Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರದ ಯೋಜನೆಗಳನ್ನು ಶ್ಲಾಘಿಸಿ ಪತ್ರ...

ಸರಕಾರದ ಯೋಜನೆಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ವಿದ್ಯಾರ್ಥಿನಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 Sept 2023 5:16 PM IST
share
ಸರಕಾರದ ಯೋಜನೆಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ವಿದ್ಯಾರ್ಥಿನಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ( ಮೊಟ್ಟೆ ) ನೀಡುವುದೂ ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿ ತಮಗೆ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ.

ವಿದ್ಯಾರ್ಥಿನಿಯನ್ನು ಭೇಟಿಯಾದ ಫೋಟೊ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ʼʼ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ( ಮೊಟ್ಟೆ ) ನೀಡುವುದೂ ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಇಂದು ಭೇಟಿಮಾಡಿದೆ. ಕೃಷಿ ಮೇಳ ಉದ್ಘಾಟನೆಗೆ ಧಾರವಾಡಕ್ಕೆ ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಮಾತನಾಡಿದ್ದು ನನಗೆ ಖುಷಿ ಕೊಟ್ಟಿದೆʼʼ ಎಂದು ತಿಳಿಸಿದ್ದಾರೆ.

ʼʼನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳು, ವಿದ್ಯಾರ್ಥಿಸ್ನೇಹಿ ಕಾರ್ಯಕ್ರಮಗಳ ಮೂಲಕ ನಾಡಿನ ಜನತೆಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸ್ವಾವಲಂಬಿ ಬದುಕಿನ ಕನಸಿಗೆ ಬೆಂಬಲವಾಗಿ ನಿಂತಿದೆ. ನಮ್ಮ ಈ ಯೋಜನೆಗಳ ಫಲಾನುಭವಿಯಾದ ಪುಟ್ಟ ಹುಡುಗಿಯೊಬ್ಬಳು ನನ್ನೊಂದಿಗೆ ಪತ್ರದ ಮೂಲಕ ತನ್ನ ಸಂತಸ ಹಂಚಿಕೊಂಡು, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಳು. ಪತ್ರ ಓದಿದಾಗಿಂದ ಆ ಮಗುವನ್ನು ಒಮ್ಮೆ ಭೇಟಿಯಾಗಬೇಕೆಂದು ಬಯಸಿದ್ದೆ, ಅದು ಇಂದು ಸಾಧ್ಯವಾಯಿತುʼʼ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ʼʼಇಂತಹ ಮುಗ್ಧ ಮಕ್ಕಳ ಭವಿಷ್ಯದ ಕನಸುಗಳು ನಮ್ಮ ಸರ್ಕಾರದ ಕೈಗಳಲ್ಲಿ ಸುರಕ್ಷಿತವಾಗಿದೆ. ಈ ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆʼʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂಗೆ ಬರೆದ ವಿದ್ಯಾರ್ಥಿನಿ ಪತ್ರದಲ್ಲಿ ಏನಿದೆ?

ʼʼ2ನೇ ಬಾರಿಗೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ತಮ್ಮನ್ನು ಅಭಿನಂದಿಸುತ್ತೇನೆ. ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ದೊರಕಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ಮೊಟ್ಟೆ, ಹಾಲು ವಿತರಣೆ ಯೋಜನೆ ಅತ್ಯುತ್ತಮ ಯೋಜನೆಯಾಗಿದೆ. ಅಲ್ಲದೇ, ತಾವು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸುತ್ತೀರಿ ಎಂದು ಆಶಿಸುತ್ತಾ ತಮ್ಮಲ್ಲಿ ವಿಶೇಷವಾಗಿ ವಿನಂತಿಸುವುದೇನೆಂದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ತಾವು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕುʼʼ ಎಂದು ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X