Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ:...

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ21 Aug 2023 5:15 PM IST
share
ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 21: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು.

''ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು. ಹೇರಲು ಹೊರಟಿರುವುದು ಒಂದು ಹುನ್ನಾರ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಮಾಡಲಾಗದು. ಆದ್ದರಿಂದ ಹಳೆ ಶಿಕ್ಷಣ ಪದ್ಧತಿ ಮುಂದುವರಿಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು'' ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ʼʼಬಿಜೆಪಿ ಆಳ್ವಿಕೆಯ ಇತರ ರಾಜ್ಯಗಳೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹಿಂದೇಟಾಕುತ್ತಿವೆ. ಕೇರಳ, ತಮಿಳು ನಾಡು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕೇಂದ್ರ ಪುರಸ್ಕೃತ ಯೋಜನೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಾರದುʼʼ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ʼʼಇದರಿಂದ ಬಡವರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತದೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣ ಪತ್ರ ನೀಡಿದರೂ, ಒಂದು ವರ್ಷ, ಎರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ದೊರೆಯಲು ಸಾಧ್ಯ? ಉದ್ಯೋಗವಕಾಶ ದೊರೆತು ಹೋದ ಬಡವರ ಮಕ್ಕಳು ಮತ್ತೆ ಓದಲು ಎಷ್ಟು ಅವಕಾಶ ದೊರೆಯುವುದು?ʼʼ ಎಂಬ ಅನುಮಾನ ವ್ಯಕ್ತಪಡಿಸಿದರು.

ಈ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಮೂಲಸೌಲಭ್ಯಗಳು ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X