Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೆ.26ರಂದು ಕೆಎಚ್ಐಆರ್ ಸಿಟಿ ಯೋಜನೆಗೆ...

ಸೆ.26ರಂದು ಕೆಎಚ್ಐಆರ್ ಸಿಟಿ ಯೋಜನೆಗೆ ಸಿಎಂ ಚಾಲನೆ: ಎಂ ಬಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ22 Sept 2024 2:33 PM IST
share
ಸೆ.26ರಂದು ಕೆಎಚ್ಐಆರ್ ಸಿಟಿ ಯೋಜನೆಗೆ ಸಿಎಂ ಚಾಲನೆ: ಎಂ ಬಿ ಪಾಟೀಲ್

ಬೆಂಗಳೂರು: ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್ಐಆರ್ (ನಾಲೆಡ್ಜ್-ಹೆಲ್ತ್-ಇನ್ನೋವೇಶನ್-ರೀಸರ್ಚ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.26ರಂದು ಚಾಲನೆ ನೀಡಲಿದ್ದಾರೆ. ಇದರ ಅಂಗವಾಗಿ ಅಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ಇದರಲ್ಲಿ ದೇಶ-ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಒಟ್ಟು 2,000 ಎಕರೆ ವಿಸ್ತೀರ್ಣದಲ್ಲಿ ಈ ಯೋಜಿತ ನಗರ ಮೈದಾಳಲಿದೆ. ಈ ಪೈಕಿ ಮೊದಲ ಹಂತದಲ್ಲಿ 500 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಸಾಕಾರಗೊಳ್ಳಲಿದೆ. 40 ಸಾವಿರ ಕೋಟಿ ರೂ. ಹೂಡಿಕೆಯ ಈ ಯೋಜನೆಯಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ’ ಎಂದಿದ್ದಾರೆ.

ಸಿಂಗಾಪುರದ ಬಯೊಪೋಲಿಸ್, ರೀಸರ್ಚ್ ಟ್ರ್ಯಾಂಗಲ್ ಪಾರ್ಕ್, ಸೈನ್ಸ್ ಪಾರ್ಕ್, ಕೆಬಿಐಸಿ, ಅಮೆರಿಕದ ಬೋಸ್ಟನ್ ಇನ್ನೋವೇಶನ್ ಕ್ಲಸ್ಟರ್ ಇದಕ್ಕೆ ಮಾದರಿಯಾಗಿದೆ. ಜತೆಗೆ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಪಡಿಸಿರುವ ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿಯ ಮಾನದಂಡಗಳನ್ನೂ ಇಟ್ಟುಕೊಳ್ಳಲಾಗಿದೆ. ದೊಡ್ಡಬಳ್ಳಾಪುರ- ಡಾಬಸಪೇಟೆ ನಡುವೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ಕಿ.ಮೀ. ದೂರದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಯೇ ಈ ಪರಿಕಲ್ಪನೆಯ ಆಧಾರಸ್ತಂಭಗಳಾಗಿವೆ. ಜೀವವಿಜ್ಞಾನಗಳು, ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್ ಮ್ಯಾನುಫ್ಯಾಕ್ಚರಿಂಗ್ ಮತ್ತು ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಿಗೆ ಇಲ್ಲಿ ಆದ್ಯತೆ ನೀಡಲಾಗುವುದು. ಈ ವಲಯಗಳಿಗೆ ಸಂಬಂಧಿಸಿದ ಜಾಗತಿಕ ಮಟ್ಟದ ಉತ್ಕೃಷ್ಟ ವಿ.ವಿ.ಗಳು, ಸಂಶೋಧನಾಲಯಗಳು, ಆಸ್ಪತ್ರೆಗಳು ಮತ್ತು ಕಂಪನಿಗಳು ಕೆಎಚ್ಐಆರ್ ಸಿಟಿಯಲ್ಲಿ ನೆಲೆಯೂರಿ, ತಮ್ಮ ಚಟುವಟಿಕೆ ಆರಂಭಿಸಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉದ್ದೇಶಿತ ಕೆಎಚ್ಐಆರ್ ಸಿಟಿಯಲ್ಲಿ ವಿಖ್ಯಾತ ಕಂಪನಿಗಳ ಆರ್ & ಡಿ ಕೇಂದ್ರಗಳು, ಗ್ಲೋಬಲ್ ಕೆಪಾಸಿಟಿ ಸೆಂಟರುಗಳು ಬರಲಿವೆ. ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಡಾ.ದೇವಿಶೆಟ್ಟಿ, ಕಿರಣ್ ಮಜುಂದಾರ್ ಷಾ, ಪ್ರಶಾಂತ ಪ್ರಕಾಶ, ಥಾಮಸ್ ಓಶಾ, ರಾಂಚ್ ಕಿಂಬಾಲ್, ಮೋಹನದಾಸ್ ಪೈ, ನಿಖಿಲ್ ಕಾಮತ್ ಮುಂತಾದ ಖ್ಯಾತನಾಮರನ್ನು ಒಳಗೊಂಡ ಸಲಹಾ ಸಮಿತಿ ರಚಿಸಲಾಗಿದೆ. ಇಲ್ಲಿ ಪ್ರತಿ ಎಕರೆಗೆ 100 ಜನರ ವಸತಿ ಇರುವಂತೆ ನೋಡಿಕೊಳ್ಳುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಐಐಎಸ್ಸಿ, ನಾಸ್ಕಾಂ ಎಕ್ಸಲೆನ್ಸ್ ಸೆಂಟರ್, ರಾಷ್ಟ್ರೀಯ ವಿನ್ಯಾಸ ಸಂಸ್ಥೆ, ಐಐಟಿ, ಐಐಎಂ, ಸೆಂಟರ್ ಫಾರ್ ಎಐ & ರೋಬೋಟಿಕ್ಸ್, ಸೆಂಟರ್ ಫಾರ್ ನ್ಯಾನೋ & ಸಾಫ್ಟ್ ಮ್ಯಾಟರ್ ಸೈನ್ಸಸ್ ಮುಂತಾದ ಉತ್ಕೃಷ್ಟ ಸಂಸ್ಥೆಗಳಿವೆ. ಜೊತೆಗೆ ಐಟಿ, ಬಿಟಿ, ಔಷಧ ವಿಜ್ಞಾನ, ವೈದ್ಯಕೀಯ ಸಾಧನಗಳ ಉತ್ಪಾದನೆ ಇವುಗಳಲ್ಲಿ ಬೆಂಗಳೂರಿನ ಸಾಧನೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಕೆಎಚ್ಐಆರ್ ಸಿಟಿಯಲ್ಲಿ ಜಗತ್ತಿನ ಅಗ್ರಮಾನ್ಯ 500 ಶಿಕ್ಷಣ ಸಂಸ್ಥೆಗಳ ಸ್ಥಳೀಯ ಕ್ಯಾಂಪಸ್ ಬರಲು ಇನ್ನು ಹಾದಿ ಸುಗಮವಾಗಲಿದೆ. ಅಲ್ಲದೆ, ವೈದ್ಯಕೀಯ ಪ್ರವಾಸೋದ್ಯಮ ಇತ್ಯಾದಿಗಳಿಗೂ ಹೇರಳ ಅವಕಾಶ ಸೃಷ್ಟಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X