Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್, ಕೆಇಎ...

ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್, ಕೆಇಎ ಬಾಟ್‍ಗೆ ಚಾಲನೆ

ಕಾಲೇಜು ಪ್ರವೇಶಕ್ಕೆ ಸಂಬಂಧಿಸಿ ಉಂಟಾಗುವ ಅನಗತ್ಯ ಗೊಂದಲಕ್ಕೆ ತೆರೆ : ಸಚಿವ ಎಂ.ಸಿ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ12 May 2025 6:48 PM IST
share
ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್, ಕೆಇಎ ಬಾಟ್‍ಗೆ ಚಾಲನೆ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಭಿವೃದ್ಧಿಪಡಿಸಿದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್ ಉಪಕ್ರಮಗಳಿಂದ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿ ಉಂಟಾಗುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಹೇಳಿದ್ದಾರೆ.

ಸೋಮವಾರ ಇಲ್ಲಿನ ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ತಂತ್ರಾಂಶಗಳಿಂದ ವಿದ್ಯಾರ್ಥಿಗಳಿಗೆ ಕಾಲೇಜುಗಳ ಬಗ್ಗೆ ನಿಖರವಾದ ಸಮಯದಲ್ಲಿ ಖಚಿತವಾದ ಮಾಹಿತಿ ಲಭ್ಯವಾಗುತ್ತದೆ. ಅನಗತ್ಯ ಗೊಂದಲಕ್ಕೆ ತೆರೆ ಬೀಳುತ್ತದೆ. ಇನ್ನು ಮಧ್ಯವರ್ತಿಗಳ ಹಾವಳಿಯೂ ತಪ್ಪುತ್ತದೆ ಎಂದರು.

ಕಾಲೇಜು ಪೋರ್ಟಲ್: ಅಭ್ಯರ್ಥಿಗಳು ಆಪ್ಷನ್ ದಾಖಲಿಸುವುದಕ್ಕೂ ಮುನ್ನ ಕಾಲೇಜು ಆಯ್ಕೆ ಪ್ರಮುಖ ಘಟ್ಟ. ಅಂತಹ ಸಂದರ್ಭದಲ್ಲಿ ಅಲ್ಲಿ- ಇಲ್ಲಿ ಕೇಳಿ ಪಡೆಯುವುದರ ಬದಲು ಕಾಲೇಜು ಪೋರ್ಟಲ್‍ನಲ್ಲೇ ಸಂಬಂಧಪಟ್ಟ ಕಾಲೇಜಿನ ಮಾಹಿತಿ ಲಭ್ಯವಾಗುವ ಹಾಗೆ ಮಾಡಲಾಗಿದೆ. ಇದನ್ನು ಕಾಲೇಜಿನವರೇ ಅಪ್ ಲೋಡ್ ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ಕಾಲೇಜುಗಳಲ್ಲಿನ ಮೂಲಸೌಲಭ್ಯ, ಶೈಕ್ಷಣಿಕ ವಾತಾವರಣ, ಪ್ರಯೋಗಾಲಯ, ಗ್ರಂಥಾಲಯ, ಕೊಠಡಿ, ಹಾಸ್ಟೆಲ್, ಕೋರ್ಸ್‍ವಾರು ಶುಲ್ಕದ ವಿವರ, ಅತಿಥಿ ಉಪನ್ಯಾಸಕರು ಸೇರಿದಂತೆ ಕಾಯಂ ಸಿಬ್ಬಂದಿಯ ಮಾಹಿತಿ ಇತ್ಯಾದಿ ಪೂರ್ಣ ವಿವರಗಳು ಪೋರ್ಟಲ್‍ನಲ್ಲಿ ಲಭ್ಯ ಇರುತ್ತವೆ. ಎಷ್ಟೋ ಮಂದಿ ಕಾಲೇಜಿನ ಮಾಹಿತಿ ಇಲ್ಲದೆ, ಆಪ್ಷನ್ ದಾಖಲಿಸಿ, ನಂತರ ಬೇರೆ ಕಾಲೇಜಿನಲ್ಲಿ ಸೀಟು ಕೊಡಿ ಎನ್ನುತ್ತಾರೆ. ಹೀಗಾಗಿ ಈ ರೀತಿಯ ಹೊಸ ಉಪಕ್ರಮ ಸೂಕ್ತ ಕಾಲೇಜುಗಳ ಆಯ್ಕೆಗೆ ನೆರವಾಗಲಿದೆ ಎಂದು ಅವರು ತಿಳಿಸಿದರು.

ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ದೂರು ದಾಖಲಿಸುವುದಕ್ಕೂ ಇದೇ ಪೋರ್ಟಲ್‍ನಲ್ಲಿ ಲಿಂಕ್ ನೀಡುವ ಉದ್ದೇಶವೂ ಇದೆ. ನೇರವಾಗಿ ಶುಲ್ಕ ನಿಯಂತ್ರಣ ಸಮಿತಿಗೆ ದೂರು ಹೋಗುವ ಹಾಗೆ ಮಾಡಲಾಗುವುದು ಎಂದು ಅವರು ಹೇಳಿದರು.

ಕೆಇಎ ಮೊಬೈಲ್ ಆ್ಯಪ್: ಇದೇ ಮೊದಲ ಬಾರಿಗೆ ಮತ್ತಷ್ಟು ವಿದ್ಯಾರ್ಥಿ ಸ್ನೇಹಿಯಾಗುವ ಉಪಕ್ರಮದ ಭಾಗವಾಗಿ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾಮಾನ್ಯವಾಗಿ ಯುವಕರು ಆ್ಯಪ್ ಬಳಕೆ ಸ್ನೇಹಿಯಾಗಿರುತ್ತಾರೆ. ಹೀಗಾಗಿ ಇದನ್ನು ರೂಪಿಸಲಾಗಿದೆ. ಕೆಇಎ ವೆಬ್‍ಸೈಟ್‍ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ತಿಳಿಸಿದರು.

ವೆಬ್‍ಸೈಟ್‍ನಲ್ಲಿ ಲಭ್ಯವಾಗುವ ಎಲ್ಲ ಮಾಹಿತಿ ಈ ಆ್ಯಪ್‍ನಲ್ಲಿ ಲಭ್ಯ ಇರುತ್ತದೆ. ಆ್ಯಪ್ ಮೂಲಕವೇ ಅರ್ಜಿ ಹಾಕುವುದು, ಆಪ್ಷನ್ ದಾಖಲಿಸುವುದು, ಛಾಯ್ಸ್ ಆಯ್ಕೆ, ಶುಲ್ಕ ಪಾವತಿ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಮಾಡಬಹುದು. ಆ್ಯಪ್ ಡೌನ್‍ಲೋಡ್ ಮಾಡಿಕೊಂಡವರಿಗೆ ಕಾಲಕಾಲಕ್ಕೆ ಅಲರ್ಟ್ ಸಂದೇಶ ಕಳುಹಿಸುವ ವ್ಯವಸ್ಥೆ ಇರುತ್ತದೆ ಎಂದು ಅವರು ಹೇಳಿದರು.

ಗ್ರಾಮೀಣ ಭಾಗದ ಬಹುತೇಕ ಮಕ್ಕಳು ಸಿಇಟಿ ಅರ್ಜಿ ಭರ್ತಿ ಹಾಗೂ ಅನ್ ಲೈನ್ ಸೀಟು ಹಂಚಿಕೆ ಸಂಬಂಧದ ಪ್ರಕ್ರಿಯೆಗೆ ಸೈಬರ್ ಸೆಂಟರ್ ಗಳ ಮೇಲೆ ಹೆಚ್ವು ಅವಲಂಬನೆಯಾಗಿ ಅನೇಕ ತಪ್ಪುಗಳನ್ನು ಮಾಡಿಕೊಂಡು ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿಯೇ ಇದಕ್ಕೊಂದು ಪರಿಹಾರವಾಗಿ ಮೊಬೈಲ್ ಆ್ಯಪ್ ರೂಪಿಸಿದ್ದು, ಬಹುತೇಕ ಎಲ್ಲ ಪ್ರಕ್ರಿಯೆಗಳನ್ನೂ ಅಭ್ಯರ್ಥಿಗಳೇ ಮಾಡಿಕೊಳ್ಳಬಹುದು ಎಂದು ಅವರು ವಿವರಿಸಿದರು.

