ಬೆಂಗಳೂರು ಕಾಲ್ತುಳಿತ ಪ್ರಕರಣ | ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ 25 ಲಕ್ಷ ರೂ.ಗಳಿಗೆ ಹೆಚ್ಚಳ : ಸಿಎಂ ಆದೇಶ

ಸಿದ್ದರಾಮಯ್ಯ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರಕಾರ ಘೋಷಿಸಿತ್ತು.
ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.
Next Story





