Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಪಾಲರ ನಡೆ ಜನಪ್ರತಿನಿಧಿ ಸಭೆಗೆ...

ರಾಜ್ಯಪಾಲರ ನಡೆ ಜನಪ್ರತಿನಿಧಿ ಸಭೆಗೆ ಎಸಗಿದ ಅವಮಾನ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Jan 2026 8:47 PM IST
share
ರಾಜ್ಯಪಾಲರ ನಡೆ ಜನಪ್ರತಿನಿಧಿ ಸಭೆಗೆ ಎಸಗಿದ ಅವಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿರುವುದಲ್ಲದೆ, ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಎಸಗಿದ ಅವಮಾನ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಗುರುವಾರ ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲ ಭಾಷಣ ಮೊಟಕುಗೊಳಿಸಿದ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಿವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯಾ ರಾಜ್ಯಪಾಲರ ಕರ್ತವ್ಯ ಎಂದು ಹೇಳಿದರು.

ಅದರಲ್ಲೂ, ಸಂವಿಧಾನ ಕಲಂ176 ಮತ್ತು 163 ರಂತೆ ಸರಕಾರದ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದೆ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡಿರುವ ಪದ್ಧತಿ. ಆದರೆ, ರಾಜ್ಯಪಾಲರು ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ ಎಂದರು.

ಇಂತಹ ಸಂವಿಧಾನ ವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ಪಕ್ಷ ಮತ್ತು ಸರಕಾರ ಪ್ರತಿಭಟನೆ ಮಾಡಲಿದ್ದು, ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ ಎಂದು ಸಿದ್ದರಾಮಯ್ಯ ಆಪಾದಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ರದ್ದುಪಡಿಸಿ, ‘ವಿಬಿ-ಜಿ ರಾಮ್ ಜಿ’ ಎಂಬ ಕಾಯ್ದೆಯನ್ನು ಕೇಂದ್ರ ಸರಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರಕಾರದ ತೀವ್ರ ವಿರೋಧವಿದೆ ಎಂದ ಅವರು, ಮೊದಲು ಕಾಯ್ದೆಯಿಂದ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಸಂವಿಧಾನ ನಿರ್ದೇಶನಗಳಂತೆ, ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗುತ್ತಿದೆ ಎಂದು ಉಲ್ಲೇಖಿಸಿದರು.

ಕೇಂದ್ರ ಸರಕಾರದ ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರಕಾರ ಕೈಗೊಳ್ಳುತ್ತದೆ. ಕೇಂದ್ರ ಸರಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೇ ಮತ್ತು ಪಂಚಾಯಿತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ವಿವರಿಸಿದರು.

ಇನ್ನೊಂದೆಡೆ, ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ವಿರೋಧ ಪಕ್ಷದ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಯಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿದೆ ಎಂದು ಸಿದ್ದರಾಮಯ್ಯ ನುಡಿದರು.

ಹೊಸ ಕಾಯ್ದೆ ರದ್ದುಗೊಳ್ಳಲೇಬೇಕು: ‘ಮನರೇಗಾ ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದೇ ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮನರೇಗಾ ಮರುಸ್ಥಾಪನೆ ಮಾಡುವವರೆಗೆ ನಿರಂತರವಾಗಿ ನಮ್ಮ ಹೋರಾಟ ನಡೆಯಲಿದೆ. ಈ ಹಿಂದೆ ರೈತರ ವಿರೋಧಿ ಕಾಯ್ದೆಯನ್ನು ಕೇಂದ್ರ ಸರಕಾರ ವಾಪಸ್ಸು ತೆಗೆದುಕೊಂಡಂತೆ, ಈ ಹೊಸ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳುವವರೆಗೆ ನಮ್ಮ ಹೋರಾಟ ನಡೆಯಲಿದೆ’ ಎಂದು ಸಿದ್ದರಾಮಯ್ಯ ಹೇಳಿದರು.

ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು: ‘ಕೇಂದ್ರ ಸರಕಾರ ರಾಜ್ಯಪಾಲರನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಅಧಿವೇಶನದಲ್ಲಿ ಕೇವಲ 5 ನಿಮಿಷ ಓದಿ ಹೋಗಿದ್ದಾರೆ. ಕೇಂದ್ರ ಸರಕಾರ ಪ್ರಜಾಪ್ರಭುತ್ವವನ್ನು ಶಿಥಿಲಗೊಳಿಸುವ ಕೆಲಸ ಮಾಡುತ್ತಿದೆ. ರಾಜ್ಯಪಾಲರು ಕಾನೂನು ಚೌಕಟ್ಟಿನಲ್ಲಿ ಅವರ ಕೆಲಸ ಮಾಡಬೇಕು ಎನ್ನುವುದನ್ನು ಮರೆಯಬಾರದು’

-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ


ಸದನದ ಪಾವಿತ್ರ್ಯತೆ ಹಾಳು:

‘ಈ ರಾಜ್ಯ ಸರಕಾರವು ಸದನದ ಪಾವಿತ್ರ್ಯತೆಯನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿರುವುದು ದುರ್ದೈವ. ಸದನವು ಈ ನಾಡಿನ ಏಳಿಗೆಗೆ, ನಾಡಿನ ಅಭಿವೃದ್ಧಿಗೆ ಸಂಬಂಧಿಸಿ ಚರ್ಚೆ ಆಗಲು ವೇದಿಕೆ ಆಗಬೇಕೇ ಹೊರತು ಇವರ ರಾಜಕೀಯ ದ್ವೇಷಕ್ಕಾಗಿ ರಾಜ್ಯವನ್ನು ಕೇಂದ್ರ ಸರಕಾರದ ವಿರುದ್ಧ ಎತ್ತಿ ಕಟ್ಟುವ ಷಡ್ಯಂತ್ರ-ಕುತಂತ್ರಕ್ಕೆ ಸದನವನ್ನು ಬಳಸುವುದನ್ನು ಬಿಜೆಪಿ ವಿರೋಧಿಸುತ್ತದೆ’

-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ


‘ಕಾಂಗ್ರೆಸ್ಸಿನ ಗೂಂಡಾಗಿರಿ ಕೇವಲ ರಸ್ತೆಗಳಿಗೆ ಸೀಮಿತವಾಗಿತ್ತು. ಈಗ ಅದು ಸದನ ಪ್ರವೇಶವನ್ನೂ ಮಾಡಿದೆ. ರಾಜ್ಯಪಾಲರು ಭಾಷಣ ಓದುವ ಸಂದರ್ಭದಲ್ಲಿ ಕೆಲವು ಸದಸ್ಯರು ಅವರ ಮೇಲೆ ಬಿದ್ದು ಅವರನ್ನು ಥಳಿಸುವ ಹಂತಕ್ಕೂ ಬಂದಿದ್ದುದು, ಈಗಾಗಲೇ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ನಾವು ಖಂಡಿಸುತ್ತೇವೆ’

-ಛಲವಾದಿ ನಾರಾಯಣಸ್ವಾಮಿ, ವಿಪಕ್ಷ, ವಿಧಾನ ಪರಿಷತ್ತು


‘ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ. ರಾಜ್ಯಪಾಲರಿಗೆ ಯಾರೆಲ್ಲ ಅಗೌರವ ತೋರಿಸಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು. ಒಟ್ಟಿನಲ್ಲಿ ಕಾಂಗ್ರೆಸ್ ಗೂಂಡಾ ಪ್ರವೃತ್ತಿಯನ್ನ ಮುಂದುವರೆಸಿದೆ. ಕಾಂಗ್ರೆಸ್‍ನ ಸದಸ್ಯರಿಗೆ ನಾಚಿಕೆಯಾಗಬೇಕು. ರಾಜ್ಯಪಾಲರನ್ನು ಅಡ್ಡಗಟ್ಟಿ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸುತ್ತೆ’

-ಆರ್.ಅಶೋಕ್, ವಿಪಕ್ಷ ನಾಯಕ, ವಿಧಾನಸಭೆ


Tags

CM SiddaramaiahKarnataka GovernorThaawarchand Gehlot
share
ವಾರ್ತಾಭಾರತಿ
ವಾರ್ತಾಭಾರತಿ
Next Story
X