Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 5 ಸಾವಿರ ಅಂಗನವಾಡಿಗಳಲ್ಲಿ...

5 ಸಾವಿರ ಅಂಗನವಾಡಿಗಳಲ್ಲಿ ಎಲ್‍ಕೆಜಿ-ಯುಕೆಜಿ, ಅಕ್ಕ ಪಡೆ ಸಹಿತ ಮೂರು ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 Nov 2025 8:21 PM IST
share
5 ಸಾವಿರ ಅಂಗನವಾಡಿಗಳಲ್ಲಿ ಎಲ್‍ಕೆಜಿ-ಯುಕೆಜಿ, ಅಕ್ಕ ಪಡೆ ಸಹಿತ ಮೂರು ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
‘ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ’

ಬೆಂಗಳೂರು: ‘ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಪ್ರಾಯೋಗಿಕವಾಗಿ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಮೂರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ(ಐಸಿಡಿಎಸ್) ಸುವರ್ಣ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ.

ಮೂರು ಯೋಜನೆಗಳ ಚಾಲನೆ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮಹಿಳೆಯರ ಸ್ವಾವಲಂಬನೆಗಾಗಿ ಆರಂಭಿಸಲಾಗಿರುವ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ, ಮಹಿಳೆಯರ ರಕ್ಷಣೆಗಾಗಿ ಆರಂಭಿಸಿರುವ ಅಕ್ಕಪಡೆ ಹಾಗೂ ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ, ಯುಕೆಜಿ ತರಗತಿಗಳು ಯಶಸ್ವಿಯಾಗಲಿ’ ಎಂದು ಆಶಿಸಿದರು.

