Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ತೆರಿಗೆ ಹಂಚಿಕೆ ಕುರಿತು ಚರ್ಚೆ

ವಾರ್ತಾಭಾರತಿವಾರ್ತಾಭಾರತಿ24 Jun 2025 7:10 PM IST
share
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ: ರಾಜ್ಯಗಳ ನಡುವಿನ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೆ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ತೆರಿಗೆ ಹಂಚಿಕೆ ಕುರಿತು ಚರ್ಚೆ ನಡೆಸಿದ ಅವರು, 15ನೆ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೆ ಹಣಕಾಸು ಆಯೋಗಕ್ಕೆ ಹೋಲಿಸಿದರೆ, 15ನೆ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ ಎಂದು ವಿವರಿಸಿದರು.

ಇದಲ್ಲದೇ, 15ನೆ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದರೂ 11,495 ಕೋಟಿ ರೂ.ಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೆ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು 80 ಸಾವಿರ ಕೋಟಿ ರೂ.ಗಳು ರಾಜ್ಯಕ್ಕೆ ನಷ್ಟವಾಗಿದೆ. 15ನೆ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸೂತ್ರವನ್ನು ಲೆಕ್ಕ ಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ನಷ್ಟವಾಯಿತು ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು.

15ನೆ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನಂದಂಡದ ಅಂಕವನ್ನು ಶೇ.20ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ(ಜಿಡಿಪಿ) ರಾಜ್ಯಗಳು ನೀಡುವ ಕೊಡುಗೆ ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20ರಷ್ಟು ಅಂಕವನ್ನು ನೀಡಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿದರು.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ. ಏಕೆಂದರೆ, ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ(ಎಫ್‍ಆರ್‍ಬಿಎಂ) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೆ ಹಣಕಾಸು ಆಯೋಗವು, ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92ರಷ್ಟನ್ನು ರಾಜಸ್ವ ಕೊರತೆ ಅನುದಾಗಳೆಂದು ಶಿಫಾರಸ್ಸು ಮಾಡಿತ್ತು. ಆದುದರಿಂದ, ಕೇಂದ್ರ ಸರಕಾರದ ಒಟ್ಟು ಸ್ವೀಕೃತಿಗಳ ಶೇ.1.92ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲ ರಾಜ್ಯಗಳಿಗೂ ಹಂಚಿಕೆ ಮಾಡಬೇಕು ಎಂದು ಅವರು ಪ್ರಸ್ತಾಪಿಸಿದರು.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಕೇಂದ್ರ ಹಣಕಾಸು ಸಚಿವರ ಮುಂದೆ ಪಸ್ತಾಪಿಸಿದ ಮುಖ್ಯಮಂತ್ರಿ, ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿಕೊಟ್ಟರು. ಅಲ್ಲದೇ, ರಾಜ್ಯದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಹೇಳಿದರು.

16ನೆ ಹಣಕಾಸು ಆಯೋಗಕ್ಕೆ ಕೇಂದ್ರ ಸರಕಾರ ಸಲ್ಲಿಸಿರುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡಿದ ಸಿದ್ದರಾಮಯ್ಯ, ಎಲ್ಲ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ @siddaramaiah ಅವರು ಕೇಂದ್ರ ಹಣಕಾಸು ಸಚಿವೆ @nsitharaman ಅವರನ್ನು ಭೇಟಿಯಾಗಿ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು 16ನೇ ಹಣಕಾಸು ಆಯೋಗದಲ್ಲಿ ಸರಿದೂಗಿಸುವುದು, ರಾಜ್ಯದ ನ್ಯಾಯಯುತ ಪಾಲನ್ನು ಒದಗಿಸುವುದು ಸೇರಿದಂತೆ ಹಲವು ಸಂಗತಿಗಳ ಕುರಿತು ಚರ್ಚಿಸಿ ರಾಜ್ಯದ ಪರವಾಗಿ ಮನವಿ ಸಲ್ಲಿಸಿದರು. pic.twitter.com/xMAUpVupMr

— CM of Karnataka (@CMofKarnataka) June 24, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X