Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಹಿರಂಗ ಚರ್ಚೆಗೆ ಪ್ರಧಾನಿಗಳಿಗೆ ಸಿಎಂ...

ಬಹಿರಂಗ ಚರ್ಚೆಗೆ ಪ್ರಧಾನಿಗಳಿಗೆ ಸಿಎಂ ಪಂಥಾಹ್ವಾನ ಉದ್ಧಟತನದ ಪರಮಾವಧಿ: ಎಚ್.ಡಿ.ಕುಮಾರಸ್ವಾಮಿ ಕಿಡಿ

ವಾರ್ತಾಭಾರತಿವಾರ್ತಾಭಾರತಿ18 Jan 2024 3:24 PM IST
share
ಬಹಿರಂಗ ಚರ್ಚೆಗೆ ಪ್ರಧಾನಿಗಳಿಗೆ ಸಿಎಂ ಪಂಥಾಹ್ವಾನ ಉದ್ಧಟತನದ ಪರಮಾವಧಿ: ಎಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, ಜ.18: ಪ್ರಧಾನ ಮಂತ್ರಿಯನ್ನು ಬಹಿರಂಗ ಚರ್ಚೆಗೆ ಕರೆದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯರ ಉದ್ಧಟತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಹೊಸದಿಲ್ಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ಕೇಂದ್ರ ಸರಕಾರದ ನಡುವೆ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ರಾಜ್ಯ ಸರಕಾರ ಪ್ರತಿಯೊಂದಕ್ಕೂ ಕೇಂದ್ರವ ಮತ್ತು ಪ್ರಧಾನ ಮಂತ್ರಿಯನ್ನು ದೂರುವ ಪರಿಪಾಠ ಬೆಳೆಸಿಕೊಂಡಿದೆ. ಇದು ಸರಿಯಲ್ಲ. ಕಾಂಗ್ರೆಸ್ ಸರಕಾರವು ತನ್ನ ಆಡಳಿತ ವೈಫಲ್ಯ, ಗ್ಯಾರಂಟಿಗಳ ವಿಫಲತೆ, ಬರಗಾಲ, ರೈತರ ಸಂಕಷ್ಟದ ಬಗ್ಗೆ ಜನರ ಗಮನವನ್ನು ಬೇರೆಡೆಗೆ ಹೊರಳಿಸುವ ಉದ್ದೇಶದಿಂದ ನಿರಂತರವಾಗಿ ಮೋದಿ ಅವರ ಮೇಲೆ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ ಎಂದು ಹೇಳಿದರು.

ರಾಜ್ಯ ಸರಕಾರದ ಈ ನಡವಳಿಕೆಯ ಬಗ್ಗೆ ಕನ್ನಡಿಗರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದ ಅವರು; ಜನರ ಸಮಸ್ಯೆಗಳಿಗೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸರಕಾರವೇ ಆಲೋಚನೆ ಮಾಡಬೇಕು. ಅದು ಬಿಟ್ಟು ಸುಖಾಸುಮ್ಮನೆ ಕೇಂದ್ರದ ಮೇಲೆ ಗೂಬೆ ಕುರಿಸುವುದು ಸರಿ ಅಲ್ಲ ಎಂದು ನೇರ ಮಾತುಗಳಲ್ಲಿ ಹೇಳಿದರು.

ಲೋಪ ಆಗಿರುವ ಕಡೆ ಗಮನ ಹರಿಸಿ ಸರಿ ಮಾಡಿಕೊಳ್ಳಬೇಕು. ದಿಲ್ಲಿಗೆ ಹೋಗಿ ಚರ್ಚೆ ಮಾಡಬೇಕು. ಆದರೆ; ಮುಖ್ಯಮಂತ್ರಿಯೊಬ್ಬರು ಪ್ರಧಾನ ಮಂತ್ರಿಯನ್ನು ಬಹಿರಂಗ ಚರ್ಚೆಗೆ ಕರೆಯುವುದು ಉದ್ಧಟತನದ ಪರಮಾವಧಿ. ಇದು ಸರಿಯಾದ ನಡವಳಿಕೆ ಅಲ್ಲ. ಪ್ರಧಾನಿಗಳನ್ನು ಚರ್ಚೆಗೆ ಕರೆಯುವ ಮುನ್ನ ತಮ್ಮಿಂದ ಆಗಿರುವ ಲೋಪಗಳನ್ನು ಸರಿ ಪಡಿಸಿಕೊಳ್ಳಬೇಕಿದೆ. ಆ ಸೌಜನ್ಯವನ್ನು ಮುಖ್ಯಮಂತ್ರಿ ತೋರಿಸಬೇಕಿದೆ. ನಲವತ್ತು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ರಾಜ್ಯದ ನೀರಾವರಿಗೆ ಏನಾದರೂ ಕೊಡುಗೆ ನೀಡಿದೆಯಾ? ಎಂದು ಅವರು ಪ್ರಶ್ನಿಸಿದರು.

ಬೀದಿಯಲ್ಲಿ ಚರ್ಚೆ ಮಾಡಬಾರದು:

ಪದೇ ಪದೇ ಕೇಂದ್ರದ ಜತೆ ಸಂಘರ್ಷ ಸರಿ ಅಲ್ಲ. ಇಂತಹ ಸಂಘರ್ಷದಿಂದ ಉಪಯೋಗವೂ ಇಲ್ಲ. ಕೇಂದ್ರದ ನೆರವು ಕಡಿತ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಬಾರದು. ದೋಷಾರೋಪದಿಂದ ಏನಾದರೂ ಲಾಭ ಸಿಗುತ್ತದೆಯೇ? ಸಿಗುವುದಿಲ್ಲ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಬೇಡ ಎಂದು ಅವರು ಸಿದ್ದರಾಮಯ್ಯರಿಗೆ ಕುಮಾರಸ್ವಾಮಿ ಸಲಹೆ ಮಾಡಿದರು.