ರಾಜ್ಯದಲ್ಲಿ 69,922 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ತರಗತಿಗಳನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ತರಗತಿಗಳನ್ನು ನಮ್ಮ ರಾಜ್ಯದಲ್ಲಿ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದಾಗ ಅವರ ದೂರದೃಷ್ಟಿಯಿಂದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು 1975ರ ಅಕ್ಟೋಬರ್ 2ರಂದು ಜಾರಿಗೆ ತಂದು 50 ವರ್ಷಗಳಾದ ಹಿನ್ನೆಲೆಯಲ್ಲಿ ಈ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಅವರು ಈ ಯೋಜನೆಯನ್ನು ಅಪೌಷ್ಠಿಕತೆಯಿಂದ ನರಳುತ್ತಿದ್ದ ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ಹಾಗೂ ಶಿಶು ಮತ್ತು ತಾಯಂದಿರ ಮರಣ ತಡೆಗಟ್ಟುವ ಉದ್ದೇಶದಿಂದ ಜಾರಿಗೆ ತಂದರು. ಇಂದು ಸುಮಾರು 40 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯದಲ್ಲಿ ಮೊದಲು ಟಿ.ನರಸೀಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರವನ್ನು ಪ್ರಾರಂಭಿಸಲಾಯಿತು ಹಾಗಾಗಿ ಇಂದಿರಾ ಗಾಂಧಿಯವರನ್ನು ಯಾವಾಗಲು ನೆನಪಿಸಿಕೊಳ್ಳಬೇಕು. ಈ ಯೋಜನೆಯನ್ನು ಜಾರಿಗೊಳಿಸದಿದ್ದರೆ ಇಂದು ಇಷ್ಟೊಂದು ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಈ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರಕಾರದ ನೇತೃತ್ವದಲ್ಲಿ ಜಾರಿಗೊಳಿಸಿದ್ದರೂ, ಹೆಚ್ಚಿನ ಹಣ ಕೊಡುತ್ತಿರುವುದು ರಾಜ್ಯ ಸರಕಾರ. ಕೇಂದ್ರ ಸರಕಾರ ಕೇವಲ 2,700 ರೂ. ಪಾವತಿಸಿದರೆ, ರಾಜ್ಯ ಸರಕಾರ 8,500 ರೂ.ಗಳನ್ನು ಪಾವತಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘಗಳ ರಚನೆ: ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘಗಳ ರಚನೆ ಮಾಡಿದ್ದು, ಇದು ಮುಂದಿನ ದಿನಗಳಲ್ಲಿ ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವಾವಲಂಬಿಗಳನ್ನಾಗಿಸುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗದಿದ್ದರೆ ಸಮಾಜದ ಅಭಿವೃದ್ಧಿ ಸಾಧ್ಯ ಇಲ್ಲ. ಸಮಾಜದಲ್ಲಿ ಅಸಮಾನತೆ ಇದ್ದು, ಅಕ್ಷರ ಸಂಸ್ಕøತಿಯಿಂದ ಕೆಲವು ಮಹಿಳೆಯರು ವಂಚಿತರಾಗಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇಂದು ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಅಂಕ ಪಡೆಯುತ್ತಿರುವುದು ಸಂತೋಷದ ವಿಷಯ. ಆದರೆ, ಹೆಣ್ಣು ಮಕ್ಕಳು 100ಕ್ಕೆ 100ರಷ್ಟು ಸಾಕ್ಷರತೆ ಹೊಂದಿಲ್ಲ. ಹೆಣ್ಣು ಮಕ್ಕಳಲ್ಲಿ ವೈಚಾರಿಕತೆ ಮತ್ತು ವೈಜ್ಞಾನಿಕವಾದ ಜ್ಞಾನ ಬರಬೇಕು. ಒಂದು ಹೆಣ್ಣು ವಿದ್ಯಾವಂತಳಾದರೆ, ಕುಟುಂಬದವರೆಲ್ಲಾ ವಿದ್ಯಾವಂತರಾಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮಹಿಳೆಯರಿಗೆ ಪ್ರಮುಖವಾದ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಿಂದ 600 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಇದರಿಂದ ಶೇ.30ರಷ್ಟು ಮಹಿಳೆಯರು ಉದ್ಯೋಗಸ್ಥರಾಗಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಬಲರಾಗಲು 1 ಕೋಟಿ 26 ಲಕ್ಷ ಕುಟುಂಬದ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ.ಗಳನ್ನು ಪಾವತಿಸುತ್ತಿದ್ದೇವೆ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಹಾಗೂ ಅವರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ಸರಕಾರದ ಉದ್ದೇಶ ಎಂದು ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣ ಖರ್ಚು ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿದವರ ಕಣ್ಣು ತೆರೆಯಬೇಕು. ಗ್ಯಾರಂಟಿ ಯೋಜನೆಯ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇವೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಸಮಾಜದಲ್ಲಿ ಎಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾದಾಗ ಮಾತ್ರ ಸ್ವಾತಂತ್ರ್ಯ ಬಂದುದಕ್ಕೆ ಸಾರ್ಥಕವಾಗಲಿದೆ ಎಂದು ಸಿದ್ದರಾಮಯ್ಯ ನುಡಿದರು.

ಇನ್ನು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಗೃಹ ಇಲಾಖೆಯ ಸಹಯೋಗದೊಂದಿಗೆ ರಾಜ್ಯಾದ್ಯಂತ ಅಕ್ಕ ಪಡೆ ಎಂಬ ವಿಶೇಷ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದರ ಬಗ್ಗೆ ಮಹಿಳೆಯರು, ವಿದ್ಯಾರ್ಥಿನಿಯರು ತಿಳಿದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ, ಇಲಾಖೆಗೆ ಎರಡೂವರೆ ವರ್ಷಗಳಿಂದ ಹೊಸ ಸ್ವರೂಪ ನೀಡಲಾಗಿದೆ. ಇಡೀ ರಾಷ್ಟ್ರವೇ ಕರ್ನಾಟಕದ ಮಾದರಿಯನ್ನು ಅನುಸರಿಸುತ್ತಿದೆ. ಕೇಂದ್ರ ಸರಕಾರ ಹಲವಾರು ರಾಜ್ಯಗಳಿಗೆ ನಮ್ಮ ಮಾದರಿಯನ್ನು ಅನುಸರಿಸುವಂತೆ ಇತರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಇದು ನಮ್ಮ ಸಾಧನೆಗೆ ಹಿಡಿದ ಕನ್ನಡಿಯಾಗಿದೆ ಎಂದರು.

