Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬದ್ಧ:...

ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬದ್ಧ: ಸಚಿವ ಕೆ.ಎಚ್ ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ24 Dec 2023 7:56 PM IST
share
ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬದ್ಧ: ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ರವಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ದೇವನಹಳ್ಳಿ ತಾಲ್ಲೂಕು ಪಂಚಾಯಿತಿಯಡಿ ದೇವನಹಳ್ಳಿ ತಾಲ್ಲೂಕು ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.

ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳು ಉತ್ತಮವಾಗಿದ್ದರೆ ಅಂತಹ ಗ್ರಾಮಗಳು ಅಭಿವೃದ್ಧಿಯಾಗುತ್ತವೆ. ಗ್ರಾಮ ಸಡಕ್, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹಲವು ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.

ಕೆರೆ ಒತ್ತುವರಿ ತೆರವು, ಕೆರೆ ಹೂಳೆತ್ತುವ ಕಾರ್ಯಕ್ರಮ, ಪ್ರತಿಯೊಬ್ಬ ವಿದ್ಯಾರ್ಥಿಗೆ ಗುಣಮಟ್ಟದ ಶಿಕ್ಷಣ ನೀಡುವ ಹಿತದೃಷ್ಟಿಯಿಂದ ಸಿ.ಎಸ್.ಆರ್ ಅನುದಾನದಡಿ ಸರಕಾರಿ ಶಾಲೆಗಳ ನವೀಕರಣ ಮಾಡುವ ಕಾರ್ಯಗಳು ಈಗಾಗಲೇ ಪ್ರಾರಂಭ ಮಾಡಲಾಗಿದೆ. ಅಣ್ಣೇಶ್ವರ ಗ್ರಾಮಪಂಚಾಯಿತಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವುದರಿಂದ ಬಹಳಷ್ಟು ಅಭಿವೃದ್ಧಿ ಕಂಡಿದೆ ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸುಮಾರು 11 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಬರುವ ತೆರಿಗೆ ಹಣ ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾ ಮುನಿರಾಜು, ಉಪಾಧ್ಯಕ್ಷ ಮುನಿರಾಜಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ದೇವನಹಳ್ಳಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಚೆನ್ನಳ್ಳಿ ರಾಜಣ್ಣ, ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ, ದೇವನಹಳ್ಳಿ ಮಾಜಿ ಪುರಸಭೆ ಅಧ್ಯಕ್ಷ ಎಂ.ನಾರಾಯಣ ಸ್ವಾಮಿ, ಅಣ್ಣೇಶ್ವರ ಗ್ರಾಮಪಂಚಾಯಿತಿ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X