Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೂತನ ಹೆಲ್ತ್ ಕಾರ್ಡ್ ಗೆ ಚಾಲನೆ ನೀಡಿದ...

ನೂತನ ಹೆಲ್ತ್ ಕಾರ್ಡ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗೆ ಹೊಸ ರೂಪ

ವಾರ್ತಾಭಾರತಿವಾರ್ತಾಭಾರತಿ6 Dec 2023 10:15 PM IST
share
ನೂತನ ಹೆಲ್ತ್ ಕಾರ್ಡ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ ಗಳನ್ನ ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನು, ಆಯುಷ್ಮಾನ್‌ ಭಾರತ್ - ಪ್ರಧಾನ ಮಂತ್ರಿ ಜನಾರೋಗ್ಯ - ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಕಾರ್ಡ್ ನಲ್ಲಿ ಕೆಲ ಬದಲಾವಣೆ ತರಲಾಗಿದ್ದು, ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್ ಗಳನ್ನ ವಿತರಿಸುವ ಗುರಿಯನ್ನ ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌ ನೂತನ ಕಾರ್ಡ್ ಗಳನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ.‌ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಒದಗಿಸಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದರು.

►ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್ ಗೆ ನೂತನ ಹೆಲ್ತ್ ಕಾರ್ಡ್ ಗಳನ್ನ ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್ ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

►ರಾಜ್ಯದಲ್ಲಿರುವ ಒಟ್ಟು 5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ “ಆಯುಷ್ಮಾನ್‌ ಭಾರತ್ - ಪ್ರಧಾನ ಮಂತ್ರಿ ಜನಾರೋಗ್ಯ - ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಕಾರ್ಡ್‌ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ.

►ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು ಶೇ 66 ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ.

►ಯೋಜನೆಯಡಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌

►ಎಪಿಎಲ್ ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಎಪಿಎಲ್ ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡು ದಾರರು ಶೇ 70 ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ, ಶೇ 30 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

►ಪ್ರಸ್ತುತ ರಾಜ್ಯದಲ್ಲಿ 3450 ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು“ಆಯುಷ್ಮಾನ್‌ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ - ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಲ್ಲಿ ಸೇವೆ ನೀಡಲು ನೊಂದಾಯಿಸಿಕೊಂಡಿರುತ್ತಾರೆ.

►ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲಾ ಸಾರ್ವಜನಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ.

171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ

►ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

►ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

►ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-ಒನ್ ಕೇಂದ್ರಗಳು ಅಥವಾ ನಾಗರೀಕ ಸೇವಾ “ಆಯುಷ್ಮಾನ್‌ ಭಾರತ್ - ಪ್ರಧಾನ ಮಂತ್ರಿ ಜನಾರೋಗ್ಯ - ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೊಂದಾಯಿಸಿ ಪಡೆಯಬಹುದಾಗಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X