ಇದೇ ವೇಳೆ ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯದ ಮಟ್ಟದ ಹಿರಿಯ ನಾಗರಿಕರ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಮಕ್ಕಳ ಕಲ್ಯಾಣ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಜೊತೆಗೆ 2025-26 ಸಾಲಿನ ಉತ್ತಮ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ.ಎಚ್.ಮುನಿಯಪ್ಪ, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್, ಜಯಮಾಲ, ಶಾಸಕರಾದ ಬಿ.ಕೆ.ಸಂಗಮೇಶ್, ರೂಪಕಲಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಆಸೀಫ್ ಸೇಠ್, ಉದಯ್, ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಬಲ್ಕಿಸ್ ಬಾನು, ಚನ್ನರಾಜ್ ಹಟ್ಟಿಹೊಳಿ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಕ್ಕಳಿಗೆ ಎರಡನೇ ತಾಯಿಯಿದ್ದಂತೆ:

‘ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಜವಾಬ್ದಾರಿಯಿಂದ, ಪ್ರಾಮಾಣಿಕವಾಗಿ ನಿಜವಾದ ಅರ್ಥದಲ್ಲಿ ಎರಡನೇ ತಾಯಿಯಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ದೇಶದ ಭವಿಷ್ಯದ ಪ್ರಜೆಗಳಾದ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಿ, ಶಿಕ್ಷಣ ನೀಡುತ್ತಿದ್ದು, ಶಿಶುಗಳ ಮರಣ ಪ್ರಮಾಣವನ್ನು ಕಡಿಮೆ ಮಾಡಿದ್ದಾರೆ. ಇದಕ್ಕಿಂತ ಉತ್ತಮವಾದ ಕೆಲಸ ಬೇರೆ ಇಲ್ಲ’

-ಸಿದ್ದರಾಮಯ್ಯ, ಮುಖ್ಯಮಂತ್ರಿ


95 ಸಾವಿರ ಕೋಟಿ ರೂ.ಮೀಸಲು:

‘ಸಮಾಜದಲ್ಲಿ ಪುರುಷ ಮತ್ತು ಮಹಿಳೆ ಎನ್ನುವ ಲಿಂಗ ತಾರತಮ್ಯ ಹೋಗಬೇಕು ಎನ್ನುವ ಉದ್ದೇಶದಿಂದ ಈ ವರ್ಷದ ಆಯವ್ಯಯದಲ್ಲಿ 95 ಸಾವಿರ ಕೋಟಿ ರೂ.ಗಳನ್ನು ಮಹಿಳೆಯರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದೇವೆ. ಲಿಂಗ ತಾರತಮ್ಯ ಹೋಗಲಾಡಿಸಲು ಸರಕಾರ ಪ್ರಯತ್ನ ಮಾಡುತ್ತಿದೆ. ಸಮಗ್ರ ಜನರಿಗೂ ಅನುಕೂಲವಾಗುವಂತಹ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಜಾತಿ-ಧರ್ಮದ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡುವುದಿಲ್ಲ’ ಎಂದು ಸಿದ್ದರಾಮಯ್ಯ ತಿಳಿಸಿದರು.

ಗೌರವ ಧನ ಹೆಚ್ಚಳಕ್ಕೆ ಸಚಿವೆ ಮನವಿ:

‘ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಹಿಂದಿನ ಕಾಂಗ್ರೆಸ್ ಸರಕಾರ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಗೌರವಧನ ಹೆಚ್ಚಳ ಮಾಡಿದ್ದರು. ನಂತರ 2024ರಲ್ಲೂ ಮತ್ತೆ ತಲಾ 1ಸಾವಿರ ರೂ.ಹೆಚ್ಚಿಸಿದ್ದಾರೆ. ತನ್ಮೂಲಕ ಕಾಂಗ್ರೆಸ್ ಕೊಟ್ಟ ಮಾತಿನಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈಗ ಪುನಃ 1ಸಾವಿರ ರೂ.ಹೆಚ್ಚಿಸಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಳಿ ಮನವಿ ಮಾಡಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X