Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ...

ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ27 Jan 2024 9:06 PM IST
share
ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನಸಾಮಾನ್ಯರಿಗೆ ಉಚಿತವಾಗಿ ಡಯಾಲಿಸಿಸ್ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಶನಿವಾರ ಚಾಲನೆ ನೀಡಿದ್ದಾರೆ.

ನೂತನ ಡಯಾಲಿಸಿಸ್ ಯಂತ್ರಗಳ ಸೇವೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ನುಡಿದರು.

ಬಡವರಿಗೆ ಖಾಸಗಿ ವಲಯದಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುವುದು ಹೊರೆಯಾಗಿತ್ತು. ಹೀಗಾಗಿ ಉಚಿತ ಡಯಾಲಿಸಿಸ್ ಸೇವೆಯನ್ನು ಸರಕಾರದಿಂದ ಒದಗಿಸಲಾಗಿತ್ತು. ವ್ಯವಸ್ಥೆಯಲ್ಲಿದ್ದ ಕುಂದು ಕೋರತೆಗಳನ್ನು ಅರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡಯಾಲಿಸಿಸ್ ಸೇವೆಯನ್ನು ಸದೃಢಗೊಳಿಸುವ ಕೆಲಸ ಮಾಡುತ್ತಿರುವುದು ನನಗೆ ಸಂತಸ ತಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಯಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಬಡವರ ಬಗ್ಗೆ ಕಾಳಜಿ ವಹಿಸಿ ಸೇವೆ ಒದಗಿಸಬೇಕು. ಬಡವರಿಗೆ ಅನುಕೂಲವಾಗುವ ಡಯಾಲಿಸಿಸ್ ಆರೋಗ್ಯ ಸೇವೆಯನ್ನು ಇನ್ನಷ್ಟು ಹೆಚ್ಚಳ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸುಧಾರಣೆಯತ್ತ ದಿನೇಶ್ ಗುಂಡೂರಾವ್ ಕೊಂಡೊಯ್ಯಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಡಯಾಲಿಸಿಸ್ ಆರೋಗ್ಯ ಸೇವೆಯನ್ನ ಸದೃಢಗೊಳಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಎಲ್ಲೆಡೆ ಈ ಹಿಂದೆ ಇದ್ದ ಡಯಾಲಿಸಿಸ್ ವ್ಯವಸ್ಥೆ ಬಗ್ಗೆ ಸಾಕಷ್ಟು ದೂರುಗಳು ಸಾರ್ವಜನಿಕರಿಂದ ವ್ಯಕ್ತವಾಗುತ್ತಿತ್ತು. ಬಹುಬಳಕೆಯ ಡಯಾಲಿಸಿಸ್ ಯಂತ್ರಗಳಿಂದ ಕೆಲವೊಮ್ಮ ರೋಗಿಗಳಿಗೆ ಸೋಂಕು ತಗುಲುತ್ತಿತ್ತು. ಇದೆಲ್ಲವನ್ನು ಗಮನಿಸಿ ರಾಜ್ಯಾದ್ಯಂತ ಹೊಸ ಡಯಾಲಿಸಿಸ್ ಯಂತ್ರಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಳವಡಿಸಲು ತೀರ್ಮಾನಿಸಿದ್ದೆವು. ಸೋಂಕು ರಹಿತ ಡಯಾಲಿಸಿಸ್ ಆರೋಗ್ಯ ಸೇವೆ ಇನ್ಮುಂದೆ ರಾಜ್ಯದ ಜನಸಾಮಾನ್ಯರಿಗೆ ದೊರೆಯಲಿದೆ ಎಂದು ತಿಳಿಸಿದರು.

800 ಏಕಬಳಕೆಯ ಡಯಾಲೈಸರ್ ಯಂತ್ರಗಳಿಂದ ವಾರ್ಷಿಕ 7.20 ಲಕ್ಷ ಡಯಾಲಿಸಿಸ್ ಸೇವೆಗಳನ್ನು ಒದಗಿಸುವ ಸಾಮಥ್ರ್ಯ ಕಲ್ಪಿಸಲಾಗಿದೆ. ವಿಭಾಗವಾರು ಟೆಂಡರ್ ಮೂಲಕ ಬೆಂಗಳೂರು, ಮೈಸೂರು, ಬೆಳಗಾವಿ ವಿಭಾಗಗಳಲ್ಲಿ ನೂತನ ಡಯಾಲೈಸರ್ ಯಂತ್ರಗಳು ಅಳವಡಿಕೆಯಾಗಿವೆ. ಕಲಬುರಗಿ ವಿಭಾಗದಲ್ಲಿ ಮಾತ್ರ 127 ಹೊಸ ಯಂತ್ರಗಳ ಅಳವಡಿಕೆ ಕಾರ್ಯ ಮುಂದಿನ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿದ್ದ 171 ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗಿದ್ದು, 800 ಹೊಸ ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ 20 ನೂತನ ಏಕಬಳಕೆಯ ಡಯಾಲೈಸರ್ ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರು ವಿಭಾಗದ 57 ಡಯಾಲಿಸಿಸ್ ಕೇಂದ್ರಗಳಲ್ಲಿ 250 ಯಂತ್ರಗಳು, ಮೈಸೂರು ವಿಭಾಗದ 55 ಕೇಂದ್ರಗಳಲ್ಲಿ 222 ಯಂತ್ರಗಳು, ಬೆಳಗಾವಿ ವಿಭಾಗದ 62 ಕೇಂದ್ರಗಳಲ್ಲಿ 201 ಯಂತ್ರಗಳು, ಕಲಬುರಗಿ ವಿಭಾಗದ 45 ಕೇಂದ್ರಗಳಲ್ಲಿ 127 ಯಂತ್ರಗಳು ಸೇರಿದಂತೆ ಒಟ್ಟು 800 ಏಕಬಳಕೆಯ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದಿನಿಂದ 475 ಏಕಬಳಕೆಯ ಡಯಾಲೈಸರ್ ಗಳು ಕಾರ್ಯ ಆರಂಭಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Tags

Siddaramaiahಸಿದ್ದರಾಮಯ್ಯಡಯಾಲಿಸಿಸ್
share
ವಾರ್ತಾಭಾರತಿ
ವಾರ್ತಾಭಾರತಿ
Next Story
X