Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಿಭಾವಿತ(ಡೀಮ್ಡ್) ಅರಣ್ಯ ವೀಸ್ತಿರ್ಣ...

ಪರಿಭಾವಿತ(ಡೀಮ್ಡ್) ಅರಣ್ಯ ವೀಸ್ತಿರ್ಣ ಪುನರ್ ಪರಿಶೀಲನೆಗೆ ಸಮಿತಿ: ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ11 Dec 2025 5:40 PM IST
share
ಪರಿಭಾವಿತ(ಡೀಮ್ಡ್) ಅರಣ್ಯ ವೀಸ್ತಿರ್ಣ ಪುನರ್ ಪರಿಶೀಲನೆಗೆ ಸಮಿತಿ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ (ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಮೂರು ವರ್ಷದ ವರದಿ ಅನ್ವಯ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇದ್ದು, ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಎಸ್.ಎನ್.ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 2022ರಲ್ಲಿ ವರದಿ ಅನ್ವಯ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ.ಇದರೊಂದಿಗೆ ಅರಣ್ಯ ಇಲಾಖೆ ಜಾಗ ಗುರುತಿಸಲು ಅನುಕೂಲವಾಗುವಂತೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಲು ಆದೇಶ ಮಾಡಲಾಗಿದೆ ಎಂದರು.

ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಪುನರ್ ಪರಿಶೀಲಿಸಲು ನೇಮಿಸಿರುವ ಸಮಿತಿ 6 ತಿಂಗಳಿನಲ್ಲಿ ತನ್ನ ವರದಿ ನೀಡಲಿದೆ. ಇದಕ್ಕೂ ಮುನ್ನ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಭಾವಿತ ಅರಣ್ಯ ವಿಸ್ತೀರ್ಣ ಕುರಿತು ಜಿಲ್ಲಾ ಕೆಡಿಪಿ ಸಭೆಯಲ್ಲಿ ವರದಿ ಮಂಡಿಸಿ, ಎಲ್ಲ ಶಾಸಕರಿಗೂ ಮಾಹಿತಿ ನೀಡುವಂತೆ ಇಲಾಖೆಯಿಂದ ಆದೇಶ ನೀಡಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಒಕ್ಕಲೆಬ್ಬಿಸಿ ತೊಂದರೆ ನೀಡಿಲ್ಲ: ಕೋಲಾರ ಜಿಲ್ಲೆಯಲ್ಲಿ 36992 ಹೆಕ್ಟೇರ್ ಮೀಸಲು, 545.65 ಹೆಕ್ಟೇರ್ ಗ್ರಾಮ, 2885.59 ಹೆಕ್ಟೇರ್ ರಕ್ಷಿತ, ಸೆಕ್ಷೆನ್ 04 ಅಡಿ 1047.55 ಹೆಕ್ಟೇರ್, 5529.89 ಹೆಕ್ಟೇರ್ ವರ್ಗೀಕರಿಸಿದ ಹಾಗೂ 4986.70 ಹೆಕ್ಟೇರ್ ಪರಿಭಾವಿತ ಅರಣ್ಯವಿದೆ. ಒಟ್ಟಾರೆ ಜಿಲ್ಲೆಯಲ್ಲಿ 51987 ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಕಂದಾಯ, ಮೋಜಿಣಿ ಮತ್ತು ಅರಣ್ಯ ಇಲಾಖೆಗಳು ಜಂಟಿ ಮೋಜಿಣಿ ಕಾರ್ಯಕೈಗೊಂಡು ಅಕ್ರಮ ಅರಣ್ಯ ಒತ್ತುವರಿ ಪ್ರದೇಶವನ್ನು ಗುರುತಿಸಿದ್ದಾರೆ.

ಕರ್ನಾಟಕ ಅರಣ್ಯ ಕಾಯಿದೆ 1964ರ ಕಲಂ 64(ಎ) ಅನ್ವಯ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ. ಒಮ್ಮೆ ಪಹಣಿಯಲ್ಲಿ ಅರಣ್ಯ ಎಂದು ನಮೂದಾರೆ ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆ ಅನುಮತಿ ಪಡೆಯದೆ ಸಂಬಂಧಿಸಿದ ಜಮೀನನ್ನು ಯಾರಿಗೂ ಮಂಜೂರು ಮಾಡಲು ಬರುವುದಿಲ್ಲ. ಸರ್ವೋಚ್ಛ ನ್ಯಾಯಾಲಯವು ಸಹ ಒಮ್ಮೆ ಅರಣ್ಯ ಎಂದರೆ ಸದಾ ಅರಣ್ಯ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಖಾಸಗಿ ಹಾಗೂ ಪಟ್ಟಾ ಜಮೀನು ಹೊಂದಿರವ ಯಾರನ್ನು ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಿ ತೊಂದರೆ ನೀಡಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಬಂಗಾರಪೇಟೆ ತಾಲೂಕಿನ ಇಂದಿರಾಗಾಂಧಿ ಪಾರ್ಕ್ ಅಭಿವೃದ್ಧಿ ಪಡಿಸಲು 2016-17 ರಿಂದ 2025-26 ರವರೆಗೆ 2.37 ಕೋಟಿ ರೂ., ಅನುದಾನ ನೀಡಲಾಗಿದೆ. ಅಗತ್ಯವಿದ್ದಲ್ಲಿ ಶಾಸಕರ ಬೇಡಿಕೆ ಮೇರೆಗೆ ಅನುದಾನ ಒದಗಿಸಲಾಗುವುದು. ಮಾಲೂರು ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ತಡೆಗಟ್ಟಲು 74.43 ಕಿ.ಮೀ. ಸೋಲಾರ್ ತಂತಿಬೇಲಿ ಅಳವಡಿಸಲಾಗಿದೆ. ತಂತಿಬೇಲಿ ನಿರ್ವಹಣೆ ಅಗತ್ಯ ಇರುವ ಅನುದಾನವನ್ನು ಸಹ ನೀಡುವುದಾಗಿ ಅವರು ತಿಳಿಸಿದರು.

ಶಾಸಕರ ಗಮನಕ್ಕೆ ತರಬೇಕು:

ರಾಜ್ಯದ ಎಲ್ಲೆಡೆ ಪರಿಭಾವಿತ ಅರಣ್ಯ ವಿಸ್ತೀರ್ಣದ ಗೊಂದಲ ನಿವಾರಣೆ ಸರ್ಕಾರ ಸಮಿತಿ ರಚಿಸಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಸಮಿತಿ ರಚಿಸುವ ವರದಿಯನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು. ಜಂಟಿ ಸರ್ವೇಕಾರ್ಯ ಮುಗಿಯುವವರೆಗೆ ಜನರನ್ನು ಒಕ್ಕಲೆಬ್ಬಿಸಬಾರದು ಎಂದು ಸದಸ್ಯರಾದ ಸಿ.ಸಿ.ಪಾಟೀಲ್, ಸುನೀಲ್‍ಕುಮಾರ್, ಅರಗಜ್ಞಾನೇಂದ್ರ, ಭಾಗೀರತಿ ಮರುಳ್ಯ ಸೇರಿದಂತೆ ಹಲವರು ಸಚಿವರಲ್ಲಿ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X