ಜ.28ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯಕ್ಕೆ ಸಿಎಂ ಉತ್ತರ: ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಜ.27, 28ರಂದು ಚರ್ಚೆ ನಡೆಯಲಿದೆ. ಜ.28ರ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಈ ಚರ್ಚೆಗೆ ಸಂಬಂಧಿಸಿದಂತೆ ಉತ್ತರ ನೀಡಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಪ್ರಕಟಿಸಿದರು.
ಶುಕ್ರವಾರ ಭೋಜನ ವಿರಾಮದ ಬಳಿಕ ವಿಧಾನಸಭೆ ಸಮಾವೇಶಗೊಳ್ಳುತ್ತಿದ್ದಂತೆ ಸದನ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಪ್ರಕಟಿಸಿದ ಅವರು, ಜ.29ರಿಂದ 31ರ ವರೆಗೆ ಸರಕಾರದಿಂದ ಸೂಚಿಸಲ್ಪಟ್ಟಿರುವ ನಿರ್ಣಯದ ಕುರಿತು ಚರ್ಚೆ ನಡೆಯಲಿದೆ. ಜ.31ರಂದು ಶನಿವಾರ ಮುಖ್ಯಮಂತ್ರಿ ನಿರ್ಣಯಕ್ಕೆ ಸಂಬಂಧಿಸಿದಂತೆ ನಡೆಯುವ ಚರ್ಚೆಗೆ ಉತ್ತರ ನೀಡಲಿದ್ದಾರೆ. ಜ.28ರಿಂದ 31ರ ವರೆಗೆ ಸದನವನ್ನು ಬೆಳಗ್ಗೆ 9.30ಕ್ಕೆ ಆರಂಭಿಸಲಾಗುವುದು ಎಂದು ಹೇಳಿದರು.
Next Story





