Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಸಿದ್ದರಾಮಯ್ಯರಿಂದ ರಾಜಕೀಯ...

ಸಿಎಂ ಸಿದ್ದರಾಮಯ್ಯರಿಂದ ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 Sept 2025 1:16 PM IST
share
ಸಿಎಂ ಸಿದ್ದರಾಮಯ್ಯರಿಂದ ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ : ಬಸವರಾಜ ಬೊಮ್ಮಾಯಿ
ʼʼಒಳಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸಲು ಬಿಜೆಪಿ ಹೋರಾಟʼʼ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ ಮಾಡಿದ್ದು, ಸುಪ್ರೀಂ ಕೋರ್ಟ್ ಆದೇಶ ಹಾಗೂ ನ್ಯಾ.ನಾಗಮೋಹನ ದಾಸ್ ವರದಿ ಪಾಲನೆ ಮಾಡದೇ ಸಾಮಾಜಿಕ ಅನ್ಯಾಯ ಮಾಡಿದ್ದು, ಮೀಸಲಾತಿ ವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸಲು ಬಿಜೆಪಿ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲ ವರ್ಗಗಳು ಧುಮುಕಬೇಕು ಎಂದು ಮಹಾತ್ಮಾ ಗಾಂಧಿ ಬಯಕೆ ಆಗಿತ್ತು. ಆಗ ಡಾ.ಬಿ.ಆರ್.ಅಂಬೇಡ್ಕರ್ ಅವರು ತುಳಿತಕ್ಕೊಳ್ಳಗಾದ ಜನರ ಪರಿಸ್ಥಿತಿ ಏನು ಎಂದು ಪ್ರಶ್ನೆ ಮಾಡಿದರು. ಆಗ ಮಹಾತ್ಮಾ ಗಾಂಧೀಜಿ ಮತ್ತು ಅಂಬೇಡ್ಕರ್ ನಡುವೆ ಪೂಣೆಯಲ್ಲಿ ಒಂದು ವಾರ ಚರ್ಚೆ ನಡೆದು, ಹಲವಾರು ವಿಚಾರಗಳನ್ನು ಮಹಾತ್ಮಾಗಾಂಧಿ ಒಪ್ಪಿದರು. ಕೆಲವು ವಿಚಾರಗಳಲ್ಲಿ ತಕ್ಷಣ ನ್ಯಾಯ ಕೊಡಿಸುವುದು ಕಷ್ಟ. ಮುಂದಿನ ದಿನಗಳಲ್ಲಿ ನ್ಯಾಯ ಕೊಡಿಸಬಹುದು ಎಂದರು. ಅದನ್ನು ಪೂಣಾ ಫ್ಯಾಕ್ಟ್ ಎಂದು ಕರೆಯುತ್ತಾರೆ. ಆಗ ಎಲ್ಲ ಸಮುದಾಯಗಳು ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡವು. ಸಂವಿಧಾನ ರಚನೆಯ ಸಂದರ್ಭದಲ್ಲಿ ಪೂಣಾ ಫ್ಯಾಕ್ಟ್ ಆಧಾರದಲ್ಲಿ ಮೀಸಲಾತಿ ತೀರ್ಮಾನ ಮಾಡಲಾಯಿತು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು. ಅವರು ತಮ್ಮ ರಾಜಕೀಯ ಲಾಭಕ್ಕೆ ಒತ್ತು ಕೊಟ್ಟರು. ಸಂವಿಧಾನದಲ್ಲಿ ಅಂಬೇಡ್ಕರ್ ಅವರು ಸೇರಿಸಿರುವ ಅಂಶಗಳನ್ನು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದರು. ಮೀಸಲಾತಿ ನಿರಂತರ ಅವರ ಸಮುದಾಯಕ್ಕೆ ತಕ್ಕಂತೆ ನೀಡಬೇಕು ಎಂದು ತೀರ್ಮಾನಿಸಲಾಯಿತು. ಕಾಂಗ್ರೆಸ್ ಎಸ್ಸಿ ಸಮುದಾಯಗಳನ್ನು ಸೇರಿಸಿತು. ಆದರೆ, ಮೀಸಲಾತಿ ಹೆಚ್ಚಳ ಮಾಡಲಿಲ್ಲ. ರಾಜ್ಯದಲ್ಲಿ ಎಸ್ಸಿ ಪ್ರವರ್ಗದಲ್ಲಿ ಆರು ಜಾತಿ ಇದ್ದಿದ್ದು, ಈಗ 101 ಜಾತಿಗಳಾಗಿವೆ. ಕಾಂಗ್ರೆಸ್ ಮೀಸಲಾತಿ ಹೆಚ್ಚಳ ಮಾಡದೇ ಅನ್ಯಾಯ ಮಾಡಿತು‌. ಇದರಿಂದ ಅಸಮಾಧಾನ ಹೆಚ್ಚಾಯಿತು. ಒಳ ಮೀಸಲಾತಿಗೆ ಆಂಧ್ರದಲ್ಲಿ ಚಳವಳಿ ಆರಂಭವಾಗಿ ಕರ್ನಾಟಕಕ್ಕೂ ಹಬ್ಬಿತು ಎಂದು ಹೇಳಿದರು.

