ಐಪಿಎಲ್ ಆಯೋಜನೆಗೆ ಸಮಿತಿ ಕ್ರಮ ಕೈಗೊಳ್ಳಲಿದೆ: ಡಾ.ಜಿ. ಪರಮೇಶ್ವರ್

ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಈಗಾಗಲೇ ಸಮಿತಿ ರಚನೆ ಮಾಡಲಾಗಿದ್ದು, ಎಲ್ಲವನ್ನು ಸಮಿತಿಯೇ ನಿರ್ವಹಣೆ ಮಾಡಿ, ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನ ನಡೆಸಲು ಸಮಿತಿ ರಚನೆ ಮಾಡಿದ್ದೇವೆ. ಐಪಿಎಲ್ ಚೆನ್ನಾಗಿ ನಡೆಸಲು ಸಮಿತಿ ಕ್ರಮ ಕೈಗೊಳ್ಳಲಿದೆ. ಈ ಬಾರಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸುವಂತೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಉಲ್ಲೇಖಿಸಿದರು.
ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್, ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿತ್ತು. ಹೀಗಾಗಿ ಭೈರತಿ ಬಸವರಾಜ್ ನಿನ್ನೆ ಶರಣಾಗಿದ್ದಾರೆ. ಈ ಸಂಬಂಧ ಸಿಐಡಿ ಅಧಿಕಾರಿಗಳು ಮುಂದೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದರು.
Next Story