ಕೆಇಎ ಚಾಟ್ ಬಾಟ್(https://kea-bot.com) : ಬುದ್ದಿಮತ್ತೆ ತಂತ್ರಜ್ಞಾನದ ನೆರವಿನ ಚಾಟ್ ಬಾಟ್ ವ್ಯವಸ್ಥೆ ಬಳಸಿ ಅಭ್ಯರ್ಥಿಗಳು ತಮ್ಮ ಪ್ರಶ್ನೆ/ಅನುಮಾನಗಳಿಗೆ ನೇರವಾಗಿ ಉತ್ತರ ಪಡೆಯಲು ಸಾಧ್ಯವಾಗುತ್ತದೆ. ಪ್ರಾಯೋಗಿಕವಾಗಿ ಆರಂಭಿಸಿದ ನಂತರ ಇದುವರೆಗೂ 1.35 ಲಕ್ಷ ಅಭ್ಯರ್ಥಿಗಳು ಇದರ ಮೂಲಕ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದಿದ್ದು, ಇದು ಎಷ್ಟು ಉಪಯುಕ್ತ ಎನ್ನುವುದನ್ನು ತೋರಿಸುತ್ತದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಇಎ ಪ್ರಕಟಿಸುವ ಎಲ್ಲ ಮಾಹಿತಿಯನ್ನು ಚಾಟ್ ಬಾಟ್ ವ್ಯವಸ್ಥೆಗೆ ಅಪ್ ಲೋಡ್ ಮಾಡಲಾಗುತ್ತದೆ. ಅಭ್ಯರ್ಥಿಗಳು ತಾವು ಏನನ್ನು ಕೇಳಬೇಕೋ ಅದನ್ನು ಟೈಪ್ ಮಾಡಿದರೆ, ಅಪ್ ಲೋಡ್ ಮಾಡಲಾಗಿರುವ ಮಾಹಿತಿ ಆಧರಿಸಿ ಚಾಟ್ ಬಾಟ್ ಉತ್ತರ ಒದಗಿಸುತ್ತದೆ. ಇದರಿಂದ ಮಾಹಿತಿಗಾಗಿ ಕೆಇಎ ಕಚೇರಿಗೆ ಖುದ್ದು ಬರುವುದಾಗಲಿ ಅಥವಾ ಇತರ ಕಚೇರಿಗಳಿಗೆ ಅಲೆಯುವುದಾಗಲಿ ತಪ್ಪುತ್ತದೆ. ಕುಳಿತಲ್ಲೇ ಮಾಹಿತಿ ಪಡೆಯಲು ನೆರವಾಗುತ್ತದೆ ಎಂದು ಸಚಿವರು ವಿವರಿಸಿದರು.

ಕೌಶಲ ಶುಲ್ಕ ಪರಿಷ್ಕರಣೆ :

ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ವಿವಿಧ ರೀತಿಯ ಕೌಶಲ ಆಧಾರಿತ ತರಬೇತಿಗೆ ಹೆಚ್ಚುವರಿ ಶುಲ್ಕ ವಸೂಲಿಗೆ ಹಿಂದಿನ ಸರಕಾರ ಅವಕಾಶ ನೀಡಿದ್ದು, ಅದನ್ನು ಮುಂದಿನ ವರ್ಷವೇ ಪರಿಷ್ಕರಣೆ ಮಾಡಲಾಗುವುದು. ಕಾಲೇಜುಗಳಲ್ಲಿ ಹೆಚ್ಚುವರಿಯಾಗಿ ಏನೆಲ್ಲ ತರಬೇತಿ ನೀಡಲಾಗುತ್ತಿದೆ ಎಂಬುದನ್ನು ಮುಂದಿನ ವರ್ಷದ ವೇಳೆಗೆ ಪರಿಶೀಲಿಸಿ, ಮತ್ತೊಮ್ಮೆ ಕೌಶಲ ಶುಲ್ಕ ನಿಗದಿಪಡಿಸಲಾಗುವುದು ಎಂದು ಸಚಿವ ಸುಧಾಕರ್‌ ಸ್ಪಷ್ಟಪಡಿಸಿದರು.

ಸದ್ಯ ಈ ಹೊಸ ವ್ಯವಸ್ಥೆ ಕೇವಲ ಇಂಗ್ಲಿಷ್‌ನಲ್ಲಿ ಉತ್ತರ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಮಾಹಿತಿ ಸಿಗುವ ಹಾಗೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ. ತಿಂಗಳೊಳಗೆ ಕನ್ನಡದ ಅವತರಣಿಕೆ ಆರಂಭಿಸಲಾಗುತ್ತದೆ. ಬಿಎಸ್‍ಎನ್‍ಎಲ್ ಇದರ ನಿರ್ವಹಣೆ ಮಾಡುತ್ತಿದೆ.

- ಎಚ್.ಪ್ರಸನ್ನ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X