ಕೋಮುದ್ವೇಷ ಭಾಷಣ ಆರೋಪ: ಭರತ್ ಕುಮ್ಡೇಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಭರತ್ ಕುಮ್ಡೇಲ್
ಬೆಂಗಳೂರು : ಕೋಮುದ್ವೇಷ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಬಿ.ಭರತ್ ರಾಜ್ ಅಲಿಯಾಸ್ ಭರತ್ ಕುಮ್ಡೇಲ್ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ.
ತನ್ನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಹಾಗೂ ದೂರನ್ನು ರದ್ದು ಕೋರಿ ಭರತ್ ಕುಮ್ಡೇಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ ನೀಡಿದೆ. ಇದರಿಂದ ಭರತ್ ಕುಮ್ಡೇಲ್ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ವಿಚಾರಣೆಯ ವೇಳೆ ಅರ್ಜಿದಾರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಎಫ್ಐಆರ್ಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಆಲಿಸಿದ ಪೀಠ, ಮುಂದಿನ ವಿಚಾರಣೆಯವರಿಗೆ ಪೋಲಿಸ್ ಇಲಾಖೆ ಬಂಧನ ಸಹಿತ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಅಲ್ಲದೆ, ವಿಚಾರಣೆಗೆ ಸಹಕರಿಸಲು ಅರ್ಜಿದಾರರಿಗೆ ಸೂಚನೆ ನೀಡಿ ಆದೇಶಿದೆ.
Next Story





