Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ...

ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಕುರಿತು ಪರಿಶೀಲನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 April 2025 8:26 PM IST
share
ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಕುರಿತು ಪರಿಶೀಲನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಸೇರಿದಂತೆ ಎಲ್ಲ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಬೇಡಿಕೆಗಳ ಈಡೇರಿಕೆ ಕುರಿತಾಗಿ ಕಾರ್ಮಿಕ ಸಂಘಟನೆಗಳೊಂದಿಗೆ ಮತ್ತೊಮ್ಮೆ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಂಗಳವಾರ ನಗರದಲ್ಲಿರುವ ಸಿಎಂ ನಿವಾಸ ಕಾವೇರಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರಕಾರ ಯಾವತ್ತೂ ದುಡಿಯುವ ವರ್ಗದ ಪರವಾಗಿದೆ ಎಂದು ಆಶ್ವಾಸನೆ ನೀಡಿದರು.

ಹಿಂದಿನ ಸರಕಾರ ಸುಮಾರು 40 ಸಾವಿರ ಕೋಟಿ ರೂ. ಬಾಕಿ ಬಿಲ್‍ಗಳನ್ನು ಉಳಿಸಿ ಹೋಗಿದೆ. ಇದು ಸರಕಾರದ ಮೇಲೆ ಆರ್ಥಿಕ ಹೊರೆ ಉಂಟು ಮಾಡಲು ಕಾರಣವಾಗಿದೆ. ಸರಕಾರದ ಇತಿಮಿತಿಯ ಒಳಗಾಗಿ ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದರು.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸಂಸ್ಥೆಗೆ ರೂ. 4ಸಾವಿರ ಕೋಟಿಯಷ್ಟು ಮೊತ್ತವನ್ನು ಹಿಂದಿನ ಸರಕಾರ ಬಾಕಿ ಉಳಿಸಿ ಹೋಗಿತ್ತು. ಸಂಸ್ಥೆಯನ್ನು ಬಲಪಡಿಸಲು ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ನೌಕರರಿಗೆ ನಗದು ರಹಿತ ಚಿಕಿತ್ಸೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಚಾಲಕ ಮತ್ತು ನಿರ್ವಾಹಕರ ಮಾದರಿಯಲ್ಲಿ ಮೆಕ್ಯಾನಿಕ್‍ಗಳ ನೇಮಕಾತಿಗೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ನಸೀರ್ ಅಹ್ಮದ್, ಸಾರಿಗೆ ನಿಗಮಗಳ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ರಾಜು ಕಾಗೆ, ಕೆಎಸ್ಸಾರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬಾರಾವ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಶನ್‍ನ ಎಚ್.ಡಿ.ರೇವಪ್ಪ, ಬಿ. ಜಯದೇವರಾಜೇ ಅರಸು ಮತ್ತಿತರರು ಉಪಸ್ಥಿತರಿದ್ದರು.

ಕಾರ್ಮಿಕ ಮುಖಂಡರ ಬೇಡಿಕೆಗಳು :

•2024ರ ಜ.1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳ ಮತ್ತು ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಸರಕಾರಿ ನೌಕರರಿಗೆ ಸರಿ ಸಮಾನವಾದ ವೇತನವನ್ನು ಸಾರಿಗೆ ನೌಕರರಿಗೂ ಜಾರಿಗೊಳಿಸಬೇಕು.

•2020ರ ಜ.1ರಿಂದ ಜಾರಿಯಾಗಬೇಕಾದ ವೇತನ ಪರಿಷ್ಕರಣೆ, 2023ರ ಮಾ.1ರಂದು ಅನುಷ್ಠಾನಕ್ಕೆ ಬಂದಿದ್ದು, 38 ತಿಂಗಳ ಬಾಕಿ ಹಣವನ್ನು ಪಾವತಿಸಬೇಕು.

•ಈ ಹಿಂದೆ 2020 ಮತ್ತು 2021ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು.

•ಸಾರಿಗೆ ನಿಗಮದ ವಿದ್ಯುತ್ ಬಸ್‍ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು. ಸದರಿ ಬಸ್‍ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿಯನ್ನು ಕೈಬಿಡಬೇಕು.

•ಕೂಡಲೇ ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡಬೇಕು.

•ಸಾರಿಗೆ ಕಾರ್ಮಿಕರಿಗೆ ಇನ್‍ಕ್ರಿಮೆಂಟ್, ಬಾಟ, ಇತರೆ ಭತ್ಯೆ ಹಾಗೂ ಮೂಲಭೂತ ಸೌಲಭ್ಯ ನೀಡಬೇಕು.

‘ಈ ವರ್ಷದ ಬಜೆಟ್‍ನಲ್ಲಿ 350 ಕೋಟಿ ರೂ. ಸಾಲವನ್ನು ಪಡೆಯಲು ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆಗೆ ಅನುಮತಿ ನೀಡಲಾಗಿದೆ. ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಲು 2 ಸಾವಿರ ಹೊಸ ಬಸ್‍ಗಳನ್ನು ಖರೀದಿ ಮಾಡಲಾಗುವುದು’

-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X