Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣೆಗೆ ಸ್ಪರ್ಧೆ: ‘ಆಸ್ತಿ ವಿವರ...

ಚುನಾವಣೆಗೆ ಸ್ಪರ್ಧೆ: ‘ಆಸ್ತಿ ವಿವರ ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ’ ಎಂದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ11 Aug 2023 11:53 PM IST
share
ಚುನಾವಣೆಗೆ ಸ್ಪರ್ಧೆ: ‘ಆಸ್ತಿ ವಿವರ ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ’ ಎಂದ ಹೈಕೋರ್ಟ್

ಬೆಂಗಳೂರು, ಆ.11: ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಮರೆಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಸಮವಾಗಲಿದ್ದು, ಅನರ್ಹತೆಗೂ ಕಾರಣವಾಗಲಿದೆ ಎಂದು ಕಲಬುರಗಿಯ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಸಂಬಂಧ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮ ಪಂಚಾಯಿತಿ ಸದಸ್ಯೆ ಅಬೀದಾ ಬೇಗಂ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ನ್ಯಾಯಪೀಠ, ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆ 1993ರ ಅನ್ವಯ ಅಭ್ಯರ್ಥಿ ಆಸ್ತಿ ವಿವರ ಸಲ್ಲಿಸದೇ ಇರುವುದು ಸೆಕ್ಷನ್ 9(1)(ಬಿ) ಪ್ರಕಾರ ಅನರ್ಹತೆಗೆ ದಾರಿ ಮಾಡಿಕೊಡಲಿದೆ ಎಂಬುದಾಗಿ ಪೀಠ ತಿಳಿಸಿದೆ.

ಪ್ರಸ್ತುತದ ಪ್ರಕರಣದಲ್ಲಿ ಮೂಲ ಅರ್ಜಿದಾರರು ಗೆದ್ದ ಅಭ್ಯರ್ಥಿಯ ಆಯ್ಕೆಯನ್ನು ಅಸಿಂಧುಗೊಳಿಸುವುದು ಮಾತ್ರವಲ್ಲದೆ, ತಮ್ಮನ್ನು ವಿಜಯಿ ಎಂದು ಘೋಷಿಸುವಂತೆ ಕೋರಿದ್ದಾರೆ. ಹೀಗಾಗಿ, ಎಲ್ಲ ಸ್ಪರ್ಧಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಬೇಕಿತ್ತು. ಅವರ ಉಪಸ್ಥಿತಿಯಲ್ಲಿಯೇ ಯಾರು ವಿಜಯಿ ಎಂದು ಘೋಷಿಸಬೇಕಾಗುತ್ತದೆ. ಇಬ್ಬರೇ ಅಭ್ಯರ್ಥಿಗಳಿದ್ದಾಗ ಒಬ್ಬ ಅಭ್ಯರ್ಥಿ ಅನರ್ಹ ಎಂದು ಘೋಷಿಸಿದರೆ, ಸಹಜವಾಗಿಯೇ ಮತ್ತೊಬ್ಬರು ಅರ್ಹರು ಅಥವಾ ವಿಜಯಿಯಾಗುತ್ತಾರೆ. ಆದರೆ, ಈ ಪ್ರಕರಣದಲ್ಲಿ ಇತರೆ ಸ್ಪರ್ಧಿಗಳಿದ್ದ ಕಾರಣ, ಯಾರು ವಿಜಯಿ ಎಂದು ನಿರ್ಣಯಿಸುವುದು ಕಷ್ಟಕರ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣವೇನು?: ಅಬೀದಾ ಬೇಗಂ ಅವರು ಚುನಾವಣೆ ನಂತರ ತಮ್ಮ ಹಾಗೂ ಅವರ ಪತಿಯ ಆಸ್ತಿ ವಿವರವನ್ನು ಸಲ್ಲಿಸಿಲ್ಲ. ಹೀಗಾಗಿ, ಅವರನ್ನು ಅನರ್ಹಗೊಳಿಸಬೇಕು ಎಂದು ಮೊಹಮ್ಮದ್ ಇಸ್ಮಾಯಿಲ್ ನ್ಯಾಯಾಲಯದಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಬೇಗಂ ಆಯ್ಕೆ ಅಸಿಂಧುಗೊಳಿಸಿ ತಮ್ಮನ್ನು ಆಯ್ಕೆಯಾಗಿದ್ದೇವೆಂದು ಘೋಷಿಸುವಂತೆ ಕೋರಿದ್ದರು.

ಅದರಂತೆ ಶಹಾಪೂರ ಜೆಎಫ್‍ಎಂಸಿ ನ್ಯಾಯಾಲಯ 2022ರ ಅ. 31ರಂದು ಅಬೀದಾ ಬೇಗಂ ಆಯ್ಕೆ ರದ್ದುಗೊಳಿಸಿದ್ದರು. ಇದನ್ನು ಪ್ರಶ್ನಿಸಿದ್ದ ಬೇಗಂ, ಇಸ್ಮಾಯಿಲ್ ತಮ್ಮ ಅರ್ಜಿಯಲ್ಲಿ ಎಲ್ಲ ಸ್ಪರ್ಧಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಿರಲಿಲ್ಲ. ಇದು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆ ಸೆಕ್ಷನ್ 15 (2)(ಎ)ಗೆ ವಿರುದ್ಧವಾಗಿದೆ. ಆಸ್ತಿ ವಿವರ ಸಲ್ಲಿಸದೇ ಇರುವುದು ಭ್ರಷ್ಟಾಚಾರವಾಗುವುದಿಲ್ಲ ಮತ್ತು ಅದೇ ಕಾರಣಕ್ಕೆ ಅನರ್ಹಗೊಳಿಸಲಾಗದು ಎಂದು ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X