Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಂಚಾಯಿತಿಯಿಂದ ಸಂಸತ್ತಿನವರೆಗೆ ಮಹಿಳಾ...

ಪಂಚಾಯಿತಿಯಿಂದ ಸಂಸತ್ತಿನವರೆಗೆ ಮಹಿಳಾ ಪ್ರಾತಿನಿಧ್ಯ ವಿಸ್ತರಣೆಯಾಗಬೇಕು: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ಕಾಮನ್‍ವೆಲ್ತ್ ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಸಮ್ಮೇಳನಕ್ಕೆ ಚಾಲನೆ

ಅಮ್ಜದ್ ಖಾನ್ ಎಂ./ವಾರ್ತಾಭಾರತಿಅಮ್ಜದ್ ಖಾನ್ ಎಂ./ವಾರ್ತಾಭಾರತಿ17 Nov 2026 6:27 PM IST
share
ಪಂಚಾಯಿತಿಯಿಂದ ಸಂಸತ್ತಿನವರೆಗೆ ಮಹಿಳಾ ಪ್ರಾತಿನಿಧ್ಯ ವಿಸ್ತರಣೆಯಾಗಬೇಕು: ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ಬೆಂಗಳೂರು : ಮಹಿಳೆಯರ ರಾಜಕೀಯ ಪ್ರಾತಿನಿಧ್ಯ ಪಂಚಾಯಿತಿಗಳಿಂದ ಸಂಸತ್ತಿನವರೆಗೆ ವಿಸ್ತರಣೆಯಾಗಬೇಕು. ಮಹಿಳೆಯರು ಕೇವಲ ಜನಪ್ರತಿನಿಧಿಗಳಾಗಿ ಭಾಗವಹಿಸುವುದಷ್ಟೇ ಅಲ್ಲದೆ, ನಾಯಕತ್ವ, ನೀತಿ ನಿರೂಪಣೆ ಮತ್ತು ಕಾನೂನು ರಚನೆಯಲ್ಲಿಯೂ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಮೊದಲ ಕಾಮನ್‍ವೆಲ್ತ್ ಮಹಿಳಾ ಸಂಸದೀಯರ(ಸಿಡಬ್ಲ್ಯೂಪಿ) ಭಾರತ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, 2023ರಲ್ಲಿ ಜಾರಿಗೊಂಡ ನಾರಿ ಶಕ್ತಿ ವಂದನ್ ಅಧಿನಿಯಮದಡಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಪ್ರಾತಿನಿಧ್ಯ ಕಲ್ಪಿಸುವ ನಿಬಂಧನೆಯ ಅನುಷ್ಠಾ ನಕ್ಕೆ ಕ್ರಮಗಳು ಮುಂದುವರಿಯುವ ವಿಶ್ವಾಸವಿದೆ ಎಂದರು.

ಈಗಾಗಲೇ ಹಲವು ರಾಜ್ಯಗಳಲ್ಲಿ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಮಹಿಳೆಯರು ನೀತಿ ನಿರೂಪಣೆ, ಶಾಸನ ರಚನೆ ಮತ್ತು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಾಗ ಪ್ರಜಾಪ್ರಭುತ್ವ ಹೆಚ್ಚು ಸ್ಪಂದನಶೀಲ, ಸಮಗ್ರ ಮತ್ತು ಉತ್ತರದಾಯಿಯಾಗಲಿದೆ. ಸಮಾಜದ ಆಶೋತ್ತರಗಳು ಹಾಗೂ ಸವಾಲುಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಮಹಿಳೆಯರ ಬದ್ಧತೆ, ಸೂಕ್ಷ್ಮತೆ ಮತ್ತು ಜವಾಬ್ದಾರಿಯುತ ನಾಯಕತ್ವ ಮಹತ್ವದ್ದಾಗಿದೆ ಎಂದು ಓಂ ಬಿರ್ಲಾ ಹೇಳಿದರು.

ಆಡಳಿತದಲ್ಲಿ ಎಐ ಮತ್ತು ತಂತ್ರಜ್ಞಾನದ ಬಳಕೆಗೆ ಒತ್ತು: ಕೃತಕ ಬುದ್ಧಿಮತ್ತೆ (ಎಐ) ಮತ್ತು ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸಿಕೊಂಡರೆ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ದಕ್ಷತೆಯನ್ನು ಹೆಚ್ಚಿಸಬಹುದು. ಜನಪ್ರತಿನಿಧಿಗಳು ಇ-ಆಡಳಿತ ಮತ್ತು ಡಿಜಿಟಲ್ ವೇದಿಕೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಜನರೊಂದಿಗೆ ಸಂಪರ್ಕ ಬಲಪಡಿಸಬೇಕು. ಅವರ ಸಮಸ್ಯೆಗಳನ್ನು ಅರಿತುಕೊಂಡು ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದು ಅವರು ಕರೆ ನೀಡಿದರು.

