Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಸರಾ ಯಶಸ್ವಿಗೆ ಶ್ರಮಿಸಿದ ಅಧಿಕಾರಿಗಳಿಗೆ...

ದಸರಾ ಯಶಸ್ವಿಗೆ ಶ್ರಮಿಸಿದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Nov 2023 4:12 PM IST
share
ದಸರಾ ಯಶಸ್ವಿಗೆ ಶ್ರಮಿಸಿದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ನ.5: ನಾನೂ ಸಹ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಗ ಅಧಿಕಾರಿಗಳ ಸಹಕಾರದಿಂದ ಯಶಸ್ವಿ ದಸರಾ ಮಾಡಿದ್ದೇವೆ. ಅದೇ ರೀತಿ ಈ ಬಾರಿಯ ದಸರಾ ಯಶಸ್ವಿಗೆ ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ರವಿವಾರ ಆಯೋಜಿಸಿದ್ದ ಭೋಜನ ಕೂಟದಲ್ಲಿ ಅವರು ಮಾತನಾಡಿದರು.

'ಎಲ್ಲಾ ಸಚಿವರು, ಶಾಸಕರು, ಮಾಜಿ ಶಾಸಕರು, ಎಲ್ಲಾ ಅಧಿಕಾರಿಗಳ ಸಹಕಾರದಿಂದ ದಸರಾ ಯಶಸ್ಸು ಆಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಮಾರ್ಗದರ್ಶನದಂತೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಿರುವುದರಿಂದ ಮೈಸೂರು ದಸರಾ ಯಶಸ್ಸು ಆಗಿದೆ' ಎಂದರು.

ಅಧಿಕಾರಿಗಳು ಅರ್ಪಣೆ ಮನೋಭಾವನೆಯಿಂದ ಹಾಗೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಹಾಗೂ ಟೀಕೆ ಟಿಪ್ಪಣಿ ಗಳು ಬಂದಿರುವುದಿಲ್ಲ. ಕಾರಣ ದಸರಾ ಅಚ್ಚುಕಟ್ಟಾಗಿ ನಡೆದಿದೆ. ಈ ಸಂಬಂಧ ಅಧಿಕಾರಿಗಳಿಗೆ ಅಭಿನಂದನೆಗಳು ಹೇಳುತ್ತೇನೆ ಎಂದರು.

ಮೈಸೂರು ಪ್ರಾಂತ್ಯದ ಕಲೆ ಸಾಹಿತ್ಯ ಶ್ರೀಮಂತಗೊಳಿಸಬೇಕು. ಅಧಿಕಾರಿಗಳು ಈ ಸಂಬಂಧ ಕೆಲಸ ಮಾಡಬೇಕು. ದಸರಾದಲ್ಲಿ ನಾಡ ಹಬ್ಬವಾಗಿ ಆಚರಿಸಲು ಹೆಚ್ಚು ಜನರು ದಸರಾದಲ್ಲಿ ಭಾಗವಹಿಸಬೇಕು ಹಾಗೂ ಅರ್ಥಪೂರ್ಣವಾಗಿ ದಸರಾ ಮಾಡಬೇಕು. ಜನ ಪರವಾಗಿ ಅಧಿಕಾರಿಗಳು ಇರಬೇಕು. ಜನ ಪರವಾದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಮೈಸೂರು ಅಭಿವೃದ್ಧಿಗಾಗಿ ಯೋಜನೆ ಸಿದ್ಧಪಡಿಸಲಾಗುತ್ತಿದ್ದು ಇದಕ್ಕಾಗಿ ಅಧಿಕಾರಿಗಳು ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ಮುಂದಾಗಬೇಕು. ಸಮಾಜದಲ್ಲಿ ನಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಮುಂದಿನ ಮೈಸೂರು ದಸರಾವನ್ನು ಜನಪರ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗೋಣ ಎಂದರು.

ಬರವಿದೆ, ಜನರಿಗೆ ಕುಡಿಯುವ ನೀರಿನ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕ್ರಮವಹಿಸಬೇಕು. ಜಾನುವಾರುಗಳಿಗೆ ಮೇವು ತೊಂದರೆ ಆಗಬಾರದು. ಹಳ್ಳಿ ಗಳಿಗೆ ಅಧಿಕಾರಿಗಳು ಹೋಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮಾತನಾಡಿ, ಯಾವುದೇ ಟೀಕೆ ವ್ಯಕ್ತವಾಗದೇ ಇರುವ ಹಾಗೆ ದಸರಾ ಯಶಸ್ಸಿಗೆ ಅಧಿಕಾರಿಗಳು ಉತ್ತಮವಾಗಿ ಕೆಲಸ ಕಾರ್ಯ ನಿರ್ವಹಿಸುವ ಮೂಲಕ ಶ್ರಮಿಸಿದ್ದಾರೆ. ಸರ್ಕಾರದ ಪರವಾಗಿ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಹೇಳುತ್ತೇನೆ ಎಂದರು.ಇದೇ ರೀತಿ ಮುಖ್ಯಮಂತ್ರಿ ಗಳ ಜಿಲ್ಲೆಯಾಗಿರುವುದರಿಂದ ಅಭಿವೃದ್ಧಿ ಪರವಾಗಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ರಾಜ್ಯ ಸಭಾ ಸದಸ್ಯರಾದ ರೆಹಮಾನ್ ಖಾನ್, ಮೇಯರ್ ಶಿವಕುಮಾರ್, ಶಾಸಕರಾದ ಕೆ. ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ, ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಜಿ.ಪಂ. ಸಿಇಓ ಎಂ.ಗಾಯಿತ್ರಿ, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್, ಮುಡಾ ಆಯುಕ್ತ ದಿನೇಶ್ ಕುಮಾರ್, ಡಿಡಿಪಿಐ ಪಾಂಡುರಂಗ, ವಾರ್ತಾ ಇಲಾಖೆ ಉಪನಿರ್ದೇಶಕ ಅಶೋಕ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಸವಿತಾ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X