ಲ್ಯಾಂಡ್ ಮಾರ್ಕ್ ತೀರ್ಮಾನ :

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನ್ಯಾ.ನಾಗಮೋಹದಾಸ್ ಸಮಿತಿ ರಚನೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವರದಿ ಸಲ್ಲಿಸಲು ಕಾಲ ಮಿತಿ ನಿಗದಿ ಮಾಡಿದರು. ನಾನು ಸಿಎಂ ಇದ್ದಾಗ ನವೆಂಬರ್ 2022ರಲ್ಲಿ ಎಸ್ಸಿ ಶೇ.15 ರಿಂದ ಶೇ.17 ಕ್ಕೆ ಹೆಚ್ಚಳ ಮಾಡಿದೆ. ಎಸ್ಟಿಗೆ ಶೇ. 3ರಿಂದ ಶೇ.7 ಕ್ಕೆ ಹೆಚ್ಚಳ ಮಾಡಿದ್ದೇವು. ಅದು ಲ್ಯಾಂಡ್ ಮಾರ್ಕ್ ತೀರ್ಮಾನ ಆಗಿದೆ ಎಂದು ಹೇಳಿದರು.

ಸಾಮಾಜಿಕ ಅನ್ಯಾಯ :

ಆಗ ಪ್ರತಿ ಪಕ್ಚದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಮೀಸಲಾತಿ ಹೆಚ್ಚಳ ಆಗಿಲ್ಲವೆಂದು ಹೇಳಿಕೊಂಡು ತಿರುಗಾಡಿದರು. ಅದಕ್ಕೆ ಸಂವಿಧಾನ ತಿದ್ದುಪಡಿ ಆಗಬೇಕು ಎಂದು ಹೇಳಿದರು. ಸಿಎಂ ಆದಾಗಲೂ ಅದನ್ನೇ ಹೇಳಿದರು. ಇದರ ನಡುವೆ ನಮ್ಮ ಅವಧಿಯಲ್ಲಿ ಆಗಿರುವ ತೀರ್ಮಾನದ ಆಧ್ಯಯನ ಮಾಡಿ ಪ್ರಧಾನಿ ನರೇಂದ್ರ ಮೋದಿಯವರು ಸಾಮಾಜಿಕ ನ್ಯಾಯ ನೀಡಲು ಬದ್ದರಾಗಿ ಸಾಲಿಸಿಟರ್ ಜನರಲ್ ಅವರು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡಿದರು. ಅದರ ಆಧಾರದಲ್ಲಿ ರಾಜ್ಯಗಳಿಗೆ ಒಳ ಮೀಸಲಾತಿ ನೀಡುವ ಅಧಿಕಾರ ನೀಡಿ ಡಿ.1ರ, 2024 ರಲ್ಲಿ ಸುಪ್ರೀಂ ಆದೇಶ ಮಾಡಿತು.

ಆ ಆದೇಶದ ಪ್ರಕಾರ ನಿಖರ ಡಾಟಾ ಇರಬೇಕು. ಅಸಮರ್ಥರನ್ನು ಪ್ರಾಬಲ್ಯ ಇದ್ದವರ ಜೊತೆ ಸೇರಿಸಬಾರದು ಎಂದು ಹೇಳಿತು. ಅದರ ಆಧಾರದಲ್ಲಿ ರಾಜ್ಯ ಸರ್ಕಾರ ನ್ಯಾ.ನಾಗಮೋಹನದಾಸ್ ಸಮಿತಿ ರಚನೆ ಮಾಡಿದ್ದರು. ಅವರು ಸಮೀಕ್ಷೆ ಮಾಡಿ ವರದಿ ಕೊಟ್ಟರು. ಸರ್ಕಾರ ನ್ಯಾ.ನಾಗಮೋಹನ ದಾಸ್ ವರದಿ, ನ್ಯಾ.ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ವರದಿ ಎಲ್ಲವನ್ನು ಕೈ ಬಿಟ್ಟು, ಎಸ್ಸಿ ಪ್ರವರ್ಗ ಎ, ಶೇ.6, ಎಸ್ಸಿ ಪ್ರವರ್ಗ ಬಿ ಶೇ.6 ಹಾಗೂ ಎಸ್ಸಿ ಪ್ರವರ್ಗ ಸಿ ಶೇ.5 ಮೀಸಲಾತಿ ವರ್ಗಿಕರಿಸಿ ರಾಜಕೀಯ ನಿರ್ಣಯ ಮಾಡಿದ್ದಾರೆ. ಇದಕ್ಕೆ ಆಯೋಗ ಮಾಡುವ ಅಗತ್ಯವೇನಿತ್ತು. ಅಲೆಮಾರಿಗಳಿಗೆ ಶೇ.1ರಷ್ಟು ಮೀಸಲಾತಿ ಕೊಡಬೇಕೆಂದು ಮಾಧುಸ್ವಾಮಿ ಹಾಗೂ ನಾಗಮೋಹನ ದಾಸ್ ವರದಿಯಲ್ಲಿ ತಿಳಿಸಿದ್ದರು. ಇವರು ಕೇವಲ ಮತ ಬ್ಯಾಂಕಿನ ಸುರಕ್ಷತೆಗಾಗಿ ಈ ತಿರ್ಮಾನ ಮಾಡಿದ್ದಾರೆ. ಇದರಿಂದ ಸುಪ್ರೀಂ ಕೋರ್ಟ್ ನ ಆದೇಶ ಪಾಲಿಸದೆ ಸಾಮಾಜಿಕ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ವರ್ಗೀಕರಣ ಮಾಡಲಿಲ್ಲ. ಆದಿ ಆಂಧ್ರ, ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ಇತ್ತು. ಅದನ್ನು ಇವರು ತಿರಸ್ಕರಿಸಿದರು. ಎಕೆ, ಎಡಿ, ಎಎ ಯಾವುದೇ ಗುಂಪಿಗೆ ಸೇರಲಿಲ್ಲ. ಅವರು ಪ್ರವರ್ಗ ಎ, ಪ್ರವರ್ಗ ಬಿ, ನಲ್ಲಿ ಸೇರಿ ಅಂತ ಹೇಳಿ ಅವರನ್ನು ಎಲ್ಲಿಯೂ ಸೇರದಂತೆ ಮಾಡಿದರು. ಅಲೆಮಾರಿಗಳು ಅತ್ಯಂತ ಕನಿಷ್ಠ ಜೀವನ ಸ್ಥಿತಿಯಲ್ಲಿದ್ದಾರೆ. ಅವರಿಗೆ ಯಾವುದೇ ಮೀಸಲಾತಿ ಇಲ್ಲ. ರಾಜ್ಯ ಸರ್ಕಾರದ ಒಳ ಮೀಸಲಾತಿಯಿಂದ ಯಾರೂ ಸಂತುಷ್ಠರಿಲ್ಲ. ಎಸ್ಸಿ ಬಲಗೈ ಸಮುದಾಯದವರು ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ್ದಾರೆ. ಲಂಬಾಣಿ ಬೊವಿ ಜೊತೆಗೆ 59 ಜಾತಿಗಳನ್ನು ಸೇರಿಸಿದ್ದಾರೆ. ಸರ್ಕಾರದ ಬಳಿ ಹೋದರೆ ನಾವು ರಾಜಕೀಯ ನಿರ್ಣಯ ಕೈಗೊಂಡಿದ್ದೇವೆ ನೀವು ಬೇಕಾದರೆ ಕೋರ್ಟ್ ಗೆ ಹೋಗಿ ಅಂತ ಹೇಳುತ್ತಿದ್ದಾರೆ. ಮತ್ತೆ ಬಗೆಹರಿಯದ ಕಗ್ಗಂಟಾಗಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕ್ಷಮೆ ಕೇಳುತ್ತೀರಾ? :

ಸಿಎಂ ಸಿದ್ದರಾಮಯ್ಯ ರಾಜಕೀಯ ಅನುಭವಿಗಳಿದ್ದಾರೆ. ಆ ಸಮುದಾಯಗಳಿಗೆ ನ್ಯಾಯ ಕೊಡಿ, ನಾವು ಮೀಸಲಾತಿ ಹೆಚ್ಚಳ ಮಾಡಿದ್ದಾಗ ಅದನ್ನು ವಿರೋಧಿಸಿದ್ದೀರಿ, ಈಗ ಅದೇ ಆಧಾರದಲ್ಲಿ ಒಳ ಮೀಸಲಾತಿ ನೀಡಿದ್ದೀರಿ, ಈಗ ಆ ಜನರ ಕ್ಷಮೆ ಕೇಳುತ್ತೀರಾ ? ಇಲ್ಲವೇ ಇನ್ನೊಂದು ಪರ್ಸೆಂಟ್ ಹೆಚ್ಚಳ ಮಾಡಿ ಅವರಿಗೆ ನ್ಯಾಯ ಕೊಡಿಸುತ್ತೀರಾ. ಅವರಿಗೆ ಪ್ಯಾಕೆಜ್ ಕೊಡುವ ಬಗ್ಗೆ ಮಾತನಾಡುತ್ತಾರೆ. ಇದೇನು ವ್ಯವಹಾರಿಕ ಡೀಲಾ ಆ ಸಮುದಾಯಗಳಿಗೆ ಶಾಶ್ವತ ನ್ಯಾಯ ಕೊಡಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಮುಂದೆ ಬಿಜೆಪಿಯ ಬೇಡಿಕೆ ಏನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಬೇಡಿಕೆ ನಾಗಮೋಹನ ದಾಸ್ ವರದಿ ಒಪ್ಪಿಕೊಳ್ಳಬೇಕು. ಇನ್ನೊಂದು ಪರ್ಸೆಂಟ್ ಹೆಚ್ಚಳ ಮಾಡಿ ಅಲೆಮಾರಿಗಳಿಗೆ ನೀಡಿ, ಬೋವಿ, ಲಂಬಾಣಿಯವರಿಗೆ ನೀಡಿರುವ ಮೀಸಲಾತಿ ಇನ್ನೊಮ್ಮೆ ಪರಿಷ್ಕರಿಸಿ, ಎಕೆ, ಎಡಿ, ಎಎ ಸಮುದಾಯಗಳಿಗೆ ನ್ಯಾಯ ಕೊಡಬೇಕು. ಶಿಕ್ಷಣ ನೇಮಕಾತಿ ಹಾಗೂ ಭಡ್ತಿಯಲ್ಲಿ ಎಲ್ಲದರಲ್ಲೂ ಒಳ ಮೀಸಲಾತಿ ಪಾಲನೆಯಾಗಬೇಕು. ನಾವು ಬಿಜೆಪಿಯಿಂದ ಎಲ್ಲ ಸಮುದಾಯಗಳ ಜೊತೆಗೆ ನಿಲ್ಲುತ್ತೇವೆ. ಅವರಿಗೆ ನ್ಯಾಯ ಕೊಡಿಸಲು ಪ್ರಯತ್ನಿಸುತ್ತೇವೆ. ಸರ್ಕಾರದ ಮಟ್ಟದಲ್ಲಿ ಬಗೆಹರಿಸಲು ಅವಕಾಶ ಇದೆ. ಅದನ್ನು ಬಗೆ ಹರಿಸದಿದ್ದರೆ ಕಾನೂನು ಹೋರಾಟವನ್ನೂ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮಾಜಿ ಶಾಸಕ ಪಿ.ರಾಜೀವ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X