Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ...

ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಕುಮಾರಸ್ವಾಮಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 Oct 2023 10:44 PM IST
share
ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಕುಮಾರಸ್ವಾಮಿ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಎಚ್. ಡಿ.ಕುಮಾರಸ್ವಾಮಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗಿಂತ ಜಾಸ್ತಿ ಹತಾಶರಾಗಿರುವುದು ಕುಮಾರಸ್ವಾಮಿ ಎಂದು ಅವರು ಹೇಳಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಮುಖ್ಯಮಂತ್ರಿಯನ್ನು ಮಹಾಭಾರತದ ಎಲ್ಲ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಸರಕಾರ ಬಿದ್ದುಹೋಗುವಾಗ ಅವರು ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್‌ನಲ್ಲಿ ಕಾಲಕಳೆಯುತ್ತಿದ್ದರು. ಇವರು ನಮಗೆ ಹೇಳಿಕೊಡಬೇಕೇ ಎಂದು ಪ್ರಶ್ನಿಸಿದರು.

‘ಕುಮಾರಸ್ವಾಮಿ ಅವರ ಸರಕಾರವನ್ನು ಸಿದ್ದರಾಮಯ್ಯ ಅವರೇ ಬೀಳಿಸಿದ್ದು, ಅದನ್ನು ಅವರು ಒಪ್ಪಿಕೊಳ್ಳಲಿ’ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿ, ವಿಧಾನಮಂಡಲದ ವಿಶ್ವಾಸ ಮತಯಾಚನೆಯಾದ ಸಂದರ್ಭದಲ್ಲಿ ಸರಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ರೆಕಾರ್ಡ್‌ನಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ. ಈಗ ಬೇರೆ ತರ ಹೇಳುತ್ತಿದ್ದಾರೆ. ಹಾಗಾದರೆ ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದರು.

‘ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ’

ಆಪರೇಷನ್ ಕಮಲ ಮಾಡಿ 25 ಕೋಟಿ ರೂ. ನೀಡಿ ಶಾಸಕರನ್ನು ಖರೀದಿಸಿ 25 ಕೋಟಿ ರೂ. ಚುನಾವಣೆಗೆ ಖರ್ಚು ಮಾಡಿದವರು ಬಿಜೆಪಿಯವರು. ಅವರು ನಮ್ಮ ಬಗ್ಗೆ ಎಟಿಎಂ ಸರಕಾರ ಎನ್ನುವುದಕ್ಕೆ ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬರದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದಕ್ಕೆ ಬಿಜೆಪಿ ಕಾರಣ. ಬಿಜೆಪಿ 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು. ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ. ಏನೂ ಮಾಡಿದ್ದಾರೆ 3 ವರ್ಷ 10 ತಿಂಗಳಲ್ಲಿ ಎಂದು ಪ್ರಶ್ನಿಸಿದರು.

ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್‌ಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್‌ಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ. ರಾಜ್ಯವನ್ನು ಹಾಳು ಮಾಡಿದ್ದಕ್ಕೆ ಜನರು ಬಿಜೆಪಿಯನ್ನು ತಿರಸ್ಕರಿದ್ದಾರೆ. ಈಗ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಾರೆ ಹೊರತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X