ಸಂಸದೀಯ ಸಮಿತಿಗಳು ಕಿರು ಸಂಸತ್ತುಗಳಂತೆ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರು ಎದುರಿಸುತ್ತಿರುವ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಹತ್ವದ ಶಿಫಾರಸುಗಳನ್ನು ಸರಕಾರಕ್ಕೆ ಸಲ್ಲಿಸಿವೆ. ಎಐ ಮತ್ತು ತಂತ್ರಜ್ಞಾನದ ನೆರವಿನಿಂದ ಈ ಸಮಿತಿಗಳ ಮೇಲ್ವಿಚಾರಣೆ ಹಾಗೂ ಪರಿಶೀಲನಾ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಬಹುದು. ಈ ನಿಟ್ಟಿನಲ್ಲಿ ಮಹಿಳಾ ಸಂಸದರು ಮತ್ತು ಶಾಸಕರಿಗೆ ಎಐ ಹಾಗೂ ತಂತ್ರಜ್ಞಾನದ ಬಳಕೆಯ ಕುರಿತು ವಿಶೇಷ ಅಧಿವೇಶನ ಆಯೋಜಿಸಲಾಗುವುದು ಎಂದು ಸ್ಪೀಕರ್ ತಿಳಿಸಿದರು.

ಮಹಿಳಾ ಜನಪ್ರತಿನಿಧಿಗಳ ಸಾಮಥ್ರ್ಯ ವೃದ್ಧಿಗೆ ಸಾಂಸ್ಥಿಕ ಚೌಕಟ್ಟು: ಪಂಚಾಯಿತಿಗಳು, ನಗರ ಸ್ಥಳೀಯ ಸಂಸ್ಥೆಗಳು, ರಾಜ್ಯ ವಿಧಾನಸಭೆಗಳು ಮತ್ತು ಸಂಸತ್ತಿನಲ್ಲಿರುವ ಮಹಿಳಾ ಜನಪ್ರತಿನಿಧಿಗಳ ಸಾಮಥ್ರ್ಯ ವೃದ್ಧಿಗೆ ಸಮಗ್ರ ಸಾಂಸ್ಥಿಕ ಚೌಕಟ್ಟು ರೂಪಿಸುವ ಅಗತ್ಯವಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮಹಿಳಾ ಅಧ್ಯಕ್ಷರು ಸೇರಿದಂತೆ ತಳಮಟ್ಟದ ಜನಪ್ರತಿನಿಧಿಗಳಿಗೆ ಎಐ, ತಂತ್ರಜ್ಞಾನ ಹಾಗೂ ಡಿಜಿಟಲ್ ವೇದಿಕೆಗಳ ಪರಿಣಾಮಕಾರಿ ಬಳಕೆಯಲ್ಲಿ ತರಬೇತಿ ನೀಡಬೇಕು. ಸಾರ್ವಜನಿಕರೊಂದಿಗೆ ಸಂವಹನ, ಯೋಜನೆಗಳ ಮೇಲ್ವಿಚಾರಣೆ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸಲು ಈ ಕ್ರಮ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅನುಭವ ಹೊಂದಿರುವ ಮಹಿಳಾ ಶಾಸಕರು ಮತ್ತು ಸಂಸದರು ಹೊಸ ತಲೆಮಾರಿನ ಮಹಿಳಾ ನಾಯಕರಿಗೆ ಮಾರ್ಗದರ್ಶನ ನೀಡುವ ಮೂಲಕ ಅವರ ನಾಯಕತ್ವ ಮತ್ತು ಶಾಸಕಾಂಗ ಕಾರ್ಯನಿರ್ವಹಣೆಯ ಸಾಮಥ್ರ್ಯವನ್ನು ಬಲಪಡಿಸಬೇಕು. ಸ್ವಾತಂತ್ರ್ಯ ಹೋರಾಟದಿಂದ ರಾಷ್ಟ್ರ ನಿರ್ಮಾಣದವರೆಗೆ ಮಹಿಳೆಯರ ಕೊಡುಗೆ ಮಹತ್ವದ್ದಾಗಿದೆ. ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ಉದ್ಯಮಶೀಲತೆ, ಕ್ರೀಡೆ, ರಕ್ಷಣಾ ಕ್ಷೇತ್ರ, ಬಾಹ್ಯಾಕಾಶ ಮತ್ತು ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ನಾಯಕತ್ವ ವಹಿಸುತ್ತಿದ್ದಾರೆ. ಮಹಿಳೆಯರ ಡಿಜಿಟಲ್ ಸಬಲೀಕರಣದ ಜೊತೆಗೆ ಸುರಕ್ಷಿತ ಡಿಜಿಟಲ್ ಪರಿಸರ ನಿರ್ಮಾಣವೂ ಮುಖ್ಯವಾಗಿದೆ ಎಂದು ಓಂ ಬಿರ್ಲಾ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯಸಭೆಯ ಉಪಸಭಾಪತಿ ಹರಿವಂಶ್, ವಿಧಾನಸಭೆಯ ಸ್ಪೀಕರ್ ಜಿ.ಎಸ್.ಪಾಟೀಲ್ ಮಾತನಾಡಿದರು. ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ಸ್ವಾಗತ ಭಾಷಣ ಮಾಡಿದರು. ಉಪ ಸಭಾಪತಿ ಡಾ.ಉಮಾಶ್ರೀ ವಂದನಾರ್ಪಣೆ ನೆರವೇರಿಸಿದರು.

Tags

CommonwealthConference
share
ಅಮ್ಜದ್ ಖಾನ್ ಎಂ./ವಾರ್ತಾಭಾರತಿ
ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X