Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ...

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Jun 2024 7:29 PM IST
share
ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ನೀಡಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದರು.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಬಕಾರಿ ಇಲಾಖೆಯ ತೆರಿಗೆ ಸಂಗ್ರಹ ಸಾಮಥ್ರ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.

ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡಬೇಕು. ಇಲಾಖೆಯಲ್ಲಿ ಕಾನ್ಸ್ ಟೇಬಲ್, ಸಬ್ ಇನ್ಸ್‍ಪೆಕ್ಟರ್ ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು. ಇದೇ ವೇಳೆ ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಿದರು.

ಆನ್‍ಲೈನ್‍ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಅಬಕಾರಿ ಇಲಾಖೆಯ ಆಯುಕ್ತ ಡಾ . ರವಿಶಂಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X