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ ಎಂದು ಪಂಥಾಹ್ವಾನ ನೀಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂ.ಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ, ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಮ್ಮ ಸರಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ಮೋದಿ ಅವರೇ, ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು? ಎಂದು ಅವರು ಕೇಳಿದ್ದಾರೆ.

ಪ್ರಧಾನಿ ಮೋದಿ ಅವರೇ, ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಭಾಸ್ ಅನ್ನಲೇಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯ ವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ ಎಂದು ಅವರು ಲೇವಡಿ ಮಾಡಿದ್ದಾರೆ.

ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಎಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನ ವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ ಪ್ರಧಾನಿಗಳೇ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರೇ, ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು ಎಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು? ಎಂದು ಅವರು ಟೀಕಿಸಿದ್ದಾರೆ.

'ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಜನರಿಗೆ ಗೊತ್ತಾಗಲಿ'

-ಸಿದ್ದರಾಮಯ್ಯ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X