ಕೆಲ ರಾಜ್ಯಗಳಿಂದ ಇವರು ಪಾಠ ಕಲಿಯಬೇಕಿದೆ. ಒಡಿಶಾ ರಾಜ್ಯದಲ್ಲಿ ನವೀನ್ ಪಟ್ನಾಯಕ್ ಐದು ಅವಧಿಗಳಿಂದ ಸರಕಾರ ನಡೆಸುತ್ತಿದ್ದಾರೆ. ಆ ರಾಜ್ಯದಲ್ಲಿ ನಮ್ಮ ರಾಜ್ಯಕ್ಕಿಂತ ಹೆಚ್ಚು ಬಡತನ ಇದೆ. ಕೇಂದರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿ ಅಥವಾ ಬಿಜೆಪಿ ಇರಲಿ. ಅವರೆಂದೂ ಕೇಂದ್ರದ ಜತೆ ಸಂಘರ್ಷಕ್ಕೆ ಇಳಿದಿಲ್ಲ. ಸೌಹಾರ್ದದಿಂದ ಕೇಂದ್ರದಿಂದ ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇವರು ಕೇವಲ ರಾಜಕೀಯಕ್ಕಾಗಿ ಇದನ್ನೆಲ್ಲಾ ಮಾಡುತ್ತಿದ್ದಾರೆ ಎಂದು ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ನಾನೂ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದೆ. ಬಿಜೆಪಿ ಜತೆ ಸರಕಾರ ಮಾಡಿದ್ದಾಗ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇತ್ತು. ಕಾಂಗ್ರೆಸ್ ಜತೆ ಸರಕಾರ ಮಾಡಿದ್ದಾಗ ಬಿಜೆಪಿ ಅಧಿಕಾರದಲ್ಲಿ ಇತ್ತು. 2018ರಲ್ಲಿ ನರೇಂದ್ರ ಮೋದಿಯವರೇ ಪ್ರಧಾನಿಗಳಾಗಿದ್ದರು. ಅವರ ಜತೆ ನಾನೆಂದೂ ಸಂಘರ್ಷಕ್ಕೆ ಹೋಗಲಿಲ್ಲ. ರಾಜ್ಯಕ್ಕೆ ಆಗಬೇಕಾದ ಎಲ್ಲಾ ಕೆಲಸಗಳು ಆದವು. ನಾನು ಕೇಳಿದಾಕ್ಷಣ ಪ್ರಧಾನಿಗಳ ಕಚೇರಿಯಿಂದ ಭೇಟಿಗೆ ಅವಕಾಶ ದೊರೆಯುತ್ತಿತ್ತು. ಇಲ್ಲಿ ನಾವು ಹೇಗೆ ನಡೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯವಾಗುತ್ತದೆ ಎಂದು ಅವರು ಸಿದ್ದರಾಮಯ್ಯರನ್ನು ಟೀಕಿಸಿದರು.

ಲೋಕಸಭೆಗೆ ಸ್ಪರ್ಧೆಗೆ ಒತ್ತಡ ಇದೆ:

ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ. ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ. ನನ್ನ ಸ್ಪರ್ಧೆಯ ಬಗ್ಗೆ ಸೂಕ್ತ ನಿರ್ಣಯವನ್ನು ಎರಡು ಪಕ್ಷದ ನಾಯಕರು ಕೂತು ತೀರ್ಮಾನ ಮಾಡುತ್ತಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಅಯೋಧ್ಯೆಗೆ ಹೋಗುತ್ತೇನೆ:

ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾನು ಕುಟುಂಬ ಸಮೇತ ಅಯೋಧ್ಯಗೆ ಹೋಗುತ್ತೇನೆ ಎಂದು ಹೇಳಿದ ಕುಮಾರಸ್ವಾಮಿ, ಇಡೀ ದೇಶವೇ ಹಬ್ಬದ ಸಂಭ್ರಮದಲ್ಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಾತುರನಾಗಿದ್ದೇನೆ. ದೇವೇಗೌಡರು ಕೂಡ ಭಾಗಿಯಾಗುತ್ತಾರೆ. ನಮಗೆಲ್ಲರಿಗೂ ಆಹ್ವಾನ ಬಂದಿದೆ ಎಂದರು.

ಸೋತ ಮಾತ್ರಕ್ಕೆ ಮನೆಯಲ್ಲಿ ಕೂರುವುದಿಲ್ಲ ಎಂದ ನಿಖಿಲ್

ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ರಾಜ್ಯ ಯುವ ಜನತಾ ದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇದೇವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಪಕ್ಷದ ಕಾರ್ಯಕರ್ತನಾಗಿ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ. ಎರಡು ಬಾರಿ ಚಿಕ್ಕ ವಯಸ್ಸಿನಲ್ಲೇ ಚುನಾವಣೆಯಲ್ಲಿ ಸೋಲು ಕಂಡಿದ್ದೇನೆ. ಕೆಲ ರಾಜಕೀಯ ಷಡ್ಯಂತ್ರ್ಯಕ್ಕೆ ನಾನು ಬಲಿಯಾದೆ. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಪ್ರಶ್ನೆ ಅಪ್ರಸಕ್ತ. ಸೋತ ಮಾತ್ರಕ್ಕೆ ಮನೆಯಲ್ಲಿ ಕೂರುವುದಿಲ್ಲ